ಕೋವಿಡ್ ಕೇರ್ ಕೇಂದ್ರದಲ್ಲಿ ಸಿಗದ ಸರಿಯಾದ ಚಿಕಿತ್ಸೆ| ವೈದ್ಯರು ಬರುತ್ತಿಲ್ಲ, ಉತ್ತಮ ಗುಣಮಟ್ಟದ ಊಟ ಕೂಡ ಪೂರೈಸುತ್ತಿಲ್ಲ ಎಂದು ಆರೋಪಿಸಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಸೋಂಕಿತರು|
ಗದಗ(ಆ.23): ಕೋವಿಡ್ ಕೇರ್ ಕೇಂದ್ರದಲ್ಲಿ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ, ಊಟದ ವ್ಯವಸ್ಥೆ ಇಲ್ಲ ಅಂತ ಕೊರೊನಾ ಸೋಂಕಿತರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮದಲ್ಲಿ ನಿನ್ನೆ(ಶನಿವಾರ) ನಡೆದಿದೆ.
ಹಿರೇವಡ್ಡಟ್ಟಿ ಗ್ರಾಮದ ಹೊರವಲಯದ ಮೊರಾರ್ಜಿ ಶಾಲೆಯಲ್ಲಿ ಕೋವಿಡ್ ಕೇರ್ ಕೇಂದ್ರವನ್ನ ತೆರೆಯಲಾಗಿದೆ. ಈ ಕೋವಿಡ್ ಕೇರ್ ಕೇಂದ್ರದಲ್ಲಿ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ, ವೈದ್ಯರು ಬರುತ್ತಿಲ್ಲ, ಉತ್ತಮ ಗುಣಮಟ್ಟದ ಊಟ ಕೂಡ ಪೂರೈಸುತ್ತಿಲ್ಲ ಎಂದು ಮಹಿಳಾ ಹಾಗೂ ಇತರೇ ಸೋಂಕಿತರೆಲ್ಲ ಸೇರಿಕೊಂಡು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಲಪ್ರಭಾ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಶ್ವಾನ ಪಾರು
ಈ ಕೂಡಲೇ ಸರಿಯಾದ ವ್ಯವಸ್ಥೆ ಮಾಡದಿದ್ದರೆ ನಮ್ಮನ್ನು ಬಿಟ್ಟು ಬಿಡಿ ಮನೆಗೆ ಹೋಗುತ್ತೇವೆ ಅಂತ ಕೊರೋನಾ ಆಗ್ರಹಿಸಿದ್ದಾರೆ. ಈ ಬಗ್ಗೆ ಸೋಂಕಿತರೇ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ.