ಎಲ್ಲೆಡೆ ಕೊರೋನಾ ಮಹಾಮಾರಿ ಭೀತಿ ಎದುರಾಗಿದ್ದು, ಈ ನಿಟ್ಟಿನಲ್ಲಿ ಇನ್ಫೋಸಿಸ್ ಕ್ಯಾಂಪಸ್‌ನಿಂದ 10 ಸಾವಿರ ಜನರನ್ನು ವಾಪಸ್ ಕಳುಹಿಸಲಾಗುತ್ತಿದೆ.
ಮೈಸೂರು [ಮಾ.20]: ಕೊರೋನಾ ಭೀತಿ ಹಿನ್ನೆಲೆಯಲ್ಲಿ ಮೈಸೂರಿನ ಇನ್ ಫೋಸಿಸ್ ಕ್ಯಾಂಪಸ್ ನಲ್ಲಿರುವ 10 ಸಾವಿರಕ್ಕೂ ಅಧಿಕ ಟ್ರೈನಿ (ಪ್ರಶಿಕ್ಷಣಾರ್ಥಿ)ಗಳನ್ನು ಸೆಂಟರ್‌ನಿಂದ ಮನೆಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಬೆಂಗಳೂರು, ಮಂಗಳೂರು, ಚೆನ್ನೈ, ಹೈದರಾಬಾದ್ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸಿದ 10 ಸಾವಿರಕ್ಕೂ ಅಧಿಕ ಟ್ರೈನಿಗಳು ಕ್ಯಾಂಪಸ್‌ನಲ್ಲಿದ್ದರು.
ಹುಬ್ಬಳ್ಳಿಯಲ್ಲಿ ಕೊರೋನಾ ಭೀತಿ: ಮೂವರ ಮೇಲೆ ತೀವ್ರ ನಿಗಾ..
ಮುನ್ನೆಚ್ಚರಿಕೆ ಕ್ರಮವಾಗಿ ಇವರನ್ನೆಲ್ಲಾ ಕೆಎಸ್ ಆರ್‌ಟಿಸಿ ಬಸ್ ಹಾಗೂ ರೈಲುಗಳ ಮೂಲಕ ಅವರ ಸ್ವಸ್ಥಳಗಳಿಗೆ ತೆರಳಲು ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ.