ಆಗ ಅವರೆಲ್ಲಾ ನೆನಪಾಗಲಿಲ್ವೆ : ರಮೇಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮೀ ಗರಂ

By Asianet KannadaFirst Published Dec 31, 2019, 11:39 AM IST
Highlights

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಮತ್ತೊಮ್ಮೆ ರೆಬೆಲ್ ಆಗಿದ್ದಾರೆ. 

ಬೆಳಗಾವಿ [ಡಿ.31]: ಬೆಳಗಾವಿ ಮರಾಠಿಗಳ ಹಕ್ಕು ಎನ್ನುವ ರಮೇಶ್ ಜಾರಕಿಹೊಳಿಗೆ ಅಲ್ಲಿ ನಡೆದ ಚುನಾವಣೆಯಲ್ಲಿ ಅಳಿಯನನ್ನು ಕಣಕ್ಕೆ ಇಳಿಸುವಾದ ಮರಾಠಿಗರು ನೆನಪಾಗಲಿಲ್ಲವೇ ಎಂದು ಲಕ್ಷ್ಮೀ ಜಾರಕಿಹೊಳಿ ಹೇಳಿದ್ದಾರೆ. 

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಗೋಕಾಕ್ ಶಾಸಕ ರಮೇಶ್  ಜಾರಕಿಹೊಳಿಗೆ ಟಾಂಗ್ ನೀಡಿದ್ದಾರೆ. 

ಮಹಾರಾಷ್ಟ್ರದ ಚಂದಗಡ ಕ್ಷೇತ್ರದಲ್ಲಿ ಚುನಾವಣೆಗೆ ರಮೇಶ್ ಜಾರಕಿಹೊಳಿ ಅಳಿಯ ಅಪ್ಪಿರಾವ್ ಪಾಟೀಲ್ ಸ್ಪರ್ಧೆ ಮಾಡಿದ್ದು, ಆದರೆ ಅಲ್ಲಿ ಮರಾಠಿಗರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 

ರಮೇಶ್ ಜಾರಕಿಹೊಳಿ‌ ಅಳಿಯ ಮಹಾರಾಷ್ಟ್ರದ ಚಂದಗಡದಲ್ಲಿ ಮರಾಠಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅಷ್ಟಿದ್ದರೂ ಅಳಿಯ ಅಪ್ಪಿರಾವ್ ಪಾಟೀಲ್‌ ರನ್ನು ಚುನಾವಣೆಗೆ ನಿಲ್ಲಿಸಿದ್ದರು. ಆಗ ಮರಾಠಿಗರ ಹಕ್ಕು ಚ್ಯುತಿ ಆಗಲಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ. 

ಅಜಿತ್‌ ಪವಾರ್‌ಗೆ ಮತ್ತೆ ಡಿಸಿಎಂ ಪಟ್ಟ, ಠಾಕ್ರೆ ಪುತ್ರ ಮಂತ್ರಿ!.

ಬೆಳಗಾವಿ ತಾಲೂಕನ್ನು ರಿಪಬ್ಲಿಕ್ ಆಫ್ ಗೋಕಾಕ್ ಮಾಡಲು ಬಿಡಲ್ಲ. ಭಾಷಾ ರಾಜಕಾರಣ, ಜಾತಿ ರಾಜಕಾರಣ ಮಾಡಿಲ್ಲ ಆಸೆ ಆಮಿಷಕ್ಕೆ ನನಗೆ  ಯಾರೂ ಮತ ಹಾಕಿಲ್ಲ. ಆದರೆ ರಮೇಶ್ ಜಾರಕಿಹೊಳಿ‌ ಸ್ವಾಭಿಮಾನಿ ಮತದಾರರಿಗೆ ಅಪಮಾನ ಮಾಡಿದ್ದಾರೆ. ಮತದಾರರಲ್ಲಿ ರಮೇಶ್ ಜಾರಕಿಹೊಳಿ‌ ಕೂಡಲೇ ಕ್ಷಮೆ ಕೇಳಬೇಕು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. 
 
ರಮೇಶ್ ಜಾರಕಿಹೊಳಿ ಕೀಳು ರಾಜಕಾರಣ ಮಾಡುವುದನ್ನು ಬಿಟ್ಟು ಬಿಡಲಿ. ಜನರಲ್ಲಿ ವಿಷ ಬೀಜ ಬಿತ್ತುವುದನ್ನ  ಬಿಟ್ಟು ಕೆಲಸ ಮಾಡಲಿ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. 

 

click me!