ತಮಿಳುನಾಡಿಗೆ ಕಾವೇರಿ ನೀರು: ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ಪ್ರತಿಭಟನೆ

By Kannadaprabha NewsFirst Published Sep 7, 2023, 1:23 PM IST
Highlights

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ನಿರಂತರ ಪ್ರತಿಭಟನೆ ನಡೆಸುತ್ತಿರುವ ಕನ್ನಡ ಚಳವಳಿಗಾರರ ಪ್ರತಿಭಟನೆ 7ನೇ ದಿನಕ್ಕೆ ಕಾಲಿಟ್ಟಿದ್ದು ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ನಗರದಲ್ಲಿ ಪ್ರತಿಭಟನೆ ನಡೆಸಿದರು. 

ಚಾಮರಾಜನಗರ (ಸೆ.07): ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ನಿರಂತರ ಪ್ರತಿಭಟನೆ ನಡೆಸುತ್ತಿರುವ ಕನ್ನಡ ಚಳವಳಿಗಾರರ ಪ್ರತಿಭಟನೆ 7ನೇ ದಿನಕ್ಕೆ ಕಾಲಿಟ್ಟಿದ್ದು ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಡಳಿತ ಭವನದ ಪ್ರವೇಶ ದ್ವಾರದ ಬಳಿ ಜಮಾಯಿಸಿದ ಪ್ರತಿಭಟನಾನಿರತರು ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ತಮಿಳುನಾಡು, ಸರ್ಕಾರ, ಕಾವೇರಿ ನಿರ್ವಹಣಾ ಮಂಡಳಿ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವ ಕ್ರಮವನ್ನು ವಿರೋಧಿಸಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ನಿರಂತರ ಹೋರಾಟ ಮಾಡುತ್ತಿದ್ದರೂ ಸರ್ಕಾರಕ್ಕೆ ಕಣ್ಣು ಇಲ್ಲ. ರಾಜ್ಯದ ಜನರ ಹೊಟ್ಟೆಯ ಮೇಲೆ ತಣ್ಣೀರು ಬಟ್ಟೆ ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಳೆದ 7 ದಿನಗಳಿಂದ ವಿಭಿನ್ನ ರೀತಿಯಲ್ಲಿ ನಿರಂತರ ಪ್ರತಿಭಟನೆಯನ್ನು ಮಾಡಲಾಗುತ್ತಿದೆ. ಆದರೂ, ಕರ್ನಾಟಕ ಸರ್ಕಾರ ನೀರು ಬಿಟ್ಟಿರುವುದನ್ನು ಸಮರ್ಥನೆ ಮಾಡಿಕೊಳ್ಳುತ್ತಿದೆ ಹೊರತು ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವ ಕೆಲಸ ಮಾಡುತ್ತಿಲ್ಲ. 

ಕಾವೇರಿ ನೀರು ವಿಚಾರದಲ್ಲಿ ಡಿಕೆಶಿಗೆ ಕರ್ನಾಟಕ ಜನರ ಕಷ್ಟ ಗೊತ್ತಿಲ್ಲ: ಸಿ.ಪಿ.ಯೋಗೇಶ್ವರ್

ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಸುಪ್ರೀಂಕೋರ್ಟ್‌ ಮೊರೆ ಹೋಗಿಲ್ಲ. ಕಾವೇರಿ ನಿರ್ವಹಣಾ ಮಂಡಳಿಗೆ ಮನವಿ ಮಾಡದೇ ಇರುವುದು ಅತ್ಯಂತ ನೋವಿನ ಸಂಗತಿ ಎಂದರು. ರಾಜ್ಯದ ಉಪಮುಖ್ಯಮಂತ್ರಿ ಶಿವಕುಮಾರ್ ಮೇಕೆದಾಟು ಯೋಜನೆಗಾಗಿ ನಾವು ಹೋರಾಟ ಮಾಡುವ ಕನ್ನಡಪರ ಹೋರಾಟಗಾರರು ಎಲ್ಲಿದ್ದೀರಿ ಎಂದು ಹೇಳಿಕೆ ನೀಡಿರುವುದು ಅತ್ಯಂತ ಖಂಡನೀಯ. ನೀವು ಮೇಕೆದಾಟು ವಿಚಾರವಾಗಿ ಒಂದು ವರ್ಷದಿಂದ ಹೋರಾಟ ಮಾಡುತ್ತಿದ್ದೀರಿ. 

ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು ವಿಚಾರದಲ್ಲಿ ಸಿಎಂ ಗಟ್ಟಿ ತೀರ್ಮಾನ ತೆಗೆದುಕೊಳ್ಳಲಿ: ಸಿ.ಪಿ.ಯೋಗೇಶ್ವರ್

ಆದರೆ, ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು ಹತ್ತಾರು ವರ್ಷಗಳಿಂದ ನಿರಂತರ ಹೋರಾಟ ಮಾಡುತ್ತಿವೆ. ಬರೀ ಮೇಕೆದಾಟು ಒಂದೇ ಅಲ್ಲ ಕಚೇರಿ ವಿಚಾರವಾಗಿ, ಕಳಸಾ ಬಂಡೂರಿ ವಿಚಾರವಾಗಿ, ಹೊಗೆನೇಕಲ್ ವಿಚಾರವಾಗಿ ಧ್ವನಿ ಎತ್ತಿರುವುದು ಕನ್ನಡ ಸಂಘಟನೆಗಳು ಮಾತ್ರ ಎಂದರು. ಪ್ರತಿಭಟನೆಯಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟ ಅಧ್ಯಕ್ಷ ಶಾ.ಮುರಳಿ, ಪಣ್ಯದಹುಂಡಿರಾಜು, ನಿಜಧ್ವನಿಗೋವಿಂದರಾಜು, ಮಹೇಶ್‌ಗೌಡ, ಗಡಿನಾಡು ಕನ್ನಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಚಾ.ರಾ.ಕುಮಾರ್, ಲಿಂಗರಾಜು, ನಾಗೇಶ್ ಭಾಗವಹಿಸಿದ್ದರು.

click me!