ರಾಜ್ಯದಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಜನತಾ ಕರ್ಫ್ಯೂ ಜಾರಿ ಮಾಡಲಾಗಿದ್ದು, ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸುವ ಉದ್ದೇಶದಿಂದ ಏ.27 ರಿಂದ ಮೇ 12 ತನಕ ಬಂಡೀಪುರ ವಸತಿ ಗೃಹ ಹಾಗೂ ಸಫಾರಿಗೆ ನಿರ್ಬಂಧ ಹೇರಲಾಗಿದೆ.
ಗುಂಡ್ಲುಪೇಟೆ (ಏ.28): ಕೋವಿಡ್ 19 ಅಲೆ ಹೆಚ್ಚಾಗಿರುವ ಹಿನ್ನೆಲೆ ರಾಜ್ಯ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸುವ ಉದ್ದೇಶದಿಂದ ಏ.27 ರಿಂದ ಮೇ 12 ತನಕ ಬಂಡೀಪುರ ವಸತಿ ಗೃಹ ಹಾಗೂ ಸಫಾರಿಗೆ ನಿರ್ಬಂಧ ಹೇರಲಾಗಿದೆ.
ಎಚ್ಚೆತ್ತ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕ ಎಸ್.ಆರ್.ನಟೇಶ್ ಆದೇಶ ಹೊರಡಿಸಿದ್ದಾರೆ.
ಬಂಡೀಪುರ ಕ್ಯಾಂಪಸ್‌ನಲ್ಲಿರುವ ಎಲ್ಲಾ ವಸತಿ ಗೃಹಗಳನ್ನು ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ನೀಡುವುದನ್ನು ಹಾಗೂ ವನ್ಯಪ್ರಾಣಿಗಳ ವೀಕ್ಷಣೆಗೆ ಸಫಾರಿಯನ್ನು ಸಹ ನಿರ್ಬಂಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಡೀಪುರ : ತಾಯಿಯಿಂದ ಬೇರ್ಪಟ್ಟ 3 ಹುಲಿ ಮರಿ ರಕ್ಷಣೆ - ಎರಡು ಸಾವು
ಅಲ್ಲದೆ ಗೋಪಾಲಸ್ವಾಮಿ ಬೆಟ್ಟದ ವಲಯದ ವ್ಯಾಪ್ತಿಯಲ್ಲಿರುವ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಭಕ್ತಾಧಿಗಳು ಹಾಗೂ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ಗಮನಿಸಿ : ನಾಡಿನ ಪ್ರಮುಖ ದೇಗುಲಗಳಿಗೆ ಸಾರ್ವಜನಿಕ ಪ್ರವೇಶ ಬಂದ್
ಆದರೆ ಗೋಪಾಲಸ್ವಾಮಿ ಬೆಟ್ಟದಲ್ಲಿರುವ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿ ಹಲವು ದಿನಗಳೇ ಕಳೆದಿವೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona