
ಲಿಂಗಸುಗೂರು(ಸೆ.05): ರಾಯಚೂರು ಜಿಲ್ಲೆಯ ಲಿಂಗಸುಗೂರು ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಿ.ಎಸ್.ಹುಲಗೇರಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಕೋವಿಡ್ ಸೋಂಕಿನ ಯಾವುದೇ ಲಕ್ಷಣಗಳು ಇಲ್ಲದಿದ್ದರೂ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಪತ್ತೆಯಾಗಿದೆ. ಕೂಡಲೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಶಾಸಕರು ಅಗತ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ಲಿಂಗಸುಗೂರು: ಪಬ್‌ಜಿ ಗೇಮ್ ಬ್ಯಾನ್, ರೈತರಿಂದ ಪ್ರಧಾನಿ ಮೋದಿ ಭಾವಚಿತ್ರಕ್ಕೆ ಪೂಜೆ
ಶಾಸಕರಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಮನೆಯ ಎಲ್ಲ ಸದಸ್ಯರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. ಇದರ ಜೊತೆಗೆ ಶಾಸಕರ ಸಂಪರ್ಕದಲ್ಲಿದ್ದವರನ್ನು ಹೋಂ ಕ್ವಾರಂಟೈನ್‌ನಲ್ಲಿರುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.