ಕುಮಾರಸ್ವಾಮಿಗೆ ಕನಿಕರವೇ ಇಲ್ಲ: ಜಮೀರ್‌ ಅಹ್ಮದ್‌

Kannadaprabha News   | Asianet News
Published : Apr 15, 2021, 07:53 AM IST
ಕುಮಾರಸ್ವಾಮಿಗೆ ಕನಿಕರವೇ ಇಲ್ಲ: ಜಮೀರ್‌ ಅಹ್ಮದ್‌

ಸಾರಾಂಶ

ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಜೆಡಿಎಸ್‌ ತನ್ನ ಅಭ್ಯರ್ಥಿ ಹಾಕಲ್ಲ ಎಂದು ಹೇಳಿಕೊಂಡಿತ್ತು. ಆದರೆ, ಕುಮಾರಸ್ವಾಮಿ ಬಿಜೆಪಿಯಿಂದ ಹಣ ಪಡೆದು ಅಭ್ಯರ್ಥಿ ಹಾಕಿದ್ದಾರೆ ಎಂದು ಕಿಡಿಕಾರಿದ ಜಮೀರ್‌ ಅಹ್ಮದ್‌ 

ಬಸವಕಲ್ಯಾಣ(ಏ.15): ಮಾಜಿ ಶಾಸಕ ದಿ. ನಾರಾಯಣರಾವ್‌ ಅವರಿಗೆ ಬಿಜೆಪಿ ಗಾಳ ಹಾಕಿದರೂ ಅವರು ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪರವಾಗಿ ನಿಂತಿದ್ದರು. ಆದರೆ, ಈಗ ಅವರ ಪತ್ನಿ ವಿರುದ್ಧವೇ ಜೆಡಿಎಸ್‌ ತನ್ನ ಅಭ್ಯರ್ಥಿಯನ್ನು ನಿಲ್ಲಿಸಿದೆ. ಕುಮಾರಸ್ವಾಮಿ ಅವರಿಗೆ ಕನಿಕರ ಇಲ್ಲ ಎಂದು ಮಾಜಿ ಸಚಿವ ಜಮೀರ್‌ ಅಹ್ಮದ್‌ ಆರೋಪಿಸಿದ್ದಾರೆ. 

ನಗರದ ಕಾಂಗ್ರೆಸ್‌ ಕಾರ್ಯಾಲಯದಲ್ಲಿ ಬುಧವಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಜೆಡಿಎಸ್‌ ತನ್ನ ಅಭ್ಯರ್ಥಿ ಹಾಕಲ್ಲ ಎಂದು ಹೇಳಿಕೊಂಡಿತ್ತು. ಆದರೆ, ಕುಮಾರಸ್ವಾಮಿ ಬಿಜೆಪಿಯಿಂದ ಹಣ ಪಡೆದು ಅಭ್ಯರ್ಥಿ ಹಾಕಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಮನಸೋಇಚ್ಛೆ ವಾಗ್ದಾಳಿ!

ನಾರಾಯಣರಾವ್‌ ಅವರು ಶಾಸಕರಾಗಿದ್ದ ಅವಧಿಯಲ್ಲಿ ಎಲ್ಲ ಸಮುದಾಯಗಳನ್ನು ವಿಶ್ವಾಸದಿಂದ ಕೊಂಡೊಯ್ಯುತ್ತಿದ್ದರು. ಇದೇ ಅವರ ಪತ್ನಿ ಮಾಲಾ ನಾರಾಯಣರಾವ್‌ ಅವರ ಗೆಲುವಿಗೆ ಪೂರಕವಾಗಲಿದೆ. ನಾನು ಅನೇಕ ಕಡೆ ಬಿರುಸಿನ ಪ್ರಚಾರ ಕೈಗೊಂಡಿದ್ದು, ಮಾಲಾ ಅವರಿಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ ಎಂದು ತಿಳಿಸಿದರು.
 

PREV
click me!

Recommended Stories

4,808 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು