ದೇಶಕ್ಕೆ ಅಪಾಯ ಎದುರಾದ ಸಂದರ್ಭದಲ್ಲಿ ಅಂಜದೇ ಸರ್ಜಿಕಲ್ ಸ್ಟೆ್ರೖಕ್‌ನಂತಹ ಅಚಲ ನಿರ್ಧಾರ ಕೈಗೊಂಡು ದೇಶದ ರಕ್ಷಣೆಗೆ ಮುಂದಾಗಿದ್ದು, ಪ್ರಧಾನಮಂತ್ರಿ ಕಾರ್ಯತತ್ಪರತೆಗೆ ಸಾಕ್ಷಿ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಶಿವಮೊಗ್ಗ (ಮಾ.17) : ದೇಶಕ್ಕೆ ಅಪಾಯ ಎದುರಾದ ಸಂದರ್ಭದಲ್ಲಿ ಅಂಜದೇ ಸರ್ಜಿಕಲ್ ಸ್ಟೆ್ರೖಕ್‌ನಂತಹ ಅಚಲ ನಿರ್ಧಾರ ಕೈಗೊಂಡು ದೇಶದ ರಕ್ಷಣೆಗೆ ಮುಂದಾಗಿದ್ದು, ಪ್ರಧಾನಮಂತ್ರಿ ಕಾರ್ಯತತ್ಪರತೆಗೆ ಸಾಕ್ಷಿ ಎಂದು ಸಂಸದ ಬಿ.ವೈ.ರಾಘವೇಂದ್ರ(MP BY Raghavendra) ಹೇಳಿದರು.
ಇಲ್ಲಿನ ಫ್ರೀಡಂ ಪಾರ್ಕ್ನಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಸಹಯೋಗದಲ್ಲಿ ಏರ್ಪಡಿಸಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನದಲ್ಲಿ ಅವರು ಮಾತನಾಡಿ, ಕಳೆದೆರಡು ವರ್ಷದಲ್ಲಿ ಕೊರೋನಾ ವೈರಸ್ ತುರ್ತು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ. ಉತ್ತಮ ಗುಣಮಟ್ಟದ ಲಸಿಕೆಯನ್ನು ದೇಶವಾಸಿಗಳಿಗೆ ಉಚಿತವಾಗಿ ನೀಡಲಾಗಿದೆ. ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ(Ayushman Bharat karnataka) ಉತ್ತಮ ಆರೋಗ್ಯ ಯೋಜನೆಯಾಗಿದೆ. ರಾಜ್ಯದಲ್ಲಿ ಈ ಯೋಜನೆಯಡಿ 3.11 ಕೋಟಿ ಜನ ನೋಂದಣಿ ಮಾಡಿಸಿದ್ದಾರೆ. ರಾಜ್ಯದ 2.32 ಕೋಟಿ ಸದಸ್ಯರಿಗೆ ಮನೆಗಳನ್ನು ನಿರ್ಮಿಸಿಕೊಡಲಾಗಿದೆ. ಅತ್ಯಲ್ಪ ಅವಧಿಯಲ್ಲಿ ಜಿಲ್ಲೆಯ 2.90 ಮನೆಗಳಿಗೆ ಶುದ್ಧ ಕುಡಿಯುವ ನೀರಿನ ನಲ್ಲಿ ಸಂಪರ್ಕ ಕಲ್ಪಿಸಲಾಗಿದೆ ಎಂದು ಹೇಳಿದರು.
ಯಡಿಯೂರಪ್ಪ ಅವರನ್ನು ನೇಗಿಲಯೋಗಿ ಎಂದಿದ್ದರು ವಾಜಪೇಯಿ: ಸಂಸದ ಬಿವೈ ರಾಘವೇಂದ್ರ
2008ರಲ್ಲಿ ಅನುಷ್ಠಾನಕ್ಕೆ ತರಲಾಗಿದ್ದ ಭಾಗ್ಯಲಕ್ಷ್ಮೇ ದೂರದೃಷ್ಟಿಯೋಜನೆಯಡಿ ಜಿಲ್ಲೆಯಲ್ಲಿ 1.50 ಲಕ್ಷ ಯುವತಿಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಸರಬರಾಜು ಮಾಡಲಾಗಿದೆ. ಈ ಯೋಜನೆಯಿಂದಾಗಿ ರಾಜ್ಯ ಸರ್ಕಾರ ಪ್ರತಿವರ್ಷ .20,000 ಕೋಟಿಯನ್ನು ವಿದ್ಯುತ್ ನಿಗಮಕ್ಕೆ ರೈತರ ಪರವಾಗಿ ಪಾವತಿಸಿದೆ. ರಸಗೊಬ್ಬರ ಸಬ್ಸಿಡಿ ನೀಡಿ, ರೈತರ ಆರ್ಥಿಕ ಹೊರೆ ಕಡಿಮೆಗೊಳಿಸಲಾಗಿದೆ. ಜಿಲ್ಲೆಯಲ್ಲಿ ರಸ್ತೆ, ರೈಲು, ವಿಮಾನ ಸೇರಿದಂತೆ ಎಲ್ಲ ಸಂಚಾರಕ್ಕೆ ಪೂರಕ ವಾತಾವರಣ ನಿರ್ಮಿಸಲಾಗಿದೆ. ವಿಶೇಷವಾಗಿ ರೈಲು ಸಂಪರ್ಕ ಕಲ್ಪಿಸುವಲ್ಲಿ ವಿಶೇಷ ಕ್ರಾಂತಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಅಂತರ್ಜಾತಿ ವಿವಾಹಿತರು, ಫಸಲ್ ಬಿಮಾ, ರೈತ ವಿದ್ಯಾನಿಧಿ, ಜೀವಜಲ ಯೋಜನೆ, ಟೂರಿಸ್ಟ್ ಟ್ಯಾಕ್ಸಿ ಖರೀದಿ ಯೋಜನೆ, ನಿವೇಶನ ಹಕ್ಕುಪತ್ರ, ಗಂಗಾಕಲ್ಯಾಣ, ಉನ್ನತ ಶಿಕ್ಷಣಕ್ಕೆ ಸಹಾಯಧನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್, ಕೃಷಿಕರಿಗೆ ಯಂತ್ರೋಪಕರಣ ಟ್ರ್ಯಾಕ್ಟರ್, ಟಿಲ್ಲರ್, ಅಡಕೆ ಕೊಯ್ಯುವ ದೋಟಿ ಸೇರಿದಂತೆ ವಿವಿಧ ಇಲಾಖೆಗಳ ಸಹಸ್ರಾರು ಫಲಾನುಭವಿಗಳಿಗೆ ಸೌಲಭ್ಯವನ್ನು ವಿತರಿಸಲಾಯಿತು.
ಸಮ್ಮೇಳನದಲ್ಲಿ ಶಾಸಕ ಕೆ.ಎಸ್.ಈಶ್ವರಪ್ಪ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಕುಮಾರ್ ಬಂಗಾರಪ್ಪ, ವಿಧಾನ ಪರಿಷತ್ತು ಸದಸ್ಯರಾದ ಡಿ.ಎಸ್. ಅರುಣ್, ಎಸ್.ರುದ್ರೇಗೌಡ, ಆಯನೂರು ಮಂಜುನಾಥ್, ನಾರಾಯಣಸ್ವಾಮಿ, ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್, ಸೂಡಾ ಅಧ್ಯಕ್ಷ ನಾಗರಾಜ್, ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಮಡಿವಾಳ ಅಭಿವೃದ್ಧಿ ನಿಗಮ ಅಧ್ಯಕ್ಷ ತಲ್ಲೂರು ರಾಜು, ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಜಿಪಂ ಸಿಇಒ ಎಂ.ಡಿ.ಪ್ರಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್ ಮತ್ತಿತರರು ಇದ್ದರು.
ಚತುಷ್ಪಥ ರಸ್ತೆಗೆ .669 ಕೋಟಿ: ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ(Home minister araga jnanendra) ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಶಿವಮೊಗ್ಗ- ಆನಂದಪುರ ಚತುಷ್ಪಥ ರಸ್ತೆ ನಿರ್ಮಾಣಕ್ಕೆ .669 ಕೋಟಿ ಹಾಗೂ ಹೊಸೂರು, ತಾಳಗುಪ್ಪ ಸೇರಿದಂತೆ ಸಾಗರ ತಾಲೂಕಿನ ಮೂರು ಮೇಲ್ಸೇತುವೆಗಳ ನಿರ್ಮಾಣಕ್ಕೆ .200 ಕೋಟಿ ಅನುದಾನ ಈಗಷ್ಟೆಬಿಡುಗಡೆಯಾಗಿದೆ ಎಂದರು.
ಜಿಲ್ಲೆಯ ಲಕ್ಷಾಂತರ ಫಲಾನುಭವಿಗಳು ಕೇಂದ್ರ ಅಥವಾ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಾಗಿ ಯಾವುದೇ ಅಡತಡೆಗಳಿಲ್ಲದೆ ಸೌಲಭ್ಯ ಪಡೆದಿರುವುದು ಆಡಳಿತಾರೂಢ ಸರ್ಕಾರದ ಮಹತ್ವದ ಸಾಧನೆಯಾಗಿದೆ ಎಂದರು.
ರೈತರ ಸಮಗ್ರ ಅಭಿವೃದ್ಧಿಗೆ ಯೋಜನೆಗಳು ಜಾರಿ: ಸಂಸದ ರಾಘವೇಂದ್ರ
ಇತ್ತೀಚಿನ ರೈಲ್ವೆ ಕ್ಷೇತ್ರದ ಕಾರ್ಯಗಳಿಂದಾಗಿ ಜಿಲ್ಲೆಯ ಜನರು ದೇಶಾದ್ಯಂತ ಸಂಚರಿಸಲು ಅವಕಾಶ ದೊರೆತಂತಾಗಿದೆ. ಸ್ವಾತಂತ್ರ್ಯಾನಂತರದ ಹಲವು ದಶಕಗಳಲ್ಲಿ ಆಗದಿರುವ ರೈಲ್ವೆ ಅಭಿವೃದ್ಧಿ ಕಾರ್ಯಗಳು ಕೆಲವೇ ವರ್ಷಗಳಲ್ಲಿ ಕಾರ್ಯರೂಪಕ್ಕೆ ಬಂದಿವೆ. ವಿಶೇಷವಾಗಿ ಶಿವಮೊಗ್ಗ -ರಾಣೇಬೆನ್ನೂರು ರೈಲು ಮಾರ್ಗಕ್ಕೆ .1250 ಕೋಟಿ ವೆಚ್ಚದ ಯೋಜನೆ ಅನುಷ್ಠಾನ ಕಾರ್ಯ ಭರದಿಂದ ಸಾಗಿದೆ. ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದ ಬೆಳವಣಿಗೆಗೆ ಸಾಕಷ್ಟುಅನುದಾನ ಬಿಡುಗಡೆಗೊಂಡಿದೆ
- ಬಿ.ವೈ.ರಾಘವೇಂದ್ರ, ಸಂಸದ