ಶಿರಾದಲ್ಲಿ 10 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್‌ಗೆ ಗೆಲುವು ಖಚಿತ'

Kannadaprabha News   | Asianet News
Published : Nov 08, 2020, 08:12 AM ISTUpdated : Nov 08, 2020, 08:29 AM IST
ಶಿರಾದಲ್ಲಿ 10 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್‌ಗೆ ಗೆಲುವು ಖಚಿತ'

ಸಾರಾಂಶ

ಈಗಾಗಲೇ ಉಪ ಚುನಾವಣೆ ಮುಕ್ತಾಯವಾಗಿದ್ದು ಫಲಿತಾಂಶಕ್ಕೆ ಇನ್ನೆರಡು ದಿನಗಳಗಳಷ್ಟೇ ಬಾಕಿ ಇದೆ. ಈ ಸಂದರ್ಭದಲ್ಲಿ ಶಿರಾ ಕ್ಷೇತ್ರದಲ್ಲಿ ಕೈ ಗೆಲುವು ಖಚಿತ ಎನ್ನಲಾಗಿದೆ

ತುಮಕೂರು (ನ.08): ಶಿರಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ 10 ಸಾವಿರ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್‌ ಮುಖಂಡ, ಮಾಜಿ ಶಾಸಕ ಕೆ.ಎನ್‌.ರಾಜಣ್ಣ ವಿಶ್ವಾಸ ವ್ಯಕ್ತಪಡಿಸಿದರು.

 ನಗರದಲ್ಲಿ ಮಾತನಾಡಿದ ಅವರು, ಯಾರು ಏನೇ ಹೇಳಿದರೂ ನಾವು 10 ಸಾವಿರ ಮತಗಳ ಅಂತರಿಂದ ಗೆದ್ದೇ ಗೆಲ್ಲುತ್ತೇವೆ. ಅಹಿಂದ ಮತಬ್ಯಾಂಕ್‌ ಕಾಂಗ್ರೆಸ್‌ ಕೈಹಿಡಿದಿದೆ. ಈಗಾಗಲೇ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಗೆಲುವಿನ ಹತ್ತಿರ ಬರುತ್ತೇವೆ ಅಂದಿದ್ದಾರೆ. ಆದರೆ ಗೆದ್ದೇ ಗೆಲ್ಲುತ್ತೇವೆ ಅಂತ ಹೇಳಿಲ್ಲ. ಜೆಡಿಎಸ್‌ ಅಭ್ಯರ್ಥಿ 30ರಿಂದ 35 ಸಾವಿರ ಓಟು ತೆಗೆದುಕೊಳ್ಳುತ್ತಾರೆ. ಕೊನೆ ಘಳಿಗೆಯಲ್ಲಿ ಪಕ್ಷ ಉಳಿಸಿಕೊಳ್ಳಲು ಪಾಪಾ ದೇವೇಗೌಡರೇ ಬಂದು ಪ್ರಯತ್ನಿಸಿದ್ದಾರೆ ಎಂದರು.

ಕಾಂಗ್ರೆಸ್ ಪರವಾಗಿ ನಿಂತ ಸುಮಲತಾ : ನನಗೆ ಬೆಂಬಲಿಸಿದ್ದಕ್ಕೆ ಸಪೋರ್ಟ್ ಎಂದ ಸಂಸದೆ ...

ಇನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬದಲಾವಣೆಯಾದರೂ ಆಶ್ಚರ್ಯಪಡಬೇಕಿಲ್ಲ. ಬಿಜೆಪಿಯ ಪ್ರಮುಖರೇ ಸಿಎಂ ಬದಲಾವಣೆ ಕುರಿತಂತೆ ಮಾತನಾಡುತ್ತಿದ್ದಾರೆ. ಅಂದರೆ ಬೆಂಕಿಯಿಲ್ಲದೆ ಹೊಗೆಯಾಡುತ್ತಾ ಹೊಗೆ ಆಡಬೇಕು ಅಂದರೆ ಬೆಂಕಿಯಿರಲೇಬೇಕು ಎಂದರು.

PREV
click me!

Recommended Stories

ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ