ಕಾಂಗ್ರೆಸ್‌ನಲ್ಲಿ ಮತ್ತೆ ಭಿನ್ನಮತ ಸ್ಫೋಟ..!

Kannadaprabha News   | Asianet News
Published : Aug 01, 2021, 10:39 AM ISTUpdated : Aug 01, 2021, 10:45 AM IST
ಕಾಂಗ್ರೆಸ್‌ನಲ್ಲಿ ಮತ್ತೆ ಭಿನ್ನಮತ ಸ್ಫೋಟ..!

ಸಾರಾಂಶ

*  ಮಹಾನಗರ ಜಿಲ್ಲಾ ಘಟಕಕ್ಕೆ ವರದಿ ಕೇಳಿದ ಕೆಪಿಸಿಸಿ * ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದ ವಿಧಾನಸಭೆ ಟಿಕೆಟ್‌ಗಾಗಿ ಈಗಿನಿಂದಲೇ ಕಿತ್ತಾಟ * ಡಿಕೆಶಿ ಸಮ್ಮುಖದಲ್ಲೇ ಕಾಂಗ್ರೆಸ್ಸಿಗರ ಕಿತ್ತಾಟ  

ಹುಬ್ಬಳ್ಳಿ(ಆ.01): ನಗರದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್‌ ಆಂತರಿಕ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಮ್ಮುಖದಲ್ಲೇ ಸ್ಥಳೀಯ ಮುಖಂಡರು ಪರಸ್ಪರ ಕಿತ್ತಾಡಿಕೊಂಡಿರುವ ಘಟನೆಯ ವಿಡಿಯೋ ಇದೀಗ ವೈರಲ್‌ ಆಗಿದೆ.

ಸಭೆಯಲ್ಲಿ ವಿದ್ಯಾನಗರ ಬ್ಲಾಕ್‌ ಅಧ್ಯಕ್ಷ ರಜತ್‌ ಉಳ್ಳಾಗಡ್ಡಿಮಠ ವಿರುದ್ಧ ಮಹಾನಗರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗಿರೀಶ ಗದಿಗೆಪ್ಪಗೌಡರ ಹರಿಹಾಯ್ದರು. ರಜತ್‌ ಅವರು ಡಿ.ಕೆ.ಶಿವಕುಮಾರ್‌, ಲಕ್ಷ್ಮೀ ಹೆಬ್ಬಾಳಕರ್‌ ನನ್ನ ಜೇಬಲ್ಲಿದ್ದು ಈ ಸಲ ತಮಗೆ ಟಿಕೆಟ್‌, ಪಾಲಿಕೆಯಲ್ಲೂ ತಮಗೆ ಬೇಕಾದವರಿಗೆ ಟಿಕೆಟ್‌ ಎಂದೆಲ್ಲ ಹೇಳಿಕೊಂಡು ತಿರುಗುತ್ತಾರೆ ಎಂದು ಏರುಧ್ವನಿಯಲ್ಲಿ ಆರೋಪಿಸಿದರು. ಇದು ಗೊಂದಲಕ್ಕೆ ಕಾರಣವಾಯಿತು. ಈ ಘಟನೆಗೆ ಸಂಬಂಧಪಟ್ಟಂತೆ ಇದೀಗ ಕೆಪಿಸಿಸಿ ಮಹಾನಗರ ಜಿಲ್ಲಾ ಘಟಕಕ್ಕೆ ವರದಿ ಕೇಳಿದೆ.

ಬಿಜೆಪಿ ಶಕ್ತಿ ಕೇಂದ್ರ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ಒಗ್ಗಟ್ಟು ಪ್ರದರ್ಶನ

ಈ ಮೂಲಕ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದ ವಿಧಾನಸಭೆ ಟಿಕೆಟ್‌ಗಾಗಿ ಈಗಿನಿಂದಲೇ ಕಿತ್ತಾಟ ಶುರುವಾದಂತಾಗಿದ್ದು ಸ್ಥಳೀಯ ಕಾಂಗ್ರೆಸ್‌ನಲ್ಲಿನ ಭಿನ್ನಮತ ಮತ್ತೆ ಬೀದಿರಂಪವಾದಂತಾಗಿದೆ.
 

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!