ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಶಾಗೆ ಕೊರೋನಾ

Suvarna News   | Asianet News
Published : Aug 18, 2020, 09:30 AM IST
ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಶಾಗೆ ಕೊರೋನಾ

ಸಾರಾಂಶ

ಕೊರೋನಾ ಸೋಂಕು ಇದೀಗ ಯಾರನ್ನೂ ತನ್ನ ಹಿಡಿತಕ್ಕೆ ಒಳಪಡಿಸಿಕೊಳ್ಳದೇ ಬಿಡುತ್ತಿಲ್ಲ. ಇದೀಗ ಬೃಹತ್ ಔಷಧ ಕಂಪನಿ ಮುಖ್ಯಸ್ಥೆ ಕಿರಣ್ ಶಾಗೂ ಕೊರೋನಾ ದೃಢಪಟ್ಟಿದೆ.

ಬೆಂಗಳೂರು (ಆ.18):  ಹೆಸರಾಂತ ಔಷಧ ತಯಾರಿಕಾ ಕಂಪನಿ ‘ಬಯೋಕಾನ್‌’ ಮುಖ್ಯಸ್ಥೆ ಕಿರಣ್‌ ಮಜುಂದಾರ್‌ ಶಾ ಅವರಿಗೆ ಕೊರೋನಾ ಸೋಂಕು ಸೋಮವಾರ ದೃಢಪಟ್ಟಿದೆ.

ಈ ಸಂಬಂಧ ಸ್ವತಃ ಕಿರಣ್‌ ಮಜುಂದಾರ್‌ ಶಾ ಅವರೇ ಟ್ವೀಟ್‌ ಮಾಡಿದ್ದು, ‘ಕೊರೋನಾ ಸಂಬಂಧದ ಕೆಲ ಸಣ್ಣ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದರು. 

ಗುಡ್‌ ನ್ಯೂಸ್: ದೇಶದಲ್ಲಿ ಕೊರೋನಾ ಅಬ್ಬರ ಇಳಿಕೆ!...

ವರದಿಯಲ್ಲಿ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ. ಗುಣಮುಖ ಆಗುವ ವಿಶ್ವಾಸವಿದೆ’ ಎಂದು ತಿಳಿಸಿದ್ದಾರೆ. ಸೌಮ್ಯ ಲಕ್ಷಣಗಳಿರುವುದರಿಂದ ಅವರು ಆಸ್ಪತ್ರೆಗೆ ದಾಖಲಾಗದೆ ಮನೆಯಲ್ಲಿ ಆರೈಕೆ ಪಡೆದುಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಎಲ್ಲರಿಗೂ ಆಘಾತ.. ಆಡಳಿತಾರೂಢ ಪಕ್ಷದ ಶಾಸಕ ಕೊರೋನಾಕ್ಕೆ ಬಲಿ...

ಸಿಎಂ ಸೇರಿದಂತೆ ಹಲವು ರಾಜಕೀಯ ಮುಖಂಡರನ್ನು ಕಾಡಿದ ಕೊರೋನಾ ಇದೀಗ ಕಿರಣ್ ಅವರಿಗೂ ತಗಲಿದೆ.

PREV
click me!

Recommended Stories

ಕೋಲಾರ ಬೀದರ್ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್, ಅಲರ್ಟ್ ಆದ ಪೊಲೀಸರು, ತೀವ್ರ ತಪಾಸಣೆ
ಮೈಸೂರು, ಮಂಡ್ಯದಲ್ಲಿ ಬಾಲ್ಯ ವಿವಾಹಕ್ಕೆ ಗಣನೀಯ ಇಳಿಕೆ, ಸರ್ಕಾರದಿಂದ ಸಿಕ್ಕಿತು ನೆಮ್ಮದಿಯ ಸುದ್ದಿ