'ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಈ ನಂಬರ್ ಕ್ರಾಸ್ ಮಾಡಲ್ಲ'

By Kannadaprabha News  |  First Published Nov 18, 2023, 9:12 AM IST

 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಡಬಲ್ ಡಿಜಿಟ್ ಕ್ರಾಸ್ ಮಾಡುವುದಿಲ್ಲ. ರಾಜ್ಯದಲ್ಲಿ ಅವರದೇ ಸರ್ಕಾರ ಇದೆ. ಆದರೂ ಒಂದಿಬ್ಬರು ಆಯ್ಕೆಯಾಗಬಹುದು ಅಷ್ಟೇ. ಜನರಿಗೆ ಕಾಂಗ್ರೆಸ್ ಮೋಸದ ಬಗ್ಗೆ ಅರಿವಾಗಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.


 ವಿಜಯಪುರ : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಡಬಲ್ ಡಿಜಿಟ್ ಕ್ರಾಸ್ ಮಾಡುವುದಿಲ್ಲ. ರಾಜ್ಯದಲ್ಲಿ ಅವರದೇ ಸರ್ಕಾರ ಇದೆ. ಆದರೂ ಒಂದಿಬ್ಬರು ಆಯ್ಕೆಯಾಗಬಹುದು ಅಷ್ಟೇ. ಜನರಿಗೆ ಕಾಂಗ್ರೆಸ್ ಮೋಸದ ಬಗ್ಗೆ ಅರಿವಾಗಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.

ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಶುಕ್ರವಾರ ನಡೆದ ವಿಜಯಪುರ ಕಾರ್ಯಕರ್ತರ ಜೊತೆ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಜನರಿಗೆ ಕಾಂಗ್ರೆಸ್ ಮೇಲೆ ವಿಶ್ವಾಸ ಸಂಪೂರ್ಣ ಕಡಿಮೆಯಾಗಿದೆ. ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಧೃಡಸಂಕಲ್ಪ ಮಾಡಬೇಕು. ಇದು ಕೇವಲ ಒಬ್ಬರಿಂದ ಆಗುವ ಕೆಲಸವಲ್ಲ, ಇದೊಂದು ಸಾಮೂಹಿಕ ಪ್ರಯತ್ನ. ಎಲ್ಲ ಕಾರ್ಯಕರ್ತರು ಹೊಸ ಹುಮ್ಮಸ್ಸಿನಿಂದ ದುಡಿಯಬೇಕು. ರಾಜ್ಯದಿಂದ ಹೆಚ್ಚಿನ ಸಂಸದರನ್ನು ಆಯ್ಕೆ ಮಾಡಿ ಕಳುಹಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು ಎಂದು ಕರೆ ನೀಡಿದರು.

Latest Videos

undefined

ಹಾಲಿ ಸಂಸದ ರಮೇಶ ಜಿಗಜಿಣಗಿ ಅವರು ಸಹ ಹಿರಿಯ ರಾಜಕೀಯ ಧುರೀಣರು, ಲಕ್ಷಾಂತರ ಕಾರ್ಯಕರ್ತರ ಪ್ರೀತಿಯನ್ನು ಸಂಪಾದಿಸಿದ್ದಾರೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್. ಪಾಟೀಲ ಕೂಚಬಾಳ, ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ವಿಭಾಗೀಯ ಸಂಘಟನಾ ಮಹಾಮಂತ್ರಿ ಪ್ರಕಾಶ ಅಕ್ಕಲಕೋಟ, ನಗರ ಮಂಡಳ ಅಧ್ಯಕ್ಷ ಮಳುಗೌಡ ಪಾಟೀಲ, ಮುಖಂಡ ವಿವೇಕಾನಂದ ಡಬ್ಬಿ, ಮಲ್ಲಿಕಾರ್ಜುನ ಜೋಗೂರ, ಬಸರಾಜ ಬಿರಾದಾರ, ಸಂಜು ಐಹೊಳಿ, ಶಿವರುದ್ರ ಬಾಗಲಕೋಟ, ಬಿಜೆಪಿ ಮಹಾನಗರ ಪಾಲಿಕೆ ಸದಸ್ಯರು, ಮಹಿಳಾ ಮೋರ್ಚಾ ಸೇರಿದಂತೆ ಇತರರು ಇದ್ದರು.

ನಾವು ಜೋಡೆತ್ತುಗಳು

ಬೆಂಗಳೂರು (ನ.18): ಭ್ರಷ್ಟ ಕಾಂಗ್ರೆಸ್‌ ಸರ್ಕಾರವನ್ನು ತೊಲಗಿಸಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ನಾವೆಲ್ಲ ಒಗ್ಗಟ್ಟಿನಿಂದ ಹೋರಾಟ ಮಾಡಬೇಕು ಎಂದು ಬಿಜೆಪಿಯ ಶಾಸಕಾಂಗ ಪಕ್ಷದ ನೂತನ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ. ಪಕ್ಷದ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ನಾನು ಜೋಡೆತ್ತು ರೀತಿ ರಾಜ್ಯದಲ್ಲಿ ಪ್ರವಾಸ ಕೈಗೊಂಡು ಸಂಘಟನೆ ಬಲಪಡಿಸುತ್ತೇವೆ ಎಂದೂ ಅವರು ತಿಳಿಸಿದ್ದಾರೆ. ಶುಕ್ರವಾರ ಸಂಜೆ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ವಿರೋಧ ಪಕ್ಷದ ಅಧ್ಯಕ್ಷನಾಗಿ ಆಯ್ಕೆಯಾದ ಬಳಿಕ ಅವರು ಮಾತನಾಡಿದರು. 

ನಾನು ಬಿಜೆಪಿಯಲ್ಲಿ 45 ವರ್ಷ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಈದ್ಗಾ ಹೋರಾಟ, ಅಯೋಧ್ಯಾ ಹೋರಾಟ ಸೇರಿದಂತೆ ಹಲವು ಹೋರಾಟಗಳಲ್ಲಿ ಭಾಗಿಯಾಗಿದ್ದೆ. ನನ್ನ 17ನೇ ವಯಸ್ಸಿನಲ್ಲಿ ತುರ್ತು ಪರಿಸ್ಥಿತಿ ವೇಳೆ ಇಂದಿರಾ ಗಾಂಧಿ ವಿರುದ್ಧ ಹೋರಾಟ ಮಾಡಿ ಒಂದು ತಿಂಗಳು ಜೈಲುವಾಸ ಅನುಭವಿಸಿದ್ದೆ. ಬಿಜೆಪಿ ಪಕ್ಷ ಹಾಗೂ ಪಕ್ಷದ ಹಿರಿಯರು ನನ್ನ ಮೇಲೆ ವಿಶ್ವಾಸವಿಟ್ಟು ವಿರೋಧ ಪಕ್ಷದ ನಾಯಕನ ಜವಾಬ್ದಾರಿ ನೀಡಿದ್ದಾರೆ. ಎಲ್ಲರ ಸಹಕಾರ ಪಡೆದು ಮತ್ತೆ ಕರ್ನಾಟಕದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಹೋರಾಟ ಮಾಡುವೆ ಎಂದರು.

ಕಾಂಗ್ರೆಸ್‌ ಸೇಡಿನ ರಾಜಕೀಯಕ್ಕೆ ಜಗ್ಗೋಲ್ಲ, ಯಾವ ತನಿಖೆಗೂ ಸಿದ್ಧ: ಎಚ್‌ಡಿಕೆ ಸವಾಲ್‌

ನಮ್ಮ ಮುಂದೆ ಸವಾಲುಗಳಿವೆ: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಹಕಾರದೊಂದಿಗೆ ನಾವೆಲ್ಲ ಮುನ್ನಡೆಯಬೇಕಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ನನಗೆ ಮುಂದೆ ಬಹಳ ಸವಾಲುಗಳಿವೆ. ಮುಂಬರುವ ಲೋಕಸಭಾ ಚುನಾವಣೆ, ಜಿಲ್ಲಾ ಪಂಚಾಯಿತಿ ಚುನಾವಣೆ, ಬಿಬಿಎಂಪಿ ಚುನಾವಣೆಯಲ್ಲಿ ಪಕ್ಷಕ್ಕೆ ಉತ್ತಮ ಫಲಿತಾಂಶ ತರುವ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ನಾವೆಲ್ಲ ಒಟ್ಟಾಗಿ ಕೆಲಸ ಮಾಡೋಣ ಎಂದು ಹೇಳಿದರು. 

click me!