ಕೇರಳದಿಂದ ಬಂದರೆ ಕೊರೋನಾ ಟೆಸ್ಟ್ ಕಡ್ಡಾಯ. ಯಾರೇ ಕೇರಳದಿಂದ ಇಲ್ಲಿಗೆ ಆಗಮಿಸಲಿ ಅವರು ಕೋಡಿವ್ ಪರೀಕ್ಷೆ ಮಾಡಿಸಲೇಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಮಡಿಕೇರಿ (ಫೆ.14): ಕೇರಳದಿಂದ ಕೊಡಗು ಜಿಲ್ಲೆಗೆ ಪ್ರವಾಸ ಬಂದರೆ ಕೋವಿಡ್ ಪರೀಕ್ಷೆ ಮಾಡುವುದು ಕಡ್ಡಾಯ ಎಂದು ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ.
72 ಗಂಟೆ ಮುಂಚಿತವಾಗಿ ಕೋವಿಡ್ ಪರೀಕ್ಷೆ ರಿಪೋರ್ಟ್ ತರುವುದು ಕಡ್ಡಾಯವಾಗಿದೆ. ಕೇರಳ ರಾಜ್ಯದಲ್ಲಿ ಕೋವಿಡ್- 19 ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದೆ.
ಮಹಾಮಾರಿ ಕೊರೋನಾಗೆ ಹಿರಿಯರೇ ಹೆಚ್ಚು ಬಲಿ..! .
ಕೇರಳದಿಂದ ಕೊಡಗು ಜಿಲ್ಲೆಗೆ ಪ್ರವಾಸಕ್ಕೆ ಬರುವವರಿಗೆ ಅನ್ವಯವಾಗಲಿದೆ. ಕೇರಳ ಪ್ರವಾಸಿಗರ ವಿವರ ನೀಡುವಂತೆ ಹೋಟೆಲ್, ರೆಸಾರ್ಟ್ ಮಾಲೀಕರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಸದ್ಯ ದೇಶದಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಕಡಿಮೆಯಾಗಿದ್ದು, ಸಂಪೂರ್ಣವಾಗಿ ಕೊರೋನಾ ನಿಯಂತ್ರಣ ಮಾಡುವ ಉದ್ದೇಶದಿಂದ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.