ಯುದ್ಧಕ್ಕೆ ಜಂಟಿಯಾಗೇ ಹೋಗ್ತಿವಿ: ಕೃಷ್ಣಭೈರೇಗೌಡ

By Web DeskFirst Published Jul 24, 2018, 2:42 PM IST
Highlights

ಮೈತ್ರಿ ಸರಕಾರ ರಚನೆ ಮಾಡಿಕೊಂಡಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಒಟ್ಟಿಗೆ ಹೆಜ್ಜೆ ಹಾಕಲಿವೆಯೇ? ಹೌದು ಎನ್ನುತ್ತಿದೆ ನಾಯಕರ ಮಾತು ಮತ್ತು ನಡವಳಿಕೆ..

ಬೆಳಗಾವಿ (ಜು.24)  ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಸೀಟು ಹೊಂದಾಣಿಕೆ ಮಾಡಿಕೊಳ್ಳಲಿದ್ದು ಸಮನ್ವಯ ಸಮಿತಿಯಲ್ಲಿ ನಿರ್ಧಾರ ಆಗಿದೆ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

ಜೆಡಿಎಸ್ ಗೆ ಎಷ್ಟು ಸೀಟ್ ಬಿಟ್ಟುಕೊಡಬೇಕೆಂಬುದು ತೀರ್ಮಾನವಾಗಿಲ್ಲ. ದೇಶದ ರಾಜಕೀಯ ಪರಿಸ್ಥಿತಿಯಲ್ಲಿ ಹೊಂದಾಣಿಕೆ ಅಗತ್ಯವಿದೆ.  ಜೆಡಿಎಸ್ ಜೊತೆ ಸೀಟ್ ಹಂಚಿಕೆಯಿಂದ ಲಾಭ-ನಷ್ಟ ಎರಡು ಆಗುತ್ತದೆ. ಇದೆಲ್ಲವನ್ನು ಗಮನದಲ್ಲಿ ಇರಿಸಿಕೊಂಡು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದರು.

ಮಾಜಿ ಸಚಿವ ಎ.ಮಂಜು ಹೇಳಿಕೆ ಅವರ ವೈಯಕ್ತಿಕ ವಿಚಾರವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಜೆಡಿಎಸ್ ಮತ್ತು ಕಾಂಗ್ರೆಸ್ ರಾಜ್ಯದಲ್ಲಿ ಮೈತ್ರಿ ಸರಕಾರ ರಚನೆ ಮಾಡಿದ್ದು ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳಲು ಒಂದು ಹಂತದ ಮಾತುಕತೆ ಈಗಾಗಲೆ ನಡೆದಿದೆ.

ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಕಾಣಿಸಿಕೊಂಡ ಪದ್ಮಾವತಿ

ಉತ್ತರ ಕರ್ನಾಟಕ ಅಭಿವೃದ್ಧಿ ಮಾಡೋಣ:  ನಾವು ಅಖಂಡ ಕರ್ನಾಟಕ ಪರಿಕಲ್ಪನೆ ಹೊಂದಿದ್ದೇವೆ. ಮೊದಲು ಉತ್ತರ ಕರ್ನಾಟಕ ಅಭಿವೃದ್ಧಿ ಮಾಡೋಣ. ಆದರೆ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಕೂಗು ಬೇಡ ಎಂದು ಸಚಿವರು ಇದೇ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.ಮೈತ್ರಿ ಸರಕಾರ ರಚನೆ ಮಾಡಿಕೊಂಡಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಒಟ್ಟಿಗೆ ಹೆಜ್ಜೆ ಹಾಕಲಿವೆಯೇ? ಹೌದು ಎನ್ನುತ್ತಿದೆ ನಾಯಕರ ಮಾತು ಮತ್ತು ನಡವಳಿಕೆ..

click me!