ಕೈ ನಾಯಕಿ ಮರಳಿ ಜೆಡಿಎಸ್ ಸೇರ್ಪಡೆ : ಚುನಾವಣೆ ಬೆನ್ನಲ್ಲೇ ಶಾಕ್

By Kannadaprabha NewsFirst Published Dec 10, 2020, 9:48 AM IST
Highlights

ರಾಜ್ಯದಲ್ಲಿ ಚುನಾವಣಾ ಅಬ್ಬರ ಜೋರಾಗಿರುವ ಬೆನ್ನಲ್ಲೇ  ಪಕ್ಷಾಂತರ ಪರ್ವವೂ ಕೂಡ ಹೆಚ್ಚಾಗಿದೆ. ಕಾಂಗ್ರೆಸ್ ನಾಯಕಿ ಇದೀಗ ಮರಳಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ

ಪಿರಿಯಾಪಟ್ಟಣ (ಡಿ.10):  ಜಿಪಂ ಮಾಜಿ ಉಪಾಧ್ಯಕ್ಷೆ ಸುಚಿತ್ರ ವಿನೋದ್‌ ಮತ್ತು ಬೆಂಬಲಿಗರು ಕಾಂಗ್ರೆಸ್‌ ತೊರೆದು ಶಾಸಕ ಕೆ. ಮಹದೇವ್‌ ನೇತೃತ್ವದಲ್ಲಿ ಜೆಡಿಎಸ್‌ಗೆ ಸೇರ್ಪಡೆಯಾದರು.

ತಾಲೂಕಿನ ಹಿಟ್ನೆಹೆಬ್ಬಾಗಿಲು ಗ್ರಾಮದ ಸುಚಿತ್ರ ವಿನೋದ್‌ ಅವರ ಮನೆಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮ ನಂತರ ಶಾಸಕ ಕೆ. ಮಹದೇವ್‌ ಮಾತನಾಡಿ, ತಾಲೂಕಿನ ಅಭಿವೃದ್ಧಿ ದೃಷ್ಟಿಯಲ್ಲಿ ಜೆಡಿಎಸ್‌ ತತ್ವ ಸಿದ್ಧಾಂತ ಒಪ್ಪಿ ಬರುವವರಿಗೆ ಸದಾ ಸ್ವಾಗತವಿದೆ, ಹಿಟ್ನೆ ಹೆಬ್ಬಾಗಿಲು ಗ್ರಾಮದ ಮುಖಂಡ ವಿನೋದ್‌ ಮತ್ತು ಜಿಪಂ ಮಾಜಿ ಉಪಾಧ್ಯಕ್ಷೆ ಸುಚಿತ್ರ ಅವರು ಈ ಹಿಂದೆ ಜೆಡಿಎಸ್‌ನಲ್ಲಿದ್ದು ಕೆಲಕಾರಣಗಳಿಂದ ಸಕ್ರಿಯ ರಾಜಕಾರಣದಿಂದ ದೂರವುಳಿದಿದ್ದರು, ಗ್ರಾಮದ ಅಭಿವೃದ್ಧಿಗಾಗಿ ಮತ್ತೆ ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್‌ ಸೇರ್ಪಡೆ ಆಗುತ್ತಿರುವುದು ಪಕ್ಷಕ್ಕೆ ಬಲ ಬಂದಂತಾಗಿದೆ ಎಂದರು.

ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ, ಕೈಗೆ ದೊಡ್ಡ ಶಕ್ತಿ ಬಂದಾಂತಾಗಿದೆ ಎಂದ ಡಿಕೆಶಿ ...

ಎಲ್ಲ ಗ್ರಾಮಗಳ ಅಭಿವೃದ್ಧಿ ಏಕಕಾಲದಲ್ಲಿ ಮಾಡಲು ಸಾಧ್ಯವಿಲ್ಲ, ಕಾರ್ಯಕರ್ತರು ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿ ಸಮಸ್ಯೆಗಳನ್ನು ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದರು. ಮುಖಂಡರಾದ ಶಿವಪ್ಪ, ಸುರೇಶ್‌, ನಾಗಮ್ಮ ಸೇರಿದಂತೆ ನೂರಾರು ಮಂದಿ ಜೆಡಿಎಸ್‌ ಸೇರ್ಪಡೆಯಾದರು.

ಜಿಲ್ಲಾ ಯೂನಿಯನ್‌ ಬ್ಯಾಂಕ್‌ ನಿರ್ದೇಶಕ ಹರೀಶ್‌, ಪಿಎಸಿಸಿಎಸ್‌ ಮಾಜಿ ಅಧ್ಯಕ್ಷ ರವಿ, ಉಪಾಧ್ಯಕ್ಷೆ ಜ್ಯೋತಿ ಪ್ರಕಾಶ್‌, ನಿರ್ದೇಶಕರಾದ ಎಚ್‌.ಎಸ್‌. ಮಹದೇವ್‌, ಶಂಕರ್‌, ಮುತ್ತೇಗೌಡ, ಕುಮಾರ್‌, ಗಾಯತ್ರಮ್ಮ, ಮುಖಂಡರಾದ ರಘುನಾಥ್‌, ನಾಗೇಂದ್ರ, ಜವರೇಗೌಡ, ಮಾದಣ್ಣ, ರಾಜಣ್ಣ, ಶ್ರೀಪಾಲ್, ನಾಗರಾಜ, ಕೃಷ್ಣೇಗೌಡ ಮತ್ತು ಕಾರ್ಯಕರ್ತರು ಇದ್ದರು.

click me!