ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಚಿವ ಕೆ. ಎಸ್ ಈಶ್ವರಪ್ಪ ಅವರ ಕಾರಿಗೆ ದಿಢೀರ್ ಮುತ್ತಿಗೆ ಹಾಕಿದ್ದಾರೆ. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್‌ಯಿಂದ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಮಹಾವೀರ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ಸಿಗರು ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗ(ಸೆ.01): ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕಾರಿಗೆ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ಮುತ್ತಿಗೆ ಹಾಕಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ನಗರದಲ್ಲಿ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್‌ಯಿಂದ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಮಹಾವೀರ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ಸಿಗರು ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗ: ಮುನ್ಸೂಚನೆ ಕೊಡದೇ ಬಂದ ಸಿಎಂ
ಇದೇ ವೇಳೆ ಜಿಪಂ ಸಭಾಂಗಣದಲ್ಲಿ ನಡೆಯಬೇಕಿದ್ದ ಅಧಿಕಾರಿಗಳ ಸಭೆಗೆ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಅದೇ ಮಾರ್ಗವಾಗಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಸಚಿವ ಈಶ್ವರಪ್ಪ ಅವರ ಕಾರನ್ನು ಗಮನಿಸಿದ ಕಾಂಗ್ರೆಸ್ ಕಾರ್ಯಕರ್ತರು ಅವರ ಕಾರಿಗೆ ಮುತ್ತಿಗೆ ಹಾಕಿದರು. ಸಚಿವರ ಕಾರು ತಡೆದು ನೆರೆ ಪರಿಹಾರ ನೀಡಲು ವಿಳಂಬ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ಮಧ್ಯ ಪ್ರವೇಶಿಸಿದ ಸಚಿವ ಬೆಂಗಾವಲು ಪಡೆ ಪೊಲೀಸರು, ಕಾರು ಮುಂದಕ್ಕೆ ಸಾಗಲು ಅನುವು ಮಾಡಿಕೊಟ್ಟರು.
ಜನರಿಗೆ ಕಿರುಕುಳ ಕೊಟ್ರೆ ಕಲಬುರ್ಗಿಗೆ ಎತ್ತಂಗಡಿ: SP, ಅಧಿಕಾರಿಗಳಿಗೆ ಯಡಿಯೂರಪ್ಪ ಎಚ್ಚರಿಕೆ..!