ಸೋಮಶೇಖರ್ ರೆಡ್ಡಿ ಬಂಧಿಸಲು ಆಗ್ರಹ : ಕೈ ಮುಖಂಡರು ಅರೆಸ್ಟ್

By Suvarna News  |  First Published Jan 14, 2020, 1:28 PM IST

ಪ್ರಚೋದನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಬಂಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದು, ಈ ವೇಳೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. 


ಬಳ್ಳಾರಿ [ಜ. 14]: ಬಳ್ಳಾರಿ ಗ್ರಾಮಾಂತರ ಶಾಸಕ ಸೋಮಶೇಖರ್ ರೆಡ್ಡಿ ಬಂಧಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದಿಂದ ಪ್ರತಿಭಟನೆ ನಡೆಸಲಾಗಿದೆ. 

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದ ಪ್ರತಿಭಟನೆ ನಡೆಸಿದ್ದು, ಹಲವು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.  

Tap to resize

Latest Videos

ಅಲ್ಪ ಸಂಖ್ಯಾತ ಸಮುದಾಯದ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಸೋಮಶೇಖರ್ ರೆಡ್ಡಿಯನ್ನು ಬಂಧಿಸಬೇಕು ಎಂದು ಈ ವೇಳೆ ಆಗ್ರಹಿಸಿದ್ದು,  ಈ ವೇಳೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ.

'ಎಲ್ರೀ ಖಡ್ಗ, ತಗೊಂಡ್ ಬನ್ರಿ, ಉಫ್ ಎಂದು ಊದಿ ಬಿಡಿ' ರೆಡ್ಡಿನಾಡಿನಲ್ಲಿ ಖಾನ್ ಘರ್ಜನೆ!... 

ಬಳ್ಳಾರಿ ಗ್ರಾಮೀಣ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ದೂರು ದಾಖಲಾಗಿದ್ದರೂ ಯಾವುದೇ ರೀತಿಯ ಕ್ರಮ ಕೈಗೊಳ್ಳಲಾಗಿಲ್ಲ. ಶಾಸಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. 

ಸೋಮಶೇಖರ ರೆಡ್ಡಿ ಮನೆ ಮುಂದೆ ಧರಣಿ: ಬಳ್ಳಾರಿ ಎಸ್‌ಪಿಗೆ ಜಮೀರ್‌ ಪತ್ರ!.

ಇನ್ನು ಪ್ರತಿಭಟನಾಕಾರರು ಶಿವಮೊಗ್ಗದಲ್ಲಿರುವ ಸಿಎಂ ಯಡಿಯೂರಪ್ಪ ನಿವಾಸಕ್ಕೂ ಅಲ್ಪಸಂಖ್ಯಾತ ಘಟಕದ ಮುಖಂಡರು ಮುತ್ತಿಗೆ ಹಾಕಲು ಸಿದ್ಧತೆ ನಡೆಸಿದ್ದ ವೇಳೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಇದನ್ನೂ ನೋಡಿ :  ರೆಡ್ಡಿ ವಿರುದ್ಧ ಪ್ರತಿಭಟಿಸಲು ಹೋಗಿ ಅರೆಸ್ಟ್ ಆಗಿದ್ದ ಜಮೀರ್ ಹೇಳಿದ್ದಿಷ್ಟು !

"

click me!