ಚಿಕ್ಕಮಗಳೂರು (ಜ.04): ಕಾಂಗ್ರೆಸ್ (Congress) ಮುಖಂಡರ ವಿರುದ್ಧ ಪಕ್ಷದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆಯಿತು. ಆತ್ಮಾವಲೋಕನ ಸಭೆಯಲ್ಲಿ (Meeting) ಪಕ್ಷದ ಕೆಲವು ಕಾರ್ಯಕರ್ತರು ಜಿಲ್ಲಾಧ್ಯಕ್ಷರು ಒಳಗೊಂಡಂತೆ ಅನೇಕ ಮುಖಂಡರ ವಿರುದ್ದ ಸಿಡಿದೆದ್ದ ಪರಿಣಾಮ ಸಭೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ವಿಧಾನ ಪರಿಷತ್ (MLC Election) ಹಾಗೂ ನಗರಸಭೆ ಚುನಾವಣೆಯಲ್ಲಿ ಪಕ್ಷ ಸೋಲಲು ಪಕ್ಷದ ಕೆಲವು ಮುಖಂಡರೇ ನೇರ ಕಾರಣ ಎಂದು ಯುವಕರ ಗುಂಪು ಆರೋಪಿಸಿತು. ಪಕ್ಷದ ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಮುಖಂಡರು ಮುಂದಾದರೂ ಮಣಿಯದೆ ಅಸಮಾಧಾನ ವ್ಯಕ್ತಪಡಿಸಿದರು.
ಇನ್ನೊಂದು ಬಣ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರನ್ನು ಕಡಗಣಿಸಿದೆ, ಅನೇಕ ಮುಖಂಡರು ಬಿಜೆಪಿ (BJP) ಎಜೆಂಟರಂತೆ ಕೆಲಸ ಮಾಡಿ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ದೂರಿದರು.
undefined
ಸಿ.ಎನ್.ಅಕ್ಮಲ್ ಪಕ್ಷದಿಂದ ಉಚ್ಚಾಟನೆಗೊಳಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ಲಾಕ್‌ಡೌನ್ (Lockdown) ಸಂದರ್ಭದಲ್ಲಿ ಅಕ್ಮಲ್ ಪಕ್ಷದ ಬಾವುಟದೊಂದಿಗೆ ಆಹಾರದ ಕಿಟ್ ವಿತರಣೆ, ಸ್ಯಾನಿಟೈಜರ್ ಸಿಂಪಡಣೆ ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದಾರೆ. ಆದರೆ, ಚುನಾವಣೆಯಲ್ಲಿ (election) ಅವರಿಗೆ ಪಕ್ಷ ಯಾವುದೇ ಜವಾಬ್ದಾರಿ ನೀಡದೇ ಕಡೆಗಣಿಸಿದೆ ಎಂದು ಕಾರ್ಯಕರ್ತರು ಆರೋಪಿಸಿದರು.
ಕೆಲವೊಂದು ವಾರ್ಡ್‌ಗಳಲ್ಲಿ ಅಲ್ಪಸಂಖ್ಯಾತರನ್ನು ಕಡೆಗಣಿಸಿ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್‌ನಲ್ಲಿದ್ದು ಬಿಜೆಪಿ (BJP) ಹಾಗೂ ಆರ್‌ಎಸ್‌ಎಸ್ (RSS) ಪರವಾಗಿ ಕೆಲಸ ಮಾಡಲಾಗಿದೆ ಎಂದು ದೂಷಿಸಿದರು.
ಸಭೆಯಲ್ಲಿ ಗೊಂದಲ ಉಂಟಾಗಿದ್ದ ಸಂದರ್ಭದಲ್ಲಿ ಮುಖಂಡರು ಸಮಧಾನ ಪಡಿಸುವ ನಿಟ್ಟಿನಲ್ಲಿ ಪ್ರಯತ್ನ ಪಟ್ಟರೂ ಆರಂಭದಲ್ಲಿ ಕಾರ್ಯಕರ್ತರು ಸ್ಪಂದಿಸಲಿಲ್ಲ. ನಂತರದಲ್ಲಿ ಪರಿಸ್ಥಿತಿ ತಿಳಿಯಾಯ್ತು.
ಅಧಿಕಾರ ಹಿಡಿಯುವಲ್ಲಿ ತಾಂತ್ರಿಕವಾಗಿ ವಿಫಲ : ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬಿಜೆಪಿಗೆ ಪ್ರಬಲ ಪೈಪೋಟಿ ನೀಡಿದೆ. ಆದರೆ, ಅಧಿಕಾರ ಹಿಡಿಯುವಲ್ಲಿ ತಾಂತ್ರಿಕವಾಗಿ ವಿಫಲವಾಗಿದೆ. ಮುಂದಿನ ದಿನಗಳಲ್ಲಿ ಪಕ್ಷವಾಗಿ ಜನರ ಸಂಕಷ್ಟಗಳಿಗೆ ಸ್ಪಂದಿಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ (Congress) ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ವಿಧಾನ ಪರಿಷತ್ತು ಮತ್ತು ನಗರಸಭೆ ಚುನಾವಣೆ ಆತ್ಮಾವಲೋಕನ ಸಭೆ ಹಾಗೂ ನಗರಸಭೆ ಚುನಾವಣೆಯಲ್ಲಿ ಗೆಲುವು ಪಡೆದ ಅಭ್ಯರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಧಾನ ಪರಿಷತ್ ಮತ್ತು ನಗರಸಭೆ ಚುನಾವಣೆಗಳಲ್ಲಿ ಪಕ್ಷದ ಎಲ್ಲ ನಾಯಕರು, ಮುಖಂಡರು ಅತ್ಯಂತ ಜವಾಬ್ದಾರಿಯುತವಾಗಿ ಚುನಾವಣಾ ಕಾರ್ಯಗಳನ್ನು ನಿರ್ವಹಿಸಿದ್ದಾರೆ. ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅತ್ಯಂತ ಪ್ರಬಲವಾಗಿದ್ದರೂ ಕಾಂಗ್ರೆಸ್ ತಕ್ಕ ಪೈಪೋಟಿ ನೀಡುವಲ್ಲಿ ಯಶಸ್ವಿಯಾಗಿದೆ. ಪರಿಷತ್‌ನಲ್ಲಿ ಕೇವಲ 6 ಮತಗಳ ಅಂತರದಲ್ಲಿ ನಮ್ಮ ಅಭ್ಯರ್ಥಿ ಸೋತಿದ್ದಾರೆ. ಇನ್ನು ನಗರಸಭೆ ಚುನಾವಣೆಯಲ್ಲೂ (election) ಪಕ್ಷ 12 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದೆ. ಅತಿ ಕಡಿಮೆ ಮತಗಳ ಅಂತರದಲ್ಲಿ ಅಭ್ಯರ್ಥಿಗಳು ಸೋತಿದ್ದಾರೆ ಅಷ್ಟೇ. ಆದರೆ, ಈ ಸೋಲು ಮುಂದಿನ ಗೆಲುವಿಗೆ ಮೆಟ್ಟಿಲಾಗಲಿದೆ ಎಂಬ ವಿಶ್ವಾಸದೊಂದಿಗೆ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಬಿಜೆಪಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಂಸದರು, ಸಿಎಂ ರಾಜಕೀಯ ಕಾರ್ಯದರ್ಶಿಗಳು, ಶಾಸಕರುಗಳು ಇದ್ದರೂ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಲ್ಲಿ ನಾನಾ ಒತ್ತಡ ತಂತ್ರಗಳನ್ನು ರೂಪಿಸಿದ್ದರು. ಕಾಂಗ್ರೆಸ್‌ನಲ್ಲಿ ಓರ್ವರೇ ಶಾಸಕರಿದ್ದು ಮತದಾರರನ್ನು ಪಕ್ಷದತ್ತ ಒಲವು ತೋರಿದ್ದಾರೆ ಎಂದು ಚುನಾವಣೆಯಿಂದ ಸಾಭೀತಾಗಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಮಾಜಿ ಸಭಾಪತಿ ಡಾ. ಬಿ.ಎಲ್.ಶಂಕರ್. ಮುಖಂಡರಾದ ಡಾ.ಡಿ.ಎಲ್. ವಿಜಯ್‌ಕುಮಾರ್, ಎಂ.ಎಲ್.ಮೂರ್ತಿ, ಬಿ.ಎಂ. ಸಂದೀಪ್, ಮೋಟಮ್ಮ, ಬಿ.ಹೆಚ್.ಹರೀಶ್, ಎನ್.ಮಹೇಶ್, ಶಿವಾನಂದ ಸ್ವಾಮಿ, ಮಂಜೇಗೌಡ, ಹಿರೇಮಗಳೂರು ಪುಟ್ಟಸ್ವಾಮಿ ಉಪಸ್ಥಿತರಿದ್ದರು.