ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಶತಸಿದ್ಧ : ಅಭ್ಯರ್ಥಿ ಟಿ.ಡಿ.ಶ್ರೀನಿವಾಸ್

By Kannadaprabha News  |  First Published Jan 31, 2024, 11:22 AM IST

ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರು ಈ ಬಾರಿ ಬದಲಾವಣೆ ಬಯಸಿದ್ದಾರೆ. ಆದ್ದರಿಂದ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ಶತಸಿದ್ಧ. ಕಾಂಗ್ರೆಸ್ ಪಕ್ಷ ಶಿಕ್ಷಕರಿಗೆ ಕೊಟ್ಟ ಮಾತಿನಿಂತೆ ಹಳೆ ಪಿಂಚಣಿ ವ್ಯವಸ್ಥೆಗೆ ಮೊದಲ ಹಂತದಲ್ಲಿ ನಿರ್ಣಯ ತೆಗೆದುಕೊಂಡಿದೆ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ಶ್ರೀನಿವಾಸ್ ಹೇಳಿದರು.


  ಶಿರಾ :  ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರು ಈ ಬಾರಿ ಬದಲಾವಣೆ ಬಯಸಿದ್ದಾರೆ. ಆದ್ದರಿಂದ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ಶತಸಿದ್ಧ. ಕಾಂಗ್ರೆಸ್ ಪಕ್ಷ ಶಿಕ್ಷಕರಿಗೆ ಕೊಟ್ಟ ಮಾತಿನಿಂತೆ ಹಳೆ ಪಿಂಚಣಿ ವ್ಯವಸ್ಥೆಗೆ ಮೊದಲ ಹಂತದಲ್ಲಿ ನಿರ್ಣಯ ತೆಗೆದುಕೊಂಡಿದೆ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ಶ್ರೀನಿವಾಸ್ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿಯಾಗಿ ನನ್ನನ್ನು ಈಗಾಗಲೇ ಘೋಷಣೆ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷರು ಮತ್ತು ರಾಜ್ಯದ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಕಳೆದ ಪದವೀಧರ ಕ್ಷೇತ್ರದ ಯಲ್ಲಿ ಕ್ಷೇತ್ರದಾದ್ಯಂತ ಸಂಚಾರ ಮಾಡಿದ್ದೇವೆ. ಇದು ನನಗೆ ಸ್ವಲ್ಪ ಅನುಕೂಲವಾಗಿದೆ. 35 ತಾಲೂಕುಗಳನ್ನು ಸುತ್ತಿದ್ದೇವೆ. ಈಗ ಶಿಕ್ಷಕರು ಮತದಾರರಾಗಿರುವುದರಿಂದ ಶಿಕ್ಷಕರ ಸಮಸ್ಯೆಗಳನ್ನು ಆಲಿಸಿ. ಆ ವಿಚಾರಗಳನ್ನು ಸರಕಾರದ ಗಮನಕ್ಕೆ ತರುವ ಕೆಲಸ ಮಾಡುತ್ತಿದ್ದೇವೆ ಎಂದರು.

Tap to resize

Latest Videos

undefined

ಹಳೆ ಪಿಂಚಣಿ ಯೋಜನೆ ಜಾರಿಗೆ ತರುವಲ್ಲಿ ಮುಖ್ಯಮಂತ್ರಿಗಳು ಸಭೆ ನಡೆಸಿ, 2006 ಮಾರ್ಚ್ 31ರ ಮೊದಲು ಸೇವೆಗೆ ಸೇರಿ ರಿಪೋರ್ಟ್ ಮಾಡಿಕೊಳ್ಳುವಲ್ಲಿ ತಡವಾಗಿರುವ 13000 ಕ್ಕೂ ಹೆಚ್ಚು ಜನರಿಗೆ ಓಪಿಎಸ್ ಅಡಿಯಲ್ಲಿ ಸರಕಾರಿ ಆದೇಶ ಹೊರಡಿಸಿದ್ದಾರೆ. ಸರಕಾರ ಸಮಸ್ಯೆಗಳಿಗೆ ಸ್ಪಂದಿಸುವ ರೀತಿ ಕೆಲಸ ಮಾಡುತ್ತಿದೆ. 7ನೇ ವೇತನ ಆಯೋಗ ಅನುಷ್ಠಾನ ಮಾಡುವ ನಿರೀಕ್ಷೆ ಇದೆ. ಈಗಾಗಲೇ ಶಿಕ್ಷಕರ ಕ್ಷೇತ್ರದಿಂದ ಗೆದ್ದಿರುವವರಿಗೆ 18 ವರ್ಷಗಳ ಅವಕಾಶ ಕಲ್ಪಿಸಿಕೊಟ್ಟಿದ್ದರು. ಆದರೂ ಅವರು ಯಾವುದೇ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಅವರಿಗೆ ಈಗಿನ ಸರಕಾರವನ್ನು ಖಂಡಿಸುವ ಹಕ್ಕು ಇಲ್ಲ. ಆದ್ದರಿಂದ ನಾನು ಮತದಾರರಿಗೆ ಮನವಿ ಮಾಡುವುದೇನೆಂದರೆ ಯಾವ ಪಕ್ಷ ಅಧಿಕಾರದಲ್ಲಿರುತ್ತದೆಯೋ ಆ ಪಕ್ಷದಿಂದ ಸ್ಪರ್ಧಿಸಿದ್ದ ಅಭ್ಯರ್ಥಿಯನ್ನು ಗೆಲ್ಲಿಸಿ. ಇಲ್ಲದಿದ್ದರೆ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿಲ್ಲ. ಶಿಕ್ಷಕರ ಮೇಲಿರುವ ಮನೋಭಾವ ತೊಡೆದು ಹಾಕುವ ಕಾಲ ಬಂದಿದೆ. ನನಗೆ ಶಿಕ್ಷಕರ ಮತ ಹಾಕಿಸಿಕೊಳ್ಳುವುದು ಗೊತ್ತು ಎಂದು ಹೇಳುವವರಿಗೆ ಪಾಠ ಕಲಿಸಬೇಕಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಬೇವಿನಹಳ್ಳಿ ಸುದರ್ಶನ್, ಉಪನ್ಯಾಸಕರಾದ ಗಂಗಾಧರ, ತಿಮ್ಮರಾಜು, ಗುಡ್ಡಣ್ಣ, ಶಿವಕುಮಾರ್, ಮೂಡ್ಲಗಿರಿಯಪ್ಪ, ಮೆಣಸಗಿ ಸೇರಿದಂತೆ ಹಲವರು ಹಾಜರಿದ್ದರು.

click me!