ನಂದಿ ಬೆಟ್ಟಕ್ಕೆ ಖಾಸಗಿ ವಾಹನಗಳ ನಿಷೇಧಕ್ಕೆ ಚಿಂತನೆ: ಯಾಕೆ ಗೊತ್ತಾ?

By Kannadaprabha News  |  First Published Sep 2, 2023, 8:23 PM IST

ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಇನ್ಮುಂದೆ ಖಾಸಗಿ ವಾಹನಗಳ ಪ್ರವೇಶವನ್ನು ನಿಷೇಧಿಸಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ. ಬೆಂಗಳೂರಿನಿಂದ 60 ಕಿ.ಮೀ ದೂರದಲ್ಲಿರುವ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ವಾರಾಂತ್ಯ ಮತ್ತು ರಜೆ ದಿನಗಳಲ್ಲಿ ಸಾಕಷ್ಟು ಪ್ರವಾಸಿಗರು ಭೇಟಿ ನೀಡುತ್ತಾರೆ. 
 


ಚಿಕ್ಕಬಳ್ಳಾಪುರ (ಸೆ.02): ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಇನ್ಮುಂದೆ ಖಾಸಗಿ ವಾಹನಗಳ ಪ್ರವೇಶವನ್ನು ನಿಷೇಧಿಸಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ. ಬೆಂಗಳೂರಿನಿಂದ 60 ಕಿ.ಮೀ ದೂರದಲ್ಲಿರುವ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ವಾರಾಂತ್ಯ ಮತ್ತು ರಜೆ ದಿನಗಳಲ್ಲಿ ಸಾಕಷ್ಟು ಪ್ರವಾಸಿಗರು ಭೇಟಿ ನೀಡುತ್ತಾರೆ. ಇದರಿಂದ ಟ್ರಾಫಿಕ್‌ ಸಮಸ್ಯೆ ಕೂಡ ಉಂಟಾಗುತ್ತಿದೆ. ಹಾಗಾಗಿ ಪ್ರವಾಸಿಗರಿಗಾಗಿ ಎಲೆಕ್ಟ್ರಾನಿಕ್‌ ಬಸ್ಸುಗಳನ್ನು ಕಲ್ಪಿಸುವ ಬಗ್ಗೆ ಚರ್ಚೆ ನಡೆದಿದೆ.

ಇದು ಪ್ರವಾಸೋದ್ಯಮ ಇಲಾಖೆಯ ಯೋಜನೆಯಾಗಿದ್ದು, ಮುಂದಿನ 6-8 ತಿಂಗಳಲ್ಲಿ ನಂದಿ ಬೆಟ್ಟವನ್ನು ಒಂದು ದಿನದ ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ. ಹಾಗಾಗಿ ನಂದಿಬೆಟ್ಟಸುತ್ತಮುತ್ತಲಿನ ಪ್ರದೇಶದಲ್ಲಿ ಖಾಸಗಿ ವಾಹನಗಳ ಸಂಚಾರ ಕಡಿಮೆ ಮಾಡುವ ಮೂಲಕ ಪ್ರವಾಸಿಗರಿಗೆ ಪ್ರಕೃತಿಯ ರಮಣೀಯ ಸೌಂದರ್ಯ ಮತ್ತು ಐತಿಹಾಸಿಕ ಸ್ಥಳದ ಮಹತ್ವವನ್ನು ಆನಂದಿಸಲು ಸುರಕ್ಷಿತ ವಾತಾವರಣವನ್ನು ಸೃಷ್ಟಿಸಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ.

Tap to resize

Latest Videos

ಮಳೆಗಾಗಿ ಮಕ್ಕಳಿಗೆ ಮದುವೆ: ಹಳೆಯ ಸಂಪ್ರದಾಯದ ಮೊರೆ ಹೋದ ಗ್ರಾಮಸ್ಥರು

ಪ್ರವಾಸಿ ತಾಣಗಳ ಅಭಿವೃದ್ಧಿಗೆ ಕ್ರಮ: ನಂದಿ ಬೆಟ್ಟಕ್ಕೆ ಪ್ರವಾಸಿಗರನ್ನು ಆಕರ್ಷಿಸಲು ನಿರ್ಮಾಣಗೊಳ್ಳಲಿರುವ ರೋಪ್‌ ವೇ ಸೌಲಭ್ಯವೂ ದೊರಕಲಿದೆ. ಅಲ್ಲದೆ ನಂದಿ ಬೆಟ್ಟವನ್ನು ಪ್ರವಾಸೋದ್ಯಮ ತಾಣವನ್ನಾಗಿ ಇನ್ನೂ ಹೆಚ್ಚು ಅಭಿವೃದ್ಧಿಪಡಿಸಲಾಗುವುದು. ಜೊತೆಗೆ 9 ನೇ ಶತಮಾನದ ಭೋಗ ನಂದೀಶ್ವರ ದೇವಸ್ಥಾನವನ್ನು ಧ್ವನಿ ಮತ್ತು ವಿಶೇಷ ವಿದ್ಯುತ್‌ ದೀಪಗಳಿಂದ ಕಂಗೊಳಿಸಲಿದೆ. ಸುತ್ತಮುತ್ತಲಿನ ಪರಿಸರ ಮತ್ತು ಪರಂಪರೆಯನ್ನು ಗಮನದಲ್ಲಿಟ್ಟುಕೊಂಡು ಈ ತಾಣವನ್ನು ಅಭಿವೃದ್ಧಿಪಡಿಸಲು ಸರ್ಕಾರ ಉದ್ದೇಶಿಸಿದೆ.

ನಂದಿ ಬೆಟ್ಟವನ್ನು ಅಪಘಾತ ವಲಯವೆಂದು ಈಗಾಗಲೇ ಪರಿಗಣಿಸಲಾಗಿರುವುದರಿಂದ, ಹೊಸ ವರ್ಷ ಮತ್ತು ಇತರ ಪ್ರಮುಖ ರಜಾದಿನಗಳಲ್ಲಿ ಬೆಟ್ಟವನ್ನು ಸಾರ್ವಜನಿಕರ ಪ್ರವೇಶಕ್ಕೆ ಸಂಪರ್ಕಿಸುವ 2 ಕಿಮೀ ವ್ಯಾಪ್ತಿಯಲ್ಲಿ ಪೊಲೀಸರು ಈಗಾಗಲೇ ಬೈಕ್‌ಗಳು ಮತ್ತು ನಾಲ್ಕು ಚಕ್ರದ ವಾಹನಗಳ ಸಂಚಾರವನ್ನು ನಿಷೇಧಿಸಿದ್ದಾರೆ.

ಸತತ 2 ಬಾರಿ ಶಾಸಕರನ್ನಾಗಿ ಆಯ್ಕೆ ಮಾಡಿದಲ್ಲಿ ಸಕಲ ಸೌಲಭ್ಯ ಕಲ್ಪಿಸುವೆ: ಪ್ರದೀಪ್‌ ಈಶ್ವರ್‌

ನಂದಿ ಬೆಟ್ಟದ ಕೆಳಗೆ ಪಾರ್ಕಿಂಗ್‌: ನಂದಿ ಬೆಟ್ಟವನ್ನು ಪ್ರವಾಸಿಗರಿಗೆ ಸುರಕ್ಷಿತ ಪ್ರವಾಸಿ ತಾಣವನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯೂ ಖಾಸಗಿ ವಾಹನಗಳನ್ನು ಬೆಟ್ಟಕ್ಕೆ ಪ್ರವೇಶಿಸುವುದನ್ನು ನಿಷೇಧಿಸಲು ಮುಂದಾಗಿದ್ದು ಈ ಬಗ್ಗೆ ಚಿಂತನೆ ನೆಡಸಿ, ಖಾಸಗಿ ವಾಹನಗಳ ಬದಲಾಗಿ ಪ್ರವಾಸಿಗರನ್ನು ಬೆಟ್ಟಕ್ಕೆ ತಲುಪಿಸಲು ಎಲೆಕ್ಟ್ರಾನಿಕ್‌ ಬಸ್‌ಗಳನ್ನು ಒದಗಿಸಲು ಸರ್ಕಾರ ನಿರ್ಧರಿಸಿದೆ. ಈಗಾಗಲೆ ನಂದಿಬೆಟ್ಟದ ಅಡಿಯಲ್ಲಿ 3 ಎಕರೆ ಜಾಗವನ್ನು ಸಹಾ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಿಂದ ಮಂಜೂರು ಮಾಡಿಸಿ ಕೊಂಡಿದ್ದು ಅಲ್ಲಿ ಎಲ್ಲಾ ವಾಹನಗಳ ಪಾರ್ಕಿಂಗ್‌ಗೆ ವ್ಯೆವಸ್ಥೆ ಮಾಡಲು ನಿರ್ಧರಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

click me!