ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಲೆ ಇದ್ದು, 150 ಸೀಟುಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಬರಲಿದೆ ಎಂದು ವರುಣ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರು : ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಲೆ ಇದ್ದು, 150 ಸೀಟುಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಬರಲಿದೆ ಎಂದು ವರುಣ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ವರುಣ ಕ್ಷೇತ್ರದ ಹಾರೋಹಳ್ಳಿ, ಲಕ್ಷಿ ್ಮೕಪುರ, ಶಿವಪುರ ಗ್ರಾಮಗಳಲ್ಲಿ ವರುಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಅವರ ಪರವಾಗಿ ಮನೆ ಮನೆಗೆ ತೆರಳಿ ಮತಯಾಚಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರಗಳು, ಹಗರಣಗಳು ಹೆಚ್ಚಾಗಿದ್ದು, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ ಎಂದು ಆರೋಪಿಸಿದರು.
undefined
ಸುಳ್ಳಿನ ಮೇಲೆ ಸುಳ್ಳನ್ನು ಹೇಳುತ್ತಾ ಕಾಲ ಕಳೆದ ಬಿಜೆಪಿ ಸರ್ಕಾರ ಸಾವಿರಾರು ಕೋಟಿ ಸಾಲ ಮಾಡಿ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದ್ದಾರೆ. ಇದರಿಂದ ಬೇಸತ್ತಿರುವ ರಾಜ್ಯದ ಜನತೆ ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಮನಸ್ಸು ಮಾಡಿದ್ದಾರೆ. ಕಾಂಗ್ರೆಸ್ ನುಡಿದಂತೆ ನಡೆದ ಪಕ್ಷವಾಗಿದೆ. ಹೀಗಾಗಿ, ಈ ಬಾರಿ ಸಿದ್ದರಾಮಯ್ಯ ಅವರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಆಯ್ಕೆ ಮಾಡಬೇಕು ಎಂದು ಅವರು ಮನವಿ ಮಾಡಿದರು.
ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ಎಂ. ರಾಮಯ್ಯ, ಜಿಪಂ ಮಾಜಿ ಸದಸ್ಯ ಕೆಂಪೀರಯ್ಯ, ತಾಪಂ ಮಾಜಿ ಅಧ್ಯಕ್ಷರಾದ ಮಂಜುಳಾ ಮಂಜುನಾಥ್, ಪುಟ್ಟಣ್ಣ, ಎಪಿಎಂಸಿ ಮಾಜಿ ಸದಸ್ಯ ಆನಂದ್, ಚಿತ್ರ ನಿರ್ಮಾಪಕ ಸಂದೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಮುದ್ದೇಗೌಡ, ಮುಖಂಡರಾದ ನಾಡನಹಳ್ಳಿ ರವಿ, ಗವಿಸಿದ್ದು, ಮೆಲ್ಲಹಳ್ಳಿ ರವಿ, ಸಿದ್ದಯ್ಯ, ಸಾಕಣ್ಣ, ಗಂಗನ ತಿಮ್ಮಣ್ಣ, ಸಕ್ಕಳ್ಳಿ ಬಸವರಾಜು, ಹೆಳವರಹುಂಡಿ ಸೋಮು, ಸಿದ್ದಯ್ಯ, ಮಹದೇವಣ್ಣ, ಗ್ರಾಪಂ ಅಧ್ಯಕ್ಷೆ ಶಾಂತಮ್ಮ ಶೇಖರ್, ಭಾಗ್ಯಮ್ಮ, ಆರೀಫ್, ಮೋಹನ್‌ಕುಮಾರ್, ಮಂಚನಹಳ್ಳಿ ರಾಘವೇಂದ್ರ, ಮೆಲ್ಲಹಳ್ಳಿ ಮಹದೇವ, ರಾಜೇಶ್, ಪುಷ್ಪ ಬೋರೇಗೌಡ ಮೊದಲಾದವರು ಇದ್ದರು.
ನಾವಿಬ್ಬರು ಒಂದೇ ಗರಡಿಯಲ್ಲಿ ಪಳಗಿದವರು
ಮೈಸೂರು(ಏ.14): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಾನು ಇಬ್ಬರು ಒಂದೇ ಗರಡಿಯಲ್ಲಿ ಪಳಗಿದವರು. ಅವರು ಎಂಥ ನಾಯಕರಾದರೂ ಇಲ್ಲಿ ನನ್ನಂತೆಯೇ ಒಬ್ಬ ಅಭ್ಯರ್ಥಿ ಅಷ್ಟೆ. ಪಕ್ಷದೊಳಗೆ ಯಾರೋ ಚಿಕ್ಕಪುಟ್ಟದಾಗಿ ಇಲ್ಲಸಲ್ಲದ್ದು ಮಾತಾಡುತ್ತಾರೆ. ಅದನ್ನು ದೊಡ್ಡದು ಮಾಡಬೇಡಿ ಎಂದು ಸಚಿವ ಹಾಗೂ ವರುಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕ್ಷೇತ್ರ ಸವಾಲು ಎಂದು ಅನ್ನಿಸುತ್ತಿಲ್ಲ. ಏಕೆಂದರೆ ನನಗೆ ಸವಾಲೇ ಗೊತ್ತಿಲ್ಲ. ಯಾರೋ ಬಾಯಿ ಬಡಿದುಕೊಂಡರೆ ಅದರಿಂದ ಸೋಮಣ್ಣನಿಗೆ ಏನೂ ಇಲ್ಲ. ಸೋಮಣ್ಣ ಸೋಮಣ್ಣನೇ. ನಾನೊಂದು ಥರ ಜಿಗುಟು. ನನ್ನ ಮೇಲೆ ವಿಶ್ವಾಸವಿಟ್ಟು ನೋಡಿದರೆ ಗೊತ್ತಾಗುತ್ತದೆ. ನನ್ನ ನಡವಳಿಕೆಯನ್ನು ವರುಣ ಕ್ಷೇತ್ರದ ಜನ ಸ್ವಲ್ಪ ತಿಳಿದುಕೊಂಡಿದ್ದಾರೆ. ಕಾರ್ಯಕರ್ತರು ನನ್ನ ಬಗ್ಗೆ ತಿಳಿಸುತ್ತಾರೆ. ಅವರೇ ನಮ್ಮ ಪಕ್ಷದ ಶಕ್ತಿ. ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರಗೆ ಟಿಕೆಟ್ ನೀಡುವುದು ಬೇಡ ಎಂದು ನಾನು ಹೇಳಿಲ್ಲ. ಶಿಕಾರಿಪುರದಲ್ಲಿ ನಿಲ್ಲಲಿ ಎಂದು ನಮ್ಮ ನಾಯಕರಾದ ಯಡಿಯೂರಪ್ಪ ಅವರು ಹೇಳಿದ್ದರು. ಈಗ ಅವರು ವರುಣಕ್ಕೆ ಬರುತ್ತಾರೆ ಎಂದರೆ ಕೆಂಪು ಹಾಸಿನ ಸ್ವಾಗತ ನೀಡುತ್ತೇನೆ. ನನ್ನ ಮಗನಿಗೆ ಮಾತ್ರ ಟಿಕೆಟ್ ಕೈತಪ್ಪಿಲ್ಲ ಅನೇಕರ ಮಕ್ಕಳಿಗೆ ಬಿಜೆಪಿ ಟಿಕೆಟ್ ನೀಡಿಲ್ಲ ಎಂದರು.
ವರುಣಾ- ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ತಾರಾ, ಸೋಲ್ತಾರಾ? ಸ್ಪೆಷಲ್ ಟಾಸ್ಕ್ ಸೀಕ್ರೆಟ್ ಹೀಗಿದೆ..
ವರುಣ ಕ್ಷೇತ್ರಕ್ಕೆ ನಾನು ನೆಪಮಾತ್ರ. ಬಿಜೆಪಿಯಲ್ಲಿ ಯಾವ ಮುಖಂಡರು ಚಿಕ್ಕವರಲ್ಲ. ದೊಡ್ಡವರೂ ಅಲ್ಲ. ಎಲ್ಲಕ್ಕಿಂತ ಪಕ್ಷ ಮತ್ತು ಕಾರ್ಯಕರ್ತರು ದೊಡ್ಡವರು. ಎಲ್ಲರೂ ಸೇರಿಯೇ ನನ್ನನ್ನು ಈ ಕ್ಷೇತ್ರದಲ್ಲಿ ಗೆಲ್ಲಿಸುತ್ತಾರೆ. ನಾನೇನೂ ಇಲ್ಲಿ ಶಾಶ್ವತ ಅಲ್ಲ. 75 ವರ್ಷವಾದ ಮೇಲೆ ನಮ್ಮ ಪಕ್ಷದಲ್ಲಿ ಯಾವ ಸ್ಥಾನ ಸಿಗುತ್ತದೆ ಎಂಬುದು ನನಗೆ ಗೊತ್ತು. ಹಾಗಂತ ಇದು ಕೊನೆ ಚುನಾವಣೆ, ರಾಜಕೀಯ ನಿವೃತ್ತಿ ಅಂತ ಏನೂ ಇಲ್ಲ. ಶುಕ್ರವಾರದಿಂದ ವರುಣದಲ್ಲಿ ಪ್ರಚಾರ ಆರಂಭಿಸುತ್ತೇನೆ. 17ರಂದು ವರುಣ ಮತ್ತು 19ರಂದು ಚಾಮರಾಜನಗರ ಕ್ಷೇತಕ್ಕೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದರು.