ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಗಡಿಬಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ.
ಬೆಳಗಾವಿ, (ಫೆ.20): ಕೇರಳ ಮತ್ತು ಮಹಾರಾಷ್ಟ್ರದಲ್ಲಿ ನಿರೀಕ್ಷೆಗೂ ಮೀರಿದ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡಿಭಾಗಗಳ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ಹೈ ಅಲರ್ಟ್ ಘೋಷಿಸಿದೆ.
ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸವದತ್ತಿ ಯಲ್ಲಮ್ಮ, ಚಿಂಚಲಿ ಮಾಯಕ್ಕ ದೇವಿಯ ಸಾರ್ವಜನಿಕರ ದರ್ಶನಕ್ಕೆ ಮತ್ತೆ ನಿರ್ಬಂಧ ವಿಧಿಸಲಾಗಿದೆ.
undefined
ನೆರೆ ರಾಜ್ಯಗಳಲ್ಲಿ ಹೆಚ್ಚುತ್ತಿದೆ ಕೊರೊನಾ ಕೇಸ್: ಆರೋಗ್ಯ ಸಚಿವರಿಂದ ಸುದ್ಧಿಗೋಷ್ಠಿ
ಮಹಾರಾಷ್ಟ್ರದಲ್ಲಿ ಕೊರೋನಾ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಜಿಲ್ಲೆಯ ಪ್ರಮುಖ ದೇವಾಲಯಗಳ ಪ್ರವೇಶಕ್ಕೂ ನಿರ್ಬಂಧ ವಿಧಿಸಿದ್ದಾರೆ.
ದೇಶದಲ್ಲಿ ಮತ್ತೊಂದು ಕೊರೋನಾ ಅಲೆ ಸ್ಫೋಟಗೊಂಡಿದೆ. ಮಹಾರಾಷ್ಟ್ರ, ಕೇರಳ, ಮಧ್ಯಪ್ರದೇಶ ಹಾಗೂ ಚತ್ತೀಸ್ಗಢ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ರಾಜ್ಯ ಸರ್ಕಾರ ಕೂಡ ಹೊರ ರಾಜ್ಯಗಳಿಂದ ಬರುವ ಪ್ರವಾಸಿಗರಿಗೆ, ಪ್ರಯಾಣಿಕರಿಗೆ ಹೊಸ ಗೈಡ್ಲೈನ್ಸ್ ಕೂಡ ಪ್ರಕಟಿಸಿದೆ.