ಹುಟ್ಟೂರಲ್ಲೇ ರದ್ದಾಯ್ತು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಪ್ರೋಗ್ರಾಂ

By Kannadaprabha News  |  First Published Mar 15, 2020, 2:13 PM IST

ಕೆಪಿಸಿಸಿ ಅಧ್ಯಕ್ಷರಾದ ಬಳಿಕ  ಮೊದಲ ಬಾರಿಗೆ ಡಿಕೆ ಶಿವಕುಮಾರ್ ಅವರ ಹುಟ್ಟೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ.


ರಾಮನಗರ (ಮಾ.15): ಕೆಪಿಸಿಸಿ ಅಧ್ಯಕ್ಷರಾದ ತರುವಾಯ ಡಿ.ಕೆ.ಶಿವಕುಮಾರ್ ತವರು ಕ್ಷೇತ್ರ ಕನಕಪುರದಲ್ಲಿ ಇಂದು ಆಯೋಜನೆಗೊಂಡಿದ್ದ ಕನಕಾಂಬರಿ ಮಹಿಳಾ ಒಕ್ಕೂಟದ ಮಹಿಳಾ ಜಾಗೃತಿ ಸಮಾವೇಶ ಕೊರೋನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ರದ್ದುಗೊಂಡಿದೆ. 

ಕನಕಪುರ ನಗರದ ಮುನ್ಸಿಪಲ್ ಹೈಸ್ಕೂಲ್ ನಲ್ಲಿ ಮಾ. 15 ರಂದು ಹಮ್ಮಿಕೊಂಡಿದ್ದ ಮಹಿಳಾ ಜಾಗೃತಿ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ,ಶಾಸಕಿ ಸೌಮ್ಯರೆಡ್ಡಿ, ವಿಧಾನ ಪರಿಷತ್ ಸದಸ್ಯ ಎಸ್. ರವಿ, ಸಂಸದ ಸುರೇಶ್ , ಮಾಜಿ ಸಂಸದ ಧೃವನಾರಾಯಣ್ ಮತ್ತಿತರರು ಭಾಗವಹಿಸುತ್ತಿದ್ದರು. 

Tap to resize

Latest Videos

ಕವಟಗಿಮಠ ಮಗಳ ಮದುವೆಗೆ ಜನರನ್ನ ಸೇರಿಸದೇ ಇರೋದೆ ಒಳ್ಳೆಯದು: ಸಿಎಂ..

ಕೆಪಿಸಿಸಿ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ತವರು ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಕಾರ್ಯಕರ್ತರು ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದರು.
 

click me!