'ಜನ್ಮದಿನ ಆಚರಣೆ ಮಾಡಿಕೊಳ್ಳಲ್ಲ, ಜಾಹೀರಾತು ಕೊಡಬೇಡಿ'

Published : May 13, 2021, 09:49 PM ISTUpdated : May 13, 2021, 09:53 PM IST
'ಜನ್ಮದಿನ ಆಚರಣೆ ಮಾಡಿಕೊಳ್ಳಲ್ಲ, ಜಾಹೀರಾತು ಕೊಡಬೇಡಿ'

ಸಾರಾಂಶ

* ನನ್ನ ಜನ್ಮದಿನ ಆಚರಣೆ ಬೇಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನವಿ * ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಬಂಧು-ಬಳಗದವರಿಗೆ ಮನವಿ * ಇಡಿ ಜಗತ್ತು ಕೊರೋನಾ ಸಂಕಷ್ಟ ಎದುರಿಸುತ್ತಿದೆ *  ಮಾಧ್ಯಮಗಳಲ್ಲಿ ನನಗೆ ಶುಭಾಶಯ ಕೋರಿ ಯಾರೊಬ್ಬರೂ ಜಾಹೀರಾತು ನೀಡಬಾರದು.

ಬೆಂಗಳೂರು:(ಮೇ 13)  ಕೋವಿಡ್ ಪಿಡುಗು ತೀವ್ರವಾಗಿದ್ದು, ಇಡೀ ರಾಜ್ಯ ಚಿಂತಾಜನಕ ಸ್ಥಿತಿಯಲ್ಲಿದೆ. ಹೀಗಾಗಿ ಈ ಬಾರಿ ಯಾರೂ ನನ್ನ ಜನ್ಮದಿನ(ಮೆ 15) ಆಚರಿಸಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಬಂಧು-ಬಳಗದವರಿಗೆ ಪತ್ರಿಕಾ ಹೇಳಿಕೆಯಲ್ಲಿ ಶಿವಕುಮಾರ್ ಅವರು ಗುರುವಾರ ಮಾಡಿರುವ ಮನವಿ ಮಾಡಿಕೊಂಡಿದ್ದಾರೆ.

'ರಾಜ್ಯ ತೀವ್ರ ಸಂಕಷ್ಟ ಸಮಯ ಎದುರಿಸುತ್ತಿದೆ. ಕೊರೋನಾ ರುದ್ರತಾಂಡವ ಆಡುತ್ತಿದೆ. ಈ ಸಮಯದಲ್ಲಿ ಸಂಭ್ರಮಾಚರಣೆ ವಿಹಿತವಲ್ಲ. ಹೀಗಾಗಿ ಈ ಬಾರಿ ನಾನೂ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದೇನೆ. ನೀವೂ ಸಹ ನನ್ನ ಜನ್ಮದಿನ ಆಚರಿಸುವುದಾಗಲಿ, ಶುಭಾಶಯ ಕೋರುವುದಾಗಲಿ, ಶುಭಾಶಯ ಕೋರಲು ದೂರವಾಣಿ ಕರೆ ಮಾಡುವುದಾಗಲಿ ಬೇಡ  ಎಂದು ತಿಳಿಸಿದ್ದಾರೆ.

ಸಂಸದರ ವಿರುದ್ಧ ಡಿಕೆ ಶಿವಕುಮಾರ್ ಗುಡುಗು

ನಾನು ಆ ದಿನ ಊರಲ್ಲಿ ಇರುವುದಿಲ್ಲ. ಹೀಗಾಗಿ ಯಾರೂ ಕೂಡ ಶುಭಾಶಯ ಕೋರಲು ನಿವಾಸದ ಬಳಿ ಬರುವುದು ಬೇಡ. ಮಾಧ್ಯಮಗಳಲ್ಲಿ ನನಗೆ ಶುಭಾಶಯ ಕೋರಿ ಯಾರೊಬ್ಬರೂ ಜಾಹೀರಾತು ನೀಡಬಾರದು.

ಪರಿಸ್ಥಿತಿಯ ಗಂಭೀರತೆ ಅರಿತು ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ. ಯಾರು ಕೂಡ ಈ ವಿಚಾರದಲ್ಲಿ ತಪ್ಪು ಭಾವಿಸಬಾರದು. ನಿಮ್ಮ ಪ್ರೀತಿ, ವಿಶ್ವಾಸ, ಆಶೀರ್ವಾದ ನನ್ನ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. 

 

PREV
click me!

Recommended Stories

ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!
ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!