ಕಾಂಗ್ರೆಸ್ ಸರ್ಕಾರ ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡುತ್ತಿದ್ದರೂ, ಕಾಂಗ್ರೆಸ್ ನಾಯಕಿ ವಿದ್ಯುತ್ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾರೆ.
ಚಿಕ್ಕಮಗಳೂರು (ಆ.20): ರಾಜ್ಯದಲ್ಲಿ ಪಂಚ ಗ್ಯಾರಂಟಿಗಳ ಭರವಸೆಯನ್ನು ನೀಡಿ ಬರೋಬ್ಬರಿ 135 ಸ್ಥಾನಗಳನ್ನು ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದುಕೊಂಡಿದೆ. ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ ಎಲ್ಲ ಮನೆಗಳಿಗೂ 200 ಯೂನಿಟ್ ವಿದ್ಯುತ್ ಉಚಿತ ನೀಡಿದರೂ, ಇಲ್ಲೊಬ್ಬ ಕಾಂಗ್ರೆಸ್ ನಾಯಕಿ ಜೊತೆಗೆ ಗ್ರಾಮ ಪಂಚಾಯಿತಿ ಸದಸ್ಯೆ ವಿದ್ಯುತ್ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾಳೆ.
ಸರ್ಕಾರದಿಂದ ರಾಜ್ಯದ ಎಲ್ಲ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪ್ರತಿ ಮನೆಗೆ ತಲಾ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ, ಸರ್ಕಾರದಿಂದ ಉಚಿತವಾಗಿ ಕೊಡುತ್ತಿರುವ ವಿದ್ಯುತ್ ಯೋಜನೆಯನ್ನು ಸ್ವತಃ ಕಾಂಗ್ರೆಸ್ ನಾಯಕಿಯೇ ದುರುಪಯೋಗ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
undefined
ಈ ಕಾಂಗ್ರೆಸ್ ನಾಯಕಿ ಕೇವಲ ಕಾರ್ಯಕರ್ತೆಯಲ್ಲಿ, ಕಾಂಗ್ರೆಸ್ ಪಕ್ಷದ ಅಡಿಯಲ್ಲಿ ಗ್ರಾಮ ಪಂಚಾಯಿತಿಗೆ ಆಯ್ಕೆಯಾದ ಜನಪ್ರತಿನಿಧಿ ಆಗಿದ್ದಾಳೆ. ಸರ್ಕಾರದ ಭಾಗವಾಗಿರುವ ಗ್ರಾಮ ಪಂಚಾಯಿತಿ ಸದಸ್ಯೆಯಿಂದಲೇ ಸರ್ಕಾರಕ್ಕೆ ವಂಚನೆ ಆಗುತ್ತಿರುವ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿಯೇ ವಿದ್ಯತ್ ಇಲಾಖೆಯಿಂದ ದಾಳಿ ಮಾಡಿ ಕಾಂಗ್ರೆಸ್ ನಾಯಕಿಗೆ ದಂಡವನ್ನು ವಿಧಿಸಿದ್ದಾರೆ.
ಸೆಕ್ಸ್‌ಗೆ ಒಪ್ಪಿದ್ರಷ್ಟೇ ಜೂನಿಯರ್‌ಗಳಿಗೆ ಮಲಯಾಳಂ ಸಿನಿಮಾಗಳಲ್ಲಿ ಚಾನ್ಸ್..!
ಸರ್ಕಾರದಿಂದ ಉಚಿತವಾಗಿ ವಿದ್ಯುತ್ ಕೊಟ್ಟರೂ ಕರೆಂಟ್ ಕದ್ದ ಮಹಿಳೆ ಚಿಕ್ಕಮಗಳೂರು ಜಿಲ್ಲೆ ನಾರಾಯಣಪುರ ತಾಲೂಕು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಆಶಾ ನಾರಾಯಣ್. ಇವರು ದೇವದಾನ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದುಕೊಂಡು ತಾಲೂಕಿನಲ್ಲಿ ಹೆಚ್ಚು ಪ್ರಭಾವವನ್ನೂ ಹೊಂದಿದ್ದಾರೆ. ಆದರೆ, ಈಗ ಅಕ್ರಮವಾಗಿ ಕರೆಂಟ್ ಕದ್ದು ಸಿಕ್ಕಿಬಿದ್ದಿದ್ದಾರೆ. ತಾವು ವಾಸವಾಗಿರುವ ಕಡಬಗೆರೆಯಲ್ಲಿ ಮೂರು ಮನೆಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕಡಬಗೆರೆ ಮನೆ ಮೇಲೆ ಮೆಸ್ಕಾಂ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದು ಕಳ್ಳತನ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಪ್ರಾಸಿಕ್ಯೂಷನ್ ಎದುರಿಸಲು 3 ರಣತಂತ್ರ ರೂಪಿಸಿದ ಸಿಎಂ ಸಿದ್ದರಾಮಯ್ಯ!
ಆಶಾ ನಾರಾಯಣ್ ಅವರು ಗ್ರಾ.ಪಂ. ಸದಸ್ಯೆ ಆಗಿರುವುದರಿಂದ ಸ್ಥಳೀಯ ಅಧಿಕಾರಿಗಳ ಕ್ರಮಕ್ಕೆ ಬಗ್ಗದ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಮೆಸ್ಕಾಂ ಅಧಿಕಾರಿಗಳ ತಂಡವು ಆಗಮಿಸಿ ಪರಿಶೀಲನೆ ಮಾಡಿದೆ. ಈ ವೇಳೆ ಅಕ್ರಮ ವಿದ್ಯುತ್ ಕಳ್ಳತನ ಮಾಡಿರುವುದು ಬೆಳಕಿಗೆ ಬರುತ್ತಿದ್ದಂತೆ 1 ಲಕ್ಷ ರೂ. ದಂಡವನ್ನು ವಿಧಿಸಿದ್ದಾರೆ. ಸ್ಥಳೀಯ ಅಧಿಕಾರಿಗಳ ಮೇಲೆ ಪ್ರಭಾವ ಬಳಿಸಿ ತಪ್ಪಿಸಿಕೊಂಡರೂ, ಅಕ್ರಮ ವಿದ್ಯುತ್ ಕಳ್ಳತನ ಮಾಡುತ್ತಿದ್ದ ಕಾಂಗ್ರೆಸ್ ನಾಯಕಿಗೆ ಮಂಗಳೂರು ಅಧಿಕಾರಿಗಳು ತಕ್ಕ ಪಾಠವನ್ನೇ ಕಲಿಸಿದ್ದಾರೆ. ಆದರೆ, ಈ ವಿಚಾರ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇನ್ನು ಕಾಂಗ್ರೆಸ್ ಸರ್ಕಾರದಿಂದಲೇ ಗ್ಯಾರಂಟಿ ಯೋಜನೆಗಳನ್ನು ದುರುಪಯೋಗ ಮಾಡಿಕೊಂಡಿರುವುದಕ್ಕೆ ಟೀಕೆಗಳು ವ್ಯಕ್ತವಾಗುತ್ತಿವೆ.