* ನೂತನ ಸಿಎಂ ಬೊಮ್ಮಾಯಿಗೆ ಅಭಿನಂದಿಸಿದ ಮಾನೆ
* ನೀರಾವರಿ ಸೇರಿದಂತೆ ಯಾವುದೇ ಯೋಜನೆಗಳಿಗೂ ಹಣ ನೀಡದ ಕೇಂದ್ರ ಸರ್ಕಾರ
* ಸಿಎಂ ಜನಪರ ಕೆಲಸ, ಕಾರ್ಯಗಳಲ್ಲಿ ತೊಡಗುವಂತಾಗಲಿ
ಹಾನಗಲ್ಲ(ಜು.29): ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರಿಪಡಿಸಲಿ. ಭ್ರಷ್ಟಾಚಾರ, ದುರಾಡಳಿತ ಮತ್ತು ಜನರೋಧಿ ನೀತಿಗಳಿಂದ ಹಳಿ ತಪ್ಪಿರುವ ಆಡಳಿತವನ್ನು ಸರಿದಾರಿಗೆ ತರಲಿ ಎಂದು ವಿಧಾನಪರಿಷತ್ ಸದಸ್ಯ ಶ್ರೀನಿವಾಸ್ ಮಾನೆ ಆಶಿಸಿದ್ದಾರೆ.
ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿರುವ ಶ್ರೀನಿವಾಸ್ ಮಾನೆ, ಕೇಂದ್ರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯ ಆಗುತ್ತಿದೆ. ಈ ಅನ್ಯಾಯವನ್ನು ನೂತನ ಸಿಎಂ ಸರಿಪಡಿಸಲಿದ್ದಾರೆ ಎನ್ನುವ ವಿಶ್ವಾಸದೆ ಎಂದು ಹೇಳಿದ್ದಾರೆ.
undefined
ಬೊಮ್ಮಾಯಿ ಮುಖ್ಯಮಂತ್ರಿಯಾದ ಮೇಲೆ ಹೆಚ್ಚಿದ ಜನರ ನಿರೀಕ್ಷೆ..!
ನೀರಾವರಿ ಸೇರಿದಂತೆ ಯಾವುದೇ ಯೋಜನೆಗಳಿಗೂ ಹಣ ನೀಡಿಲ್ಲ. ಹೀಗಾಗಿ ಅಭಿವೃದ್ಧಿ ಕಾರ್ಯಗಳಿಗೆ ಸಂಪೂರ್ಣವಾಗಿ ಗ್ರಹಣ ಬಡಿದಿದೆ ಎಂದಿದ್ದಾರೆ. ಬೊಮ್ಮಾಯಿ ನೇತೃತ್ವದ ಸರ್ಕಾರ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಜೊತೆ ಹಾವೇರಿ, ಧಾರವಾಡ ಮತ್ತು ಗದಗ ಜಿಲ್ಲೆಗಳಿಗೆ ವಿಶೇಷ ಒತ್ತು ನೀಡಿ ಕಾರ್ಯ ನಿರ್ವಹಿಸಲಿ. ಜನಪರ ಕೆಲಸ, ಕಾರ್ಯಗಳಲ್ಲಿ ತೊಡಗುವಂತಾಗಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ.