ಆ್ಯಂಬುಲೆನ್ಸ್‌ ಚಾಲಾಯಿಸಿದ ಶಾಸಕಿ ಅಂಜಲಿ

Kannadaprabha News   | others
Published : Jun 12, 2021, 07:04 AM IST
ಆ್ಯಂಬುಲೆನ್ಸ್‌ ಚಾಲಾಯಿಸಿದ ಶಾಸಕಿ ಅಂಜಲಿ

ಸಾರಾಂಶ

ಸತತ ಕೊರೋನಾ ಸೋಂಕಿತರ ನೆರವಿಗೆ ನಿಂತಿರುವ ಹಲವು ರಾಜಕಾರಣಿಗಳು ಸ್ವತಃ ಆಂಬುಲೆನ್ಸ್ ಚಲಾಯಿಸಿದ ಶಾಸಕಿ ಅಂಜಲಿ ನಿಂಬಾಳ್ಕರ್ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಶುಕ್ರವಾರ ಆಂಬುಲೆನ್ಸ್ ಓಡಿಸಿದ ಶಾಸಕಿ

ಬೆಳಗಾವಿ (ಜೂ.12): ಹಲವು ರಾಜಕೀಯ ಮುಖಂಡರು ಕೊರೋನಾ ಸೋಂಕಿತರ ನೆರವಿಗೆ ನಿಂತಿದ್ದಾರೆ. ಇದೀಗ ಕಾಂಗ್ರೆಸ್ ನಾಯಕಿ ಅಂಜಲಿ ನಿಂಬಾಲ್ಕರ್ ಸಹ ಇದೇ ರೀತಿ ನೆರವಾಗಿದ್ದಾರೆ.

ಕಾಂಗ್ರೆಸ್‌ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್‌ ಅವರು ಸ್ವತಃ ಆ್ಯಂಬುಲೆನ್ಸ್‌ ಓಡಿಸುವ ಮೂಲಕ ಅಚ್ಚರಿ ಮೂಡಿಸಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಶುಕ್ರವಾರ ನಡೆದಿದೆ.

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ನಾಲ್ಕು ಆ್ಯಂಬುಲೆನ್ಸ್‌ಗಳನ್ನು ಸಾರ್ವಜನಿಕ ಆಸ್ಪತ್ರೆಗೆ ನೀಡುವ ಸಂದರ್ಭದಲ್ಲಿ ಅವರು ಸ್ವತಃ ಚಾಲನೆ ಮಾಡುವ ಮೂಲಕ ಎಲ್ಲರನ್ನು ಚಕಿತಗೊಳಿಸಿದರು.

ಬೆಳಗಾವಿಯಲ್ಲಿ ಸದ್ಯ ಸೋಂಕಿನ ಪ್ರಮಾಣ ಕೊಂಚ ಮಟ್ಟಿಗೆ ತಗ್ಗಿದ್ದು,  ಸೋಂಕು ನಿವಾರಣೆಗೆ ಹಲವು ಕ್ರಮ ಕೈಗೊಳ್ಳಲಾಗುತ್ತಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV
click me!

Recommended Stories

ರೈತರ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸಲು 'ಅಂತಾರಾಷ್ಟ್ರೀಯ ಸ್ಯಾಂಡ್‌ವಿಚ್ ಸ್ನಾತಕೋತ್ತರ ಕೋರ್ಸ್': ಸಿಎಂ ಸಿದ್ದರಾಮಯ್ಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್