ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ ಚಿಕ್ಕಮಗಳೂರು
ಚಿಕ್ಕಮಗಳೂರು (ನ.14): ಅತ್ತ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಬಿಜೆಪಿ ಸಂಕಲ್ಪ ಯಾತ್ರೆಗೆ ತಯಾರಿ ನಡೆಸುತ್ತಿದ್ದರೆ ಇತ್ತ ಕಾಂಗ್ರೆಸ್ ಕಾರ್ಯಕರ್ತರು ಇದೊಂದು ಭ್ರಷ್ಟಾಚಾರದ ಸರ್ಕಾರ, 40% ಸರ್ಕಾರ ಈ ಸರ್ಕಾರವನ್ನ ಕಿತ್ತೊಗೆಯಬೇಕು ಎಂದು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಾಲೂಕು ಕಚೇರಿಗೆ ಬೀಗ ಹಾಕಿ ಆಕ್ರೋಶ ಹೊರಹಾಕಿದ್ದಾರೆ.
ಕಡೂರು ತಾಲೂಕಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಕಡೂರು ತಾಲೂಕಿನಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಹಲವು ಅಧಿಕಾರಿಗಳು ಲಂಚ ಪಡೆಯುವಾಗಲೇ ಸಿಕ್ಕಿಬಿದ್ದು ಅಮಾನತ್ತಾಗಿದ್ದಾರೆ. ತಾಲೂಕು ಪಂಚಾಯಿತಿ ಇಓ ಲಂಚ ಕೇಳುತ್ತಿರುವ ಆಡಿಯೋ ವೈರಲ್ ಆಗಿದೆ. ತಾಲೂಕು ಆಡಳಿತ ಅಧಿಕಾರಿಗಳು ಸಾರ್ವಜನಿಕರ ಕೆಲಸ ಮಾಡಿಕೊಡಲು ಶಾಸಕ ಅನುಮತಿಗೆ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ಹೊರಹಾಕಿದ್ದರು.
ಕಾಫಿನಾಡಲ್ಲಿThangka Painting; ಬೌದ್ಧ ಧರ್ಮ ಪ್ರಚಾರಕ್ಕೆ ಬಳಕೆ?
ಸೂಕ್ತ ಕ್ರಮಕ್ಕೆ ಒತ್ತಾಯ
ಕೆಪಿಸಿಸಿ ಸದಸ್ಯ ಕೆ.ಎಸ್.ಆನಂದ್ ಮಾತನಾಡಿ, ತಾಲೂಕಿನಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಎಲ್ಲ ಇಲಾಖೆಗಳ ಅಧಿಕಾರಿಗಳು ಲಂಚ ಇಲ್ಲದೇ ಸಾರ್ವಜನಿಕರ ಕೆಲಸ ಮಾಡುತ್ತಿಲ್ಲ.ಅಧಿಕಾರಿಗಳ ಈ ಲಂಚದಲ್ಲಿ ಕ್ಷೇತ್ರದ ಶಾಸಕ ಬೆಳ್ಳಿ ಪ್ರಕಾಶ್ ಅವರಿಗೂ ಪಾಲು ಹೋಗುತ್ತಿದೆ. ಶಾಸಕರು ಅಧಿಕಾರಿಗಳ ಮೂಲಕ ಭಾರೀ ಭ್ರಷ್ಟಾಚಾರ ನಡೆಸುತ್ತಿದ್ದು, ಈ ಭ್ರಷ್ಟಾಚಾರದ ಹಣದಲ್ಲಿ ಮುಂದಿನ ಚುನಾವಣೆ ಎದುರಿಸಲು ಅವರು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
BJP Janasankalpa Yatre: ಸಿಎಂ ನೇತೃತ್ವದಲ್ಲಿ ಕಡೂರು ತಾಲೂಕಿನಲ್ಲಿ ಜನ ಸಂಕಲ್ಪ ಸಮಾವೇಶ
ಇದೆಲ್ಲವನ್ನು ಗುಮನಿಸಿ ಜಿಲ್ಲಾಧಿಕಾರಿ ಅವರು ಸೂಕ್ತ ಕ್ರಮ ಕೈಗೊಂಡು ತಾಲೂಕಿನ ಜನತೆಗೆ ನ್ಯಾಯ ಒದಗಿಸಿ ಕೊಡುವಂತೆ ಮನವಿ ಸಲ್ಲಿಸಿದ್ದೇವೆ. ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದರು.ಹಣ ನೀಡದೇ ಯಾವುದೇ ಅಧಿಕಾರಿ ತಮ್ಮ ಕೆಲಸ ಮಾಡುವುದೇ ಇಲ್ಲ ಎಂಬುದು ಸಾರ್ವಜನಿಕರ ದಿನನಿತ್ಯದ ದೂರಾಗಿದೆ, ಇದಕ್ಕೆಲ್ಲಾ ಅಂತ್ಯಹಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಇಲಾಖಾಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.