ವೈದ್ಯಕೀಯ ಸಚಿವ ಡಾ. ಶರಣ ಪ್ರಕಾಶ ಆರ್ ಪಾಟೀಲ ಅವರು ಮಾತನಾಡಿ, ಈ ವರ್ಷ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಕನಕಪುರದಲ್ಲಿ ಸ್ಥಾಪಿಸಲು ಚಿಂತಿಸಲಾಗಿದೆ ಎಂದು ಸಚಿವರು ಈ ವೇಳೆ ತಿಳಿಸಿದರು.
ಚಿಕ್ಕಬಳ್ಳಾಪುರ (ಸೆ.02): ಜಿಲ್ಲೆಯ ಮುದ್ದೇನಹಳ್ಳಿಯ ವಿಟಿಯು ಕ್ಯಾಂಪಸ್‌ನಲ್ಲಿ ತಾತ್ಕಾಲಿಕವಾಗಿ ನಡೆಯುತ್ತಿರುವ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸೆ. 15ರಂದು ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಜನ್ಮ ದಿನದಂದು ರಾಷ್ಟ್ರೀಯ ಹೆದ್ದಾರಿ 44ರ ಅರೂರು ಬಳಿ ನಿರ್ಮಾಣವಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನ ನೂತನ ಕಟ್ಟಡಕ್ಕೆ ವರ್ಗಾಯಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ ಪ್ರಕಾಶ ಆರ್.ಪಾಟೀಲ ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ರೊಂದಿಗೆ ಶುಕ್ರವಾರ ಚಿಕ್ಕಬಳ್ಳಾಪುರ ತಾಲ್ಲೂಕಿನ ವಿವಿಧ ಕಾಮಗಾರಿಗಳನ್ನು ಶುಕ್ರವಾರ ಪರಿಶೀಲಿಸಿ ಕೊನೆಯದಾಗಿ ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ನಂದಿ ಬೆಟ್ಟಕ್ಕೆ ಖಾಸಗಿ ವಾಹನಗಳ ನಿಷೇಧಕ್ಕೆ ಚಿಂತನೆ: ಯಾಕೆ ಗೊತ್ತಾ?
ನೂತನ ಕಟ್ಟಡದಲ್ಲಿ ಸಕಲ ಸೌಲಭ್ಯ: ಕಳೆದ ಎರಡು ಶೈಕ್ಷಣಿಕ ಸಾಲಿನಲ್ಲಿ ದಾಖಲಾಗಿರುವ 200 ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಈ ಸಾಲಿನ 100 ವಿದ್ಯಾರ್ಥಿಗಳ ಕಲಿಕಾ ಪ್ರಕ್ರಿಯೆಗೆ ಬೇಕಾದ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸುಸಜ್ಜಿತವಾಗಿ ನೂತನ ಕಟ್ಟಡದಲ್ಲಿ ಒದಗಿಸಲಾಗುವುದು. ಈಗಾಗಲೇ ಈ ಕಾಲೇಜನ್ನು ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳು ಹೆಚ್ಚಿನ ಆತಂಕ ಪಡುವ ಅಗತ್ಯವಿಲ್ಲ. ಮುಂದಿನ ಕೆಲ ದಿನಗಳಲ್ಲಿ ಜಿಲ್ಲಾಸ್ಪತ್ರೆಯನ್ನು ಸಹ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಹಂತ ಹಂತವಾಗಿ ವರ್ಗಾಯಿಸಲಾಗುತ್ತದೆ. ಒಟ್ಟಾರೆ ಪೂರ್ಣ ಪ್ರಮಾಣದಲ್ಲಿ ಅಂದರೆ ಎಲ್ಲಾ ಶೈಕ್ಷಣಿಕ ಸಾಲಿನ ನಾಲ್ಕೂ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳು ಕಲಿಯುವಂತಹ ಸರ್ಕಾರಿ ವೈದ್ಯಕೀಯ ಕಾಲೇಜು ನೂತನ ಕಟ್ಟಡದಲ್ಲಿ ಆರಂಭವಾಗಲು 5 ವರ್ಷ ಬೇಕಾಗಬುದು ಎಂದರು. .
ಸಚಿವದ್ವಯರು ಮೊದಲಿಗೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಅಂಗಟ್ಟಗ್ರಾಮದ ಬಳಿ 14.9 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸರ್.ಎಂ.ವಿಶ್ವೇಶ್ವರಯ್ಯ ನ್ಯಾಷನಲ್ ಇನ್ಸಿ$್ಟಟ್ಯೂಟ್ ಪಾರ್ ಸೂಪರ್ ಟ್ರೈನರ್ಸ್ ಸಂಸ್ಥೆಯ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು. ನಂತರ ಮುದ್ದೇನಹಳ್ಳಿ ಬಳಿ ಇರುವ ಸರ್.ಎಂ.ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದಲ್ಲಿ ತಾತ್ಕಾಲಿಕವಾಗಿ ಚಿಕ್ಕಬಳ್ಳಾಪುರ ವೈದ್ಯಕೀಯ ವಿಜ್ಞಾನ ಕಾಲೇಜಿಗೆ ಭೇಟಿ ನೀಡಿ, ಪರಿಶೀಲಿಸಿದರು. ಅಲ್ಲಿಂದ ನೇರವಾಗಿ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯನವರ ಸಮಾಧಿಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಿದರು.
ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು: ಈ ವೇಳೆ ಸುದ್ದಿಗಾರರೊಂದಿಗೆ ವೈದ್ಯಕೀಯ ಸಚಿವ ಡಾ. ಶರಣ ಪ್ರಕಾಶ ಆರ್ ಪಾಟೀಲ ಅವರು ಮಾತನಾಡಿ, ಈ ವರ್ಷ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಕನಕಪುರದಲ್ಲಿ ಸ್ಥಾಪಿಸಲು ಚಿಂತಿಸಲಾಗಿದೆ ಎಂದು ಸಚಿವರು ಈ ವೇಳೆ ತಿಳಿಸಿದರು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿ, ವಿಶ್ವೇಶ್ವರಯ್ಯ ನ್ಯಾಷನಲ್ ಇನ್ಸ್‌ಟಿಟ್ಯೂಟ್ ಪಾರ್ ಸೂಪರ್ ಟ್ರೈನರ್ಸ್ ಸಂಸ್ಥೆಯ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಈ ವರ್ಷಾಂತ್ಯದಲ್ಲಿ ಆರಂಭಿಸಲು ಚಿಂತಿಸಲಾಗಿದೆ. ಮುಂದಿನ ವರ್ಷದ ಮಾಚ್‌ರ್ ವೇಳೆಗೆ ಪೂರ್ಣಕಾಲಿಕವಾಗಿ ಆರಂಭಿಸಲಾಗುವುದು.
ಈ ಸಂಸ್ಥೆಯು ಖಾಸಗಿ ಸಹಭಾಗಿತ್ವದಲ್ಲಿ ಪಿ.ಪಿ.ಪಿ ಮಾದರಿಯಲ್ಲಿ 10 ಎಕರೆ ಜಾಗದಲ್ಲಿ ನಿರ್ಮಾಣವಾಗುತ್ತಿದೆ. ಸರ್ಕಾರ ಮಂಜೂರು ಮಾಡಿರುವ 14.9 ಕೋಟಿ ಅನುದಾನದ ಜೋತೆಗೆ 4.35 ಕೋಟಿ ಅನುದಾನವನ್ನು ಹೆಚ್ಚುವರಿಯಾಗಿ ನೀಡಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಶಾಸಕ ಪ್ರದೀಪ್ ಈಶ್ವರ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ನಿರ್ದೇಶಕ ಶ್ರೀನಿವಾಸ್, ಡೀಸಿ ಪಿ.ಎನ್.ರವೀಂದ್ರ, ಜಿಪಂ ಸಿಇಒ ಪ್ರಕಾಶ್.ಜಿ.ಟಿ. ನಿಟ್ಟಾಲಿ, ಎಸ್ಪಿ ಡಿ.ಎಲ್.ನಾಗೇಶ್, ಸರ್ಕಾರಿ ಮೆಡಿಕಲ್ ಕಾಲೇಜಿನ ಡೀನ್ ಡಾ.ಮಂಜುನಾಥ್, ಡಿಎಚ್‌ಒ ಡಾ. ಎಸ್ ಎಸ್ ಮಹೇಶ್ ಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕಿ ಮಂಜುಳಾದೇವಿ, ಮತ್ತಿತರರು ಇದ್ದರು.
ಸತತ 2 ಬಾರಿ ಶಾಸಕರನ್ನಾಗಿ ಆಯ್ಕೆ ಮಾಡಿದಲ್ಲಿ ಸಕಲ ಸೌಲಭ್ಯ ಕಲ್ಪಿಸುವೆ: ಪ್ರದೀಪ್ ಈಶ್ವರ್
ಸರ್ಕಾರ ರೈತರ ಹಿತ ಕಾಪಾಡಲಿದೆ: ಆಪರೇಷನ್ ಹಸ್ತದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವ ಶರಣ ಪ್ರಕಾಶ್.ಆರ್.ಪಾಟೀಲ್, ನಮ್ಮ ಮಾತು, ಕೆಲಸ ಜನರಿಗೆ ಉಪಯೋಗ ಆಗುವುದರ ಕಡೆಯಿದೆ. ಪತ್ರಕರ್ತರು ಕೂಡ ಜನರ ಅಭಿವೃದ್ಧಿ ಬಗ್ಗೆ ಏನಾದರೂ ಪ್ರಶ್ನೆಗಳನ್ನು ಕೇಳಬೇಕು. ಕಾವೇರಿ ನದಿ ನೀರಿನ ವಿಚಾರದಲ್ಲಿ ನಮ್ಮ ಸರ್ಕಾರ ರೈತರ ಹಿತ ಕಾಪಾಡಲಿದೆ. ಮತ್ತು ಸುಪ್ರೀಂ ಕೋರ್ಚ್ ಆದೇಶವನ್ನು ಪಾಲಿಸಲಿದೆ ಎಂದರು.