ನಮ್ಮ ಮೆಟ್ರೋದ 28 ಸಿಬ್ಬಂದಿಗೆ ಕೊರೋನಾ ದೃಢ

Kannadaprabha News   | Asianet News
Published : Oct 03, 2020, 07:24 AM ISTUpdated : Oct 03, 2020, 07:26 AM IST
ನಮ್ಮ ಮೆಟ್ರೋದ 28 ಸಿಬ್ಬಂದಿಗೆ ಕೊರೋನಾ ದೃಢ

ಸಾರಾಂಶ

ಅಟ್ಟಹಾಸ ಮೆರೆಯುತ್ತಿರುವ ಕೊರೋನಾ ವೈರಸ್‌| ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರೂ ಸಂಸ್ಥೆಯ 28 ಸಿಬ್ಬಂದಿಗೆ ಕೊರೋನಾ ಸೋಂಕು ದೃಢ| ಸೆ.7ರಂದು ಮೆಟ್ರೋ ಪುನರಾರಂಭವಾದ ನಂತರ ಸಂಸ್ಥೆಯ ಸಿಬ್ಬಂದಿಗೆ ಒಕ್ಕರಿಸಿದ ವೈರಸ್‌| 

ಬೆಂಗಳೂರು(ಅ.03): ಮಹಾಮಾರಿ ಕೊರೋನಾ ವೈರಸ್‌ ತನ್ನ ಅಟ್ಟಹಾಸ ಮೆರೆಯುತ್ತಲೇ ಇದೆ. ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಕೊರೋನಾ ವೈರಸ್‌ ಪ್ರಕರಣಗಳು ಪತ್ತೆಯಾಗುತ್ತಲೇ ಇವೆ. ಇದರಿಂದ ನಗರದ ಜನತೆ ಭಯದಲ್ಲೇ ಓಡಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಮೆಟ್ರೋ ರೈಲು ಸಂಸ್ಥೆಯ 28 ಸಿಬ್ಬಂದಿಗೆ ಕೊರೋನಾ ಸೋಂಕು ಒಕ್ಕರಿಸಿದೆ. 

ಮೆಟ್ರೋ ರೈಲು ಸಂಚಾರ ಆರಂಭಿಸಲು ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರೂ ಸಂಸ್ಥೆಯ 28 ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 

ಕರ್ನಾಟಕದಲ್ಲಿ ಕೊರೋನಾ: ಇಲ್ಲಿದೆ ಶುಕ್ರವಾರದ ಅಂಕಿ-ಸಂಖ್ಯೆ

ಸೆ.7ರಂದು ಮೆಟ್ರೋ ಪುನರಾರಂಭವಾದ ನಂತರ ರೈಲು ಚಾಲಕರು (ಲೊಕೊ ಪೈಲಟ್‌ಗಳು) ಮತ್ತು ನಿಲ್ದಾಣ ನಿಯಂತ್ರಕರು (ಸ್ಟೇಷನ್‌ ಕಂಟ್ರೋಲರ್‌ಗಳು) ಸೇರಿದಂತೆ ಒಟ್ಟು 28 ಸಿಬ್ಬಂದಿಗೆ ಕೊರೋನಾ ಪಾಸಿಟಿವ್‌ ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಿಎಂಆರ್‌ಸಿಎಲ್‌ ಹಿರಿಯ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.
 

PREV
click me!

Recommended Stories

Bengaluru Weather: ರಾಜ್ಯಕ್ಕೆ ಈಶಾನ್ಯ ಮಾರುತ- ದಶಕದ ದಾಖಲೆಯ ಚಳಿಗೆ ಸಿದ್ಧರಾಗಿ; ಬೆಂಗಳೂರು ಸ್ಥಿತಿ ಏನು ನೋಡಿ!
ಕೆಕೆಆರ್‌ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್ ಸ್ಥಿತಿ ಗಂಭೀರ!