ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನವನ್ನು ಪಡೆದಿರುವ ಕಾಂಗ್ರೆಸ್ ಮತಪತ್ರದಿಂದ ಚುನಾವಣೆ ನಡೆದಲ್ಲಿ ಗೆಲ್ಲುವುದು ಖಚಿತ ಎಂದು ಭವಿಷ್ಯ ನುಡಿಯಲಾಗಿದೆ.
ಶಿರಾ (ಫೆ.24): ತಾಲೂಕಿನ ಗ್ರಾಪಂ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಗರು ಅತಿಹೆಚ್ಚಾಗಿ ಗೆದ್ದಿದ್ದಾರೆ. ಮುಂದಿನ ದಿನಗಳಲ್ಲಿ ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆ ನಡೆದರೆ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದರಲ್ಲಿ ಅನುಮಾನವಿಲ್ಲ ಮಾಜಿ ಸಚಿವ ಟಿ.ಬಿ.ಜಯಚಂದ್ರ ಹೇಳಿದರು.
ಅವರು ನಗರದ ಅನ್ನಪೂರ್ಣ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಬೆಂಬಲಿತ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಶಿರಾ ಕ್ಷೇತ್ರಕ್ಕೆ ಒಳಪಡುವ 33 ಗ್ರಾ.ಪಂ.ಗಳಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿಗರು 21 ಪಂಚಾಯಿತಿಗಳಲ್ಲಿ ಅಧಿಕಾರ ಹಿಡಿದಿದ್ದಾರೆ. ಸುಮಾರು 300 ಕ್ಕೂ ಹೆಚ್ಚು ಕಾಂಗ್ರೆಸ್ ಬೆಂಬಲಿಗರು ಗ್ರಾ.ಪಂ. ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವು ತಳಮಟ್ಟದಲ್ಲಿ ಗಟ್ಟಿಯಾಗಿದೆ ಎಂಬುದನ್ನು ತೋರಿಸಿಕೊಟ್ಟಿದ್ದೇವೆ ಎಂದರು.
ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ತರಲು ಡಿಕೆಶಿ, ಸಿದ್ದು ಪ್ಲಾನ್ : ಹೊಸ ತಂತ್ರ ...
ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾತನಾಡಿ, ಕಾಂಗ್ರೆಸ್‌ನ ಆಡಳಿತದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಏನು ಮಾಡಿದರು, ಕಳೆದ 7 ವರ್ಷದಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಏನು ಮಾಡಿದರು ಎಂಬುದನ್ನು ಇಡೀ ದೇಶವೇ ನೋಡುತ್ತಿದೆ. ಇಡೀ ಪ್ರಪಂಚದಲ್ಲೇ ಪ್ರೆಟ್ರೋಲ್ ದರಕ್ಕೆ ಶೇ. 69 ರಷ್ಟುಟ್ಯಾಕ್ಸ್ ಹಾಕುತ್ತಿರುವುದು. ಭಾರತದಲ್ಲಿ ಮಾತ್ರ. ಆಡಳಿತ ಮಾಡುವವರಿಗೆ ಟ್ಯಾಕ್ಸ್ ಹಾಕುವಲ್ಲಿ ಇತಿಮಿತಿ ಬೇಡವೇ. ಪೆಟ್ರೋಲ್ ದರ ಹೆಚ್ಚಿರುವುದರಿಂದ ಎಲ್ಲಾ ಅಗತ್ಯ ವಸ್ತುಗಳ ದರವೂ ಹೆಚ್ಚಾಗಿದೆ. ಇದರಿಂದ ಸಾಮಾನ್ಯ ಜನರು ಜೀವನ ನಡೆಸುವುದೇ ಕಷ್ಟವಾಗಿದೆ. ಮುಂದಿನ ದಿನಗಳಲ್ಲಿ ಜನರು ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಮಾತನಾಡಿ, ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದವರು ಸುಳ್ಳು ಆಶ್ವಾಸನೆ ನೀಡಿ, ಹಣ ಕೊಟ್ಟು ಗೆದ್ದಿದ್ದಾರೆ. ಆದರೆ ಈ ಗೆಲು ತಾತ್ಕಾಲಿಕ ಮುಂದಿನ ದಿನಗಳಲ್ಲಿ ಶಿರಾದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಗೆಲ್ಲುವುದರಲ್ಲಿ ಅನುಮಾನವಿಲ್ಲ. ರಾಜ್ಯದಲ್ಲಿಯೂ ಸಹ ಕಾಂಗ್ರೆಸ್ ಪಕ್ಷ ಅಕಾರಕ್ಕೆ ಬರಲಿದೆ. ಸೋಲು ಗೆಲುವು ಸಾಮಾನ್ಯ ಇದಕ್ಕೆ ಎಂದಿಗೂ ಎದೆಗುಂದದೆ ಮುನ್ನಗಬೇಕು. ಇಂದಿರಾಗಾಂಯವರಿಗೂ ಸೋಲು ಬಿಟ್ಟಿಲ್ಲ. ಟಿ.ಬಿ.ಜಯಚಂದ್ರ ಯಾರಿಗೂ ಕಡಿಮೆ ಇಲ್ಲ ಅಂತಹವರು ಸೋಲಿಸಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ತಳ ಸಮುದಾಯದವರು ಮೀಸಲಾತಿ ಕೇಳಬೇಕು ಆದರೆ ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಮೀಸಲಾತಿಗಾಗಿ ಉನ್ನತ ಜಾತಿಗಳ ಸ್ವಾಮಿಜಿಗಳು ಒತ್ತಾಯ ಮಾಡುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರನ್ನು ಸನ್ಮಾನಿಸಲಾಯಿತು. ಹಾಗೂ ಇತ್ತೀಚಿಗೆ ನಿಧನ ಹೊಂದಿದ ಹಿರಿಯ ಸಹಕಾರಿ ಎಸ್.ಎನ್.ಕೃಷ್ಣಯ್ಯ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಶಾಸಕ ಕೆ.ಷಡಕ್ಷರಿ, ಆರ್.ನಾರಾಯಣ, ರಫಿಕ್ ಅಹಮದ್, ಷಫಿ ಅಹಮದ್, ಚೌದರಿ ರಂಗಪ್ಪ, ಕಾಂಗ್ರೆಸ್ ಮುಖಂಡ ಸಂಜಯ್ ಜಯಚಂದ್ರ, ಕಲ್ಕೆರೆ ರವಿಕುಮಾರ್, ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ನಟರಾಜ್ ಬರಗೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಆರ್.ಮಂಜುನಾಥ್, ಕಾಂಗ್ರೆಸ್ ಕಾನೂನು ಮತ್ತು ಮಾನವ ಘಟಕಗಳ ಅಧ್ಯಕ್ಷ ಹಾಗೂ ವಕೀಲರ ಸಂಘದ ಖಜಾಂಚಿ ಹೆಚ್.ಗುರುಮೂರ್ತಿ, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ಲಾ ಖಾನ್, ಜಿ.ಪಂ. ಸದಸ್ಯ ಕೆಂಚಮಾರಪ್ಪ, ಗುಳಿಗೇನಹಳ್ಳಿ ನಾಗರಾಜ್, ಎಂ.ಆರ್.ಶಶಿಧರ ಗೌಡ ಸೇರಿದಂತೆ ಹಲವರು ಹಾಜರಿದ್ದರು.