ಮದುವೆ ಕಾರ್ಯಕ್ರಮ ಒಂದರಲ್ಲಿ ಪಾಲ್ಗೊಂಡಿದ್ದ ಸುಮಾರು 52 ಜನಕ್ಕೂ ಅಧಿಕ ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇನ್ನಷ್ಟು ಮಂದಿ ಪರೀಕ್ಷೆ ನಡೆಸಲಾಗುತ್ತಿದೆ.
ಹೊಳೆಹೊನ್ನೂರು (ಏ.20): ಆಶಾ ಕಾರ್ಯಕರ್ತೆಯ ಮಗಳ ಮದುವೆಯಲ್ಲಿ ಪಾಲ್ಗೊಂಡಿದ್ದ ಹೊಸಹಳ್ಳಿ ಗ್ರಾಮದಲ್ಲಿ ಮತ್ತೆ 31 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.
ಈ ಮೂಲಕ 52 ಮಂದಿಗೆ ಸೋಂಕು ತಗುಲಿದಂತಾಗಿದ್ದು, ಗ್ರಾಮದಲ್ಲಿ ಆತಂಕದ ಪರಿಸ್ಥಿತಿ ಮನೆ ಮಾಡಿದೆ. ಏ.12ರಂದು ನಡೆದಿದ್ದ ಈ ಮದುವೆಯಲ್ಲಿ ಪಾಲ್ಗೊಂಡಿದ್ದ 21 ಮಂದಿಗೆ ಮೊದಲಿಗೆ ಪಾಸಿಟಿವ್ ಆಗಿತ್ತು.
ಕೊರೊನಾ ಆರ್ಭಟಕ್ಕೆ ಬೆಂಗ್ಳೂರು ಖಾಲಿ ಖಾಲಿ, ಗುಳೆ ಹೊರಟ ಕಾರ್ಮಿಕರು..! ...
ಈ ಹಿನ್ನೆಲೆಯಲ್ಲಿ ಮದುವೆಯಲ್ಲಿ ಪಾಲ್ಗೊಂಡಿದ್ದ ಗ್ರಾಮದ ಇತರೆ ಮಂದಿಯನ್ನೂ ಪರೀಕ್ಷೆಗೊಳಪಡಿಸಿದಾಗ ಇನ್ನಷ್ಟುಪಾಸಿಟಿವ್ ಪ್ರಕರಣಗಲು ಬೆಳಕಿಗೆ ಬಂದಿವೆ.
ಭದ್ರಾವತಿ ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್, ತಹಸೀಲ್ದಾರ್ ಮತ್ತು ಅರಬಿಳಚಿ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳು ಹೊಸಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿ ಅವಲೋಕಿಸಿದ್ದಾರೆ.