'ಬಿಜೆಪಿಯಲ್ಲಿ ಶುರುವಾಗಿದೆ ಒಳಜಗಳ : ಕೈ ಆಡಳಿತ ಖಚಿತ'

Kannadaprabha News   | Asianet News
Published : Nov 09, 2020, 09:50 AM ISTUpdated : Nov 09, 2020, 10:01 AM IST
'ಬಿಜೆಪಿಯಲ್ಲಿ ಶುರುವಾಗಿದೆ ಒಳಜಗಳ : ಕೈ ಆಡಳಿತ ಖಚಿತ'

ಸಾರಾಂಶ

ಬಿಜೆಪಿ ಮುಖಂಡರ ನಡುವೆ ಒಳಜಗಳಗಳು ಶುರುವಾಗಿದೆ. ಇದರಿಂದ ಕಾಂಗ್ರೆಸ್ ಅಧಿಕಾರಕ್ಕೆ ಏರಲಿದೆ ಎಂದು ಭವಿಷ್ಯ ನುಡಿಯಲಾಗಿದೆ. 

ತಾಂಡವಪುರ (ನ.09):  ಕೆಪಿಸಿಸಿ ಅಧ್ಯಕ್ಷ ಡಿ.ಕೆ, ಶಿವಕುಮಾರ್‌ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಯಾವುದೇ ಒಳ ಜಗಳವಿಲ್ಲ, ಭಿನ್ನಾಭಿಪ್ರಾಯವೂ ಇಲ್ಲ, ಇರುವುದೆಲ್ಲವೂ ನಿಮ್ಮ ಬಿಜೆಪಿ ಪಕ್ಷದಲ್ಲೇ ಎಂದು ಶಾಸಕ ಡಾ.ಎಸ್‌. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದರು.

ನಂಜನಗೂಡು ತಾಲೂಕು ಮೂಡಹಳ್ಳಿಯಲ್ಲಿ ಕನಕ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಯಾವುದೇ ಒಳ ಜಗಳವಿಲ್ಲ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಸೇರಿದಂತೆ ಬಿಜೆಪಿ ನಾಯಕರು ಪದೇ ಪದೇ ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯಅವರ ನಡುವೆ ಯಾವುದೇ ಭಿನ್ನಾಭಿಪ್ರಾಯವಿದೆ ಎಂದು ಮಾಧ್ಯಮಗಳ ಮೂಲಕ ಹೇಳಿಕೆ ನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

'ಎಲ್ಲವೂ ಉಲ್ಟಾಪಲ್ಟಾ : ಎರಡೂ ಕಡೆ ಕೈ ಗೆಲುವು ಖಚಿತ' ..

ಆದರೆ ಬಿಜೆಪಿಯಲ್ಲೇ ಹಲವಾರು ಬಣಗಳಿವೆ, ಅವರಲ್ಲೇ ಇರುವಂತಹ ಭಿನ್ನಾಬಿಪ್ರಾಯ ಸರಿಪಡಿಸಿಕೊಳ್ಳಲಾಗದೇ ಈ ರೀತಿ ಕಾಂಗ್ರೆಸ್‌ ನಾಯಕರ ವಿರುದ್ದ ಅಪಪ್ರಚಾರ ಮಾಡುವುದು ಸರಿಯಲ್ಲ. ರಾಜ್ಯದ ಜನತೆ ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ದ ಬೇಸತ್ತಿದ್ದಾರೆ, ಮುಂದಿನ ಚುನಾವಣೆಯಲ್ಲಿ ಜನತೆ ಬಿಜೆಪಿ ಪಕ್ಷವನ್ನು ಸೋಲಿಸುವ ಮೂಲಕ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದರು.

ಈ ಸಂದರ್ಭದಲ್ಲಿ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್‌.ಸಿ. ಬಸವರಾಜು, ತಗಡೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಗ್ರಾಪಂ ಮಾಜಿ ಅಧ್ಯಕ್ಷ ನಂದೀಶ್‌, ಬಗರ್‌ ಹುಕುಂ ಸಮಿತಿ ಮಾಜಿ ಅಧ್ಯಕ್ಷ ಹೊಸಕೋಟೆ ಕುಮಾರ್‌ ಇದ್ದರು.

PREV
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC