ಎಸ್ಸಿ-ಎಸ್ಟಿ ಜಾಗ ಮಾರಾಟ ನಿಷೇಧ ಕಾಯ್ದೆ ಜಾರಿಗಾಗಿ ಮುಂದುವರಿದ ಪ್ರತಿಭಟನೆ

By Suvarna News  |  First Published Jan 15, 2023, 9:14 PM IST

‘ಕರ್ನಾಟಕ ಪರಿಶಿಷ್ಟಜಾತಿ, ಪರಿಶಿಷ್ಟಪಂಗಡಗಳ ಭೂ ಪರಭಾರೆ ನಿಷೇಧ ಕಾಯ್ದೆ-1978’ ಯಥಾವತ್ತಾಗಿ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಿ ಪರಿಶಿಷ್ಟಜಾತಿ ಮತ್ತು ಪಂಗಡಗಳ ಜನರ ಭೂಮಿಯನ್ನು ರಕ್ಷಿಸಬೇಕು ಎಂದು ನಡೆಯುತ್ತಿರುವ ಅಹೋರಾತ್ರಿ ಧರಣಿ 13 ನೇ ದಿನಕ್ಕೆ ಕಾಲಿಟ್ಟಿದೆ.


ಬೆಂಗಳೂರು (ಜ.15): ‘ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಭೂ ಪರಭಾರೆ ನಿಷೇಧ(ಪಿಟಿಸಿಎಲ್‌)ಕಾಯ್ದೆ-1978’ ಯಥಾವತ್ತಾಗಿ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಿ ಪರಿಶಿಷ್ಟಜಾತಿ ಮತ್ತು ಪಂಗಡಗಳ ಜನರ ಭೂಮಿಯನ್ನು ರಕ್ಷಿಸಬೇಕು ಎಂದು ಭೂಮಿ ಹೋರಾಟ ಸಮಿತಿ ಅಧ್ಯಕ್ಷ ಚಂದ್ರಪ್ಪ ಆಗ್ರಹಿಸಿದರು. ‘ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ-ಕರ್ನಾಟಕ’ ಸಂಘಟನೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿಯ 13 ನೇ ದಿನವಾದ ಶನಿವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಹಿಂದೆ ದೇವರಾಜ ಅರಸು ಅವರ ನೇತೃತ್ವದ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದ ಈ ಕಾಯ್ದೆಯನ್ನು ಸರಿಯಾಗಿ ಅನುಷ್ಠಾನ ಮಾಡದೇ ಇರುವುದರಿಂದ ಕಾಯ್ದೆಯ ವಿರುದ್ಧ ಅನೇಕ ತೀರ್ಪುಗಳು ಹೊರಬಂದು ದಲಿತರು ಭೂಮಿ ಕಳೆದುಕೊಳ್ಳುತ್ತಿದ್ದಾರೆ. ಪರಿಶಿಷ್ಟರಿಗೆ ಮಂಜೂರಾಗಿರುವ ಭೂಮಿಯನ್ನು ಕೆಲ ಸಚಿವರು, ಶಾಸಕರು ಬೇನಾಮಿ ಹೆಸರಿನಲ್ಲಿ ಖರೀದಿಸಿರುವುದರಿಂದ ಯಶಸ್ವಿ ಅನುಷ್ಠಾನಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಆದ್ದರಿಂದ ಸರ್ಕಾರ ತಕ್ಷಣ ಬಡ ದಲಿತರ ಭೂಮಿ ರಕ್ಷಿಸಬೇಕು ಎಂದು ಅವರು ಒತ್ತಾಯಿಸಿದರು.

Latest Videos

undefined

ಸಂಚಾರ ವಿಭಾಗದ ವಿಶೇಷ ಆಯುಕ್ತರಿಗೆ ಟೆಕ್ಕಿ ಪತ್ರ
ರಾಜಧಾನಿಯಲ್ಲಿ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳ ಬಳಿ ‘ನೋ ಪಾರ್ಕಿಂಗ್‌’ ಸ್ಥಳಗಳಲ್ಲಿ ನಿಲುಗಡೆ ಮಾಡಿದ ವಾಹನಗಳ ಮಾಲಿಕರ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸುವ ಬದಲು ವಾಹನ ಪಾರ್ಕಿಂಗ್‌ಗೆ ಸೂಕ್ತ ಜಾಗ ಕಲ್ಪಿಸದ ವಾಣಿಜ್ಯ ಕಟ್ಟಡಗಳ ಮಾಲಿಕರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಸಾರ್ವಜನಿಕರೊಬ್ಬರು ನಗರ ಸಂಚಾರ ವಿಭಾಗದ ವಿಶೇಷ ಆಯುಕ್ತರಿಗೆ ಮನವಿ ಮಾಡಿದ್ದಾರೆ.

ನಿವೇಶನ ಹಂಚಿಕೆ ಹೆಸರಲ್ಲಿ ಭೂಮಿ ಕಸಿಯುವ ಯತ್ನ: ಶಾಸಕ ಶರತ್‌ ಬಚ್ಚೇಗೌಡ

ಜೆ.ಪಿ.ನಗರದ ಸಾಫ್‌್ಟವೇರ್‌ ಎಂಜಿನಿಯರ್‌ ಧನಂಜಯ ಪದ್ಮನಾಭಾಚಾರ್‌ ಅವರು ನಗರದ ವಾಹನಗಳ ಪಾರ್ಕಿಂಗ್‌ ಅವ್ಯವಸ್ಥೆಯ ಬಗ್ಗೆ ನಗರ ಸಂಚಾರ ವಿಭಾಗದ ವಿಶೇಷ ಆಯುಕ್ತ ಡಾ ಎಂ.ಎ.ಸಲೀಂ ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ.

Chikkaballapur Utsav: ಚಿಕ್ಕಬಳ್ಳಾಪುರಕ್ಕೆ ವಿಶ್ವ ಭೂಪಟದಲ್ಲಿ ವಿಶಿಷ್ಟ ಸ್ಥಾನ: ಸಚಿವ ಸುಧಾಕರ್‌ ಹರ್ಷ

ಬಿಬಿಎಂಪಿ ಕಟ್ಟಡ ಬೈಲಾದಲ್ಲಿ ವಾಣಿಜ್ಯ ಕಟ್ಟಡಗಳ ಬಳಿ ವಾಹನಗಳ ಪಾರ್ಕಿಂಗ್‌ಗೆ ಎಷ್ಟುಜಾಗ ಬಿಡಬೇಕು ಎಂಬುದರ ಬಗ್ಗೆ ಸ್ಪಷ್ಟವಾಗಿ ನಿಯಮ ರೂಪಿಸಲಾಗಿದೆ. ಆದರೆ, ನಗರದ ಬಹುತೇಕ ಕಟ್ಟಡಗಳ ಬಳಿ ವಾಹನಗಳ ಪಾರ್ಕಿಂಗ್‌ಗೆ ಜಾಗವೇ ಇಲ್ಲ. ವಾಹನಗಳಿಗೆ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸದ ಕಟ್ಟಡದ ಮಾಲಿಕರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವ ಬದಲು ರಸ್ತೆ ಬದಿ ವಾಹನ ನಿಲ್ಲಿಸುವ ಸಾರ್ವಜನಿಕರ ಮೇಲೆ ಪ್ರಕರಣ ದಾಖಲಿಸುವುದು ಎಷ್ಟುಸರಿ? ನಗರದ ವಾಣಿಜ್ಯ ಕಟ್ಟಡಗಳಗಳ ಸೆಲ್ಲಾರ್‌ ಅಥವಾ ಬೇಸ್‌ಮೆಂಟ್‌ಗಳಲ್ಲಿ ಕಡ್ಡಾಯವಾಗಿ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸುವಂತೆ ಆದೇಶಿಸಬೇಕು. ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಬಳಿ ಸಂದರ್ಶಕರ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕಲ್ಪಿಸಲು ಸೂಚಿಸುವಂತೆ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

click me!