ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವೆ: ರಾಜೇಶ್‌ ಗೌಡ

Published : Apr 17, 2023, 08:41 AM IST
 ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವೆ: ರಾಜೇಶ್‌ ಗೌಡ

ಸಾರಾಂಶ

ಕಾರ್ಯಕರ್ತರ ಉಳಿವು ಮತ್ತು ಕ್ಷೇತ್ರದ ಅಭಿವೃದ್ಧಿಗಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಬಿಜೆಪಿ ಮುಖಂಡ ರಾಜೇಶ್‌ ಗೌಡ ತಿಳಿಸಿದ್ದಾರೆ.

  ಕುಣಿಗಲ್‌ :  ಕಾರ್ಯಕರ್ತರ ಉಳಿವು ಮತ್ತು ಕ್ಷೇತ್ರದ ಅಭಿವೃದ್ಧಿಗಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಬಿಜೆಪಿ ಮುಖಂಡ ರಾಜೇಶ್‌ ಗೌಡ ತಿಳಿಸಿದ್ದಾರೆ.  ಕುಣಿಗಲ್‌ ಪಟ್ಟಣದ ಗೃಹ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕಳೆದ ಹಲವಾರು ವರ್ಷಗಳಿಂದ ಬಿಜೆಪಿ ಹೆಸರಿನಲ್ಲಿ ನಾನು ಸಂಘಟನೆ ಮಾಡುತ್ತಾ, ಕ್ಷೇತ್ರದಲ್ಲಿ ಹಲವಾರು ಸೇವಾ ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದೇನೆ. ನನ್ನ ಸಾವಿರಾರು ಅಭಿಮಾನಿಗಳಿಗೆ ನಿರಾಸೆ ಮಾಡಲು ಸಾಧ್ಯವಿಲ್ಲ. ಪಕ್ಷ ಟಿಕೆಟ್‌ ನೀಡುವ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಂಡಿಲ್ಲ. ಕಾರ್ಯಕರ್ತರ ಉಳಿವು ಮತ್ತು ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುಮುಖ್ಯವಾಗಿದೆ ಎಂದರು.

ಡಿ.ಕೃಷ್ಣಕುಮಾರ್‌ ಹಾಗೂ ನನಗೆ ಯಾವುದೇ ದ್ವೇಷ ಇಲ್ಲ, ರಾಜಕೀಯದಲ್ಲಿ ಮಾತ್ರ ನಾವು ಸ್ಪರ್ಧಿಗಳಾಗಿದ್ದೇವೆ. ಮುಂದಿನ ದಿನಗಳಲ್ಲಿ ಕಾಲ ಬದಲಾದಂತೆ ರಾಜಕೀಯ ಬದಲಾಗುತ್ತದೆ. ಯಾವುದೇ ಒತ್ತಡಗಳು ಬಂದರೂ ಕೂಡ ನಾನು ಉಮೇದುವಾರಿಕೆ ವಾಪಸ್‌ ಪಡೆಯುವ ಪ್ರಶ್ನೆ ಇಲ್ಲ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಗೆಲುವು ತರುವ ವಿಶ್ವಾಸ ಇದೆ ಎಂದರು.

ಈ ಸಂದರ್ಭದಲ್ಲಿ ಪತ್ನಿ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.

ರಂಗೆರಿದ ಚುನಾವಣಾ ಪ್ರಚಾರ

  ತುಮಕೂರು :  ಚುನಾವಣೆಗೆ ಕೇವಲ 24 ದಿವಸಗಳು ಬಾಕಿಯಿರುವಾಗಲೇ ಸುಡು ಬಿಸಿಲಲ್ಲಿ ಅಭ್ಯರ್ಥಿಗಳು ಪ್ರಚಾರಕ್ಕೆ ಹೊರಟಿದ್ದಾರೆ.

ಈಗಾಗಲೇ 3 ಪ್ರಮುಖ ಪಕ್ಷಗಳಾದ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಬಹುತೇಕರಿಗೆ ಬಿ ಫಾರಂ ನೀಡಿದೆ. ಆಮ್‌ ಆದ್ಮಿ ಪಕ್ಷ ಕೂಡ ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಜಿಲ್ಲೆಯಲ್ಲಿ ಸ್ಟಾರ್‌ ನಾಯಕರೂ ಕೂಡ ಕಣದಲ್ಲಿದ್ದಾರೆ. ಮಾಜಿ ಡಿಸಿಎಂ ಹಾಗೂ ಮಾಜಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌, ಮಾಜಿ ಸಚಿವ ಟಿ.ಬಿ. ಜಯಚಂದ್ರ, ಮಾಜಿ ಶಾಸಕ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಕೆ.ಎನ್‌. ರಾಜಣ್ಣ ಕಣದಲ್ಲಿದ್ದಾರೆ.

ಸತತವಾಗಿ 4 ಬಾರಿ ವಿಧಾನಸಭೆಗೆ ಪ್ರವೇಶಿಸಿರುವ ಗುಬ್ಬಿ ಕಾಂಗ್ರೆಸ್‌ ಅಭ್ಯರ್ಥಿ ಜೆಡಿಎಸ್‌ನಿಂದ ಬಂದಿದ್ದು, ಅಭ್ಯರ್ಥಿಯಾಗಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಈ ಬಾರಿ ಪಕ್ಷಾಂತರ ಪರ್ವ ಕೂಡ ದೊಡ್ಡ ಮಟ್ಟದಲ್ಲಾಗಿದೆ. ಜೆಡಿಎಸ್‌ನಿಂದ ಬೆಮೆಲ್‌ ಕಾಂತರಾಜು, ಎಸ್‌.ಆರ್‌. ಶ್ರೀನಿವಾಸ್‌ ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬಂದಿದ್ದು, ಇಬ್ಬರೂ ಅಭ್ಯರ್ಥಿಗಳಾಗಿದ್ದಾರೆ. ಕಾಂಗ್ರೆಸ್‌ನಿಂದ ಮಾಜಿ ಸಂಸದ ಎಸ್‌.ಪಿ. ಮುದ್ದಹನುಮೇಗೌಡ ಬಿಜೆಪಿ ಬಂದಿದ್ದು, ಗುಬ್ಬಿಯಿಂದ ಬಿಜೆಪಿಯ ಬೆಟ್ಟಸ್ವಾಮಿ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದಾರೆ. ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಸೊಗಡು ಶಿವಣ್ಣ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಬಿಜೆಪಿಗೆ ಗುಡ್‌ ಬೈ ಹೇಳಿದ್ದಾರೆ.

3 ಪ್ರಮುಖ ರಾಜಕೀಯ ಪಕ್ಷಗಳಲ್ಲೂ ಬಂಡಾಯವಿದ್ದು, ಬಂಡಾಯದ ಮಧ್ಯೆಯೇ ಚುನಾವಣೆ ರಂಗು ಪಡೆದುಕೊಳ್ಳುತ್ತಿದೆ. ಜಿಲ್ಲೆಯಲ್ಲಿ 25 ಲಕ್ಷಕ್ಕೂ ಮತದಾರರಿದ್ದು, ಪುರುಷರಿಗಿಂತ ಅತಿ ಹೆಚ್ಚು ಮಹಿಳಾ ಮತದಾರರಿದ್ದು, ಯಾವೊಂದು ಪಕ್ಷವೂ ಮಹಿಳೆಗೆ ಟಿಕೆಟ್‌ ನೀಡಿಲ್ಲ. ಶೇ. 33ರಷ್ಟುಮಹಿಳಾ ಮೀಸಲಾತಿ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದ್ದರೂ, ಮಹಿಳೆರಿಗೆ ಟಿಕೆಟ್‌ ನೀಡದಿರುವ ಬಗ್ಗೆ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಸಚಿವರಿಬ್ಬರು ಅಖಾಡದಲ್ಲಿ:

4 ಬಾರಿ ಆಯ್ಕೆಯಾಗಿರುವ ಸಚಿವ ಮಾಧುಸ್ವಾಮಿ, ಎರಡು ಬಾರಿ ಆಯ್ಕೆಯಾಗಿ, ಈಗ ಸಚಿವರಾಗಿರುವ ಬಿ.ಸಿ.ನಾಗೇಶ್‌ ಅವರ ಭವಿಷ್ಯ ಕೂಡ ಏನಾಗಲಿದೆ ಎಂಬುದು ಕಾದುನೋಡಬೇಕಾಗಿದೆ.

PREV
Read more Articles on
click me!

Recommended Stories

Dharwad Love Jihad Case: ಲವ್ ಜಿಹಾದ್‌ಗೆ ಹೆದರಿ ಬಾಲಕಿ ಸಾವು; ಪ್ರತಿಭಟನೆ ಮಾಡಿದ ಬಜರಂಗದಳ ನಾಯಕನ ಮೇಲೆ ಕೇಸ್!
Karnataka Police: ಶಾಸಕರ ಶಿಫಾರಸಿಲ್ಲದೆ ಇನ್ನು ಪೊಲೀಸ್ ವರ್ಗಾವಣೆ? ಗೃಹ ಇಲಾಖೆ ಮಹತ್ವದ ಬದಲಾವಣೆ!