ರಾಜಧಾನಿಯಲ್ಲಿ ದಿನಕ್ಕೆ ಎರಡು ಸಾವಿರಕ್ಕೂ ಅಧಿಕ ಹೊಸ ಸೋಂಕು ಪ್ರಕರಣ ಪತ್ತೆಯಾಗುವ ಸರಣಿ ಮುಂದುವರೆದಿದ್ದು, ಶನಿವಾರವೂ 2,036 ಜನರಿಗೆ ಸೋಂಕು ದೃಢಪಟ್ಟಿದೆ. 29 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಬೆಂಗಳೂರು(ಜು.26): ರಾಜಧಾನಿಯಲ್ಲಿ ದಿನಕ್ಕೆ ಎರಡು ಸಾವಿರಕ್ಕೂ ಅಧಿಕ ಹೊಸ ಸೋಂಕು ಪ್ರಕರಣ ಪತ್ತೆಯಾಗುವ ಸರಣಿ ಮುಂದುವರೆದಿದ್ದು, ಶನಿವಾರವೂ 2,036 ಜನರಿಗೆ ಸೋಂಕು ದೃಢಪಟ್ಟಿದೆ. 29 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಶನಿವಾರದ 2,036 ಮಂದಿ ಹೊಸ ಸೋಂಕಿತರು ಪತ್ತೆಯಾಗುವ ನಗರದ ಒಟ್ಟು ಸೋಂಕಿತರ ಸಂಖ್ಯೆ 43,503ಕ್ಕೆ ಏರಿಕೆಯಾಗಿದೆ. ಸೋಂಕಿಗೆ ಬಲಿಯಾದ 29 ಮಂದಿ ಪೈಕಿ ಒಂಬತ್ತು ಮಂದಿ ಮಂದಿ 50 ವರ್ಷದೊಳಗಿವರಾಗಿದ್ದಾರೆ. ಈವರೆಗೆ ನಗರದಲ್ಲಿ ಒಟ್ಟು 862 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ವಂಚನೆ: IMA ಸೇರಿ 65 ಕಂಪನಿಗಳ 137 ಕೋಟಿ ಆಸ್ತಿ ಜಪ್ತಿ
ಶನಿವಾರ 686 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ ಗುಣಮುಖರಾದವರ ಸಂಖ್ಯೆ 10,758ಕ್ಕೆ ಏರಿಕೆಯಾಗಿದೆ. ಇನ್ನು 31,883 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ 213, ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ 185, ಖಾಸಗಿ ಆಸ್ಪತ್ರೆಯಲ್ಲಿ 1535, ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ 1370, ಬಿಬಿಎಂಪಿ ಆರೈಕೆ ಕೇಂದ್ರದಲ್ಲಿ 2558 ಹಾಗೂ ಖಾಸಗಿ ಆರೈಕೆ ಕೇಂದ್ರದಲ್ಲಿ 492 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 339 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಹೋಂ ಐಸೋಲೇಷನ್‌ನಲ್ಲಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.