
ಕುಷ್ಟಗಿ(ಸೆ.13): ಕಾಂಗ್ರೆಸ್ ಶಾಸಕ ಅಮರೇಗೌಡ ಪಾಟೀಲ ಭಯ್ಯಾಪುರ ಅವರಿಗೆ ಕೊರೋನಾ ಸೋಂಕು ಧೃಢಪಟ್ಟಿದ್ದು ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೆ. 9ರಂದು ಬೆಂಗಳೂರಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಹಾಗಾಗಿ ವೈದ್ಯರ ಬಳಿ ತೆರಳಿ ಪರೀಕ್ಷೆಗೆ ಒಳಗಾದ ಸಂದರ್ಭದಲ್ಲಿ ಕೊರೋನಾ ಸೋಂಕು ಧೃಢ ಪಟ್ಟಿದೆ. ಆದರೆ, ಯಾವುದೇ ರೋಗದ ಲಕ್ಷಣಗಳಿಲ್ಲ ಎಂದು ಶಾಸಕರ ಆಪ್ತ ಕಾರ್ಯದರ್ಶಿ ಹನುಮೇಶ ಗುಮಗೇರಿ ತಿಳಿಸಿದ್ದಾರೆ.
'ಒಂದೇ ವರ್ಷದಲ್ಲಿ ಹೊಲಕ್ಕೆ ನೀರು ಬಂದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ'
ಇತ್ತೀಚಿನ ದಿನಗಳಲ್ಲಿ ಅವರ ನೇರ ಸಂಪರ್ಕಕ್ಕೆ ಬಂದವರಲ್ಲಿ ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಸ್ವಯಂ ಪರೀಕ್ಷೆಗೆ ಒಳಗಾಗಬೇಕು ಎಂದು ತಿಳಿಸಿದ್ದಾರೆ. ಸದ್ಯ ಶಾಸಕ ಅಮರೇಗೌಡ ಪಾಟೀಲ ಭಯ್ಯಾಪುರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.