ಶಿವಮೊಗ್ (ಜು.27) : ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಬಹು ಉಪಯೋಗಿ ಬಂದರು ಸ್ಥಾಪನೆ ಮತ್ತು ಗಂಗೊಳ್ಳಿ-ಕುಂದಾಪುರ ನಡುವೆ ಸೇತುವೆ ನಿರ್ಮಾಣ ಮಾಡಲು ಕ್ರಮ ಜರುಗಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಬಂದರು, ಹಡಗು ಮತ್ತು ಜಲಸಾರಿಗೆ ಸಚಿವ ಸರ್ಬಾನಂದ ಸೋನಾವಾಲಾ ಅವರನ್ನು ಭೇಟಿ ಮಾಡಿ ಮನವಿ ಅರ್ಪಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj Bommai)(ಯವರು ಜೊತೆಯಲ್ಲಿ ಸಚಿವರನ್ನು ಭೇಟಿ ಮಾಡಿದ ಸಂಸದರು ಈ ಎರಡೂ ಯೋಜನೆಯನ್ನು ತುರ್ತಾಗಿ ಪರಿಗಣಿಸಿ, ಆದ್ಯತೆಯ ಮೇಲೆ ಈ ಯೋಜನೆಗೆ ಮಂಜೂರಾತಿ ದೊರಕಿಸಿಕೊಡಲು ಮನವಿ ಮಾಡಿದರು.
ಮೋದಿ ಸಮರ್ಥ ಆಡಳಿತ ಫಲವಾಗಿ 2024ರಲ್ಲೂ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ರಾಘವೇಂದ್ರ
ಸಾಗರಮಾಲಾ ಯೋಜನೆ(Sagaramala Yojane)ಯಡಿ ಬಹು ಉಪಯೋಗಿ ಬಂದರು ಯೋಜನೆ ಅನುಷ್ಠಾನಗೊಳಿಸಿದಲ್ಲಿ ಮೀನುಗಾರಿಕೆ, ಪ್ರವಾಸೋಧ್ಯಮ, ವಾಣಿಜ್ಯ ಮತ್ತು ಆರ್ಥಿಕ ಅಭಿವೃದ್ಧಿಗೆ ಪೂರಕ ಅವಕಾಶಗಳು ಒದಗಿ ಬರುತ್ತದೆ ಎಂದು ಮನವಿಯಲ್ಲಿ ಹೇಳಿದರು.
ಇದೇ ರೀತಿ ಗಂಗೊಳ್ಳಿ-ಕುಂದಾಪುರ(Gangolli-Kundapura) ಸೇತುವೆ ನಿರ್ಮಾಣದ ಕುರಿತು ಪ್ರಸ್ತಾಪಿಸಿದ್ದು, ಗಂಗೊಳ್ಳಿಯಿಂದ ಕುಂದಾಪುರಕ್ಕೆ ಬರಲು 18 ಕಿ. ಮೀ. ಸುತ್ತಿ ಬಳಸಿ ಬರಬೇಕಾಗುತ್ತದೆ. ಗಂಗೊಳ್ಳಿ ಮೀನುಗಾರಿಕಾ ಬಂದರು ಮತ್ತು ವಾಣಿಜ್ಯ ಕೇಂದ್ರವಾದ ಕುಂದಾಪುರ ಸಂಪರ್ಕಿಸಲು ಸೇತುವೆ ನಿರ್ಮಿಸಿದಲ್ಲಿ ಗಂಗೊಳ್ಳಿಯಿಂದ ಕುಂದಾಪುರ ಬಹಳ ಹತ್ತಿರವಾಗುತ್ತದೆ. ಇದರಿಂದ ಮೀನುಗಾರಿಕೆ ಸೇರಿದಂತೆ ಹಲವಾರು ಲಾಭಗಳು ಈ ಪ್ರದೇಶಕ್ಕೆ ಸಿಗಲಿದೆ ಎಂದು ತಿಳಿಸಿದರು.
'ಸಂಸದ ಬಿವೈ ರಾಘವೇಂದ್ರ ಸಚಿವರಾಗಲಿ'
ಮನವಿ ಸ್ವೀಕರಿಸಿದ ಸಚಿವರು ಈ ಎರಡೂ ಯೋಜನೆಯನ್ನು ಜಾರಿಗೆ ತರುವ ಸಂಬಂಧ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು. ನಿಕಟಪೂರ್ವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ(B.S.Yadiyurappa) ಅವರು ಸದರಿ ಯೋಜನೆಗಳ ಬಗ್ಗೆ ಹಿಂದೆಯೇ ಪತ್ರ ಬರೆದಿದ್ದು, ಪಿಪಿಪಿ ಮಾದರಿಯಲ್ಲಿ ಬಹು ಉಪಯೋಗಿ ಬಂದರು ನಿರ್ಮಿಸಲು ಟೆಂಡರ್ ಕರೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಎರಡೂ ಯೋಜನೆಗಳಿಗೆ ತಮ್ಮ ಸರ್ಕಾರ ಸಹಕರಿಸಲಿದೆ ಎಂದು ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ತಿಳಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಹಾಯಕ ಸಚಿವ ಶ್ರೀಪಾದ್ ನಾಯಕ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಮೂಲಭೂತ ಸೌಕರ್ಯ ಅಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಇದ್ದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಬಹು ಉಪಯೋಗಿ ಬಂದರು ಸ್ಥಾಪನೆ ಮತ್ತು ಗಂಗೊಳ್ಳಿ-ಕುಂದಾಪುರ ನಡುವೆ ಸೇತುವೆ ನಿರ್ಮಾಣ ಮಾಡಲು ಕ್ರಮ ಜರುಗಿಸುವಂತೆ ಸಂಸದ ಬಿ. ವೈ. ರಾಘವೇಂದ್ರ ಅವರು ಕೇಂದ್ರ ಬಂದರು, ಹಡಗು ಮತ್ತು ಜಲಸಾರಿಗೆ ಸಚಿವ ಸರ್ಬಾನಂದ ಸೋನಾವಾಲಾ ಅವರನ್ನು ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರ ಜೊತೆ ಭೇಟಿ ಮಾಡಿ ಮನವಿ ಅರ್ಪಿಸಿದರು.