ಪಿರಿಯಾಪಟ್ಟಣ ಶಾಸಕ ಮಹದೇವ್‌ಗೆ ಕೊರೋನಾ:ಅಧಿವೇಶನಕ್ಕೆ ಗೈರು

Kannadaprabha News   | Asianet News
Published : Sep 19, 2020, 12:28 PM ISTUpdated : Sep 19, 2020, 12:39 PM IST
ಪಿರಿಯಾಪಟ್ಟಣ ಶಾಸಕ ಮಹದೇವ್‌ಗೆ ಕೊರೋನಾ:ಅಧಿವೇಶನಕ್ಕೆ ಗೈರು

ಸಾರಾಂಶ

ಸೆ.21ರಿಂದ ವಿಧಾನಸಭೆ ಅಧಿವೇಶನ ಪ್ರಾರಂಭ| ಎಲ್ಲ ಶಾಸಕರು ಕೋವಿಡ್‌ ಟೆಸ್ಟ್‌ ಕಡ್ಡಾಯ| ಯಾವುದೇ ಸೋಂಕಿನ ಲಕ್ಷಣ ಇಲ್ಲದಿದ್ದರೂ ಪಾಸಿಟಿವ್‌ ವರದಿ ಬಂದ ಕಾರಣ ಹೋಂ ಐಸೋಲೇಷನ್‌ಗೆ ಒಳಪಟ್ಟ ಶಾಸಕರು|  

ಪಿರಿಯಾಪಟ್ಟಣ(ಸೆ.19): ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಶಾಸಕ ಕೆ.ಮಹದೇವ್‌ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಅವರು ಅಧಿವೇಶನಕ್ಕೆ ಗೈರಾಗಲಿದ್ದಾರೆ ಎಂದು ತಿಳಿದು ಬಂದಿದೆ. 

ಸೆ.21ರಿಂದ ವಿಧಾನಸಭೆ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಎಲ್ಲ ಶಾಸಕರು ಕೋವಿಡ್‌ ಟೆಸ್ಟ್‌ ಮಾಡಿಸಬೇಕು ಎನ್ನುವ ಸೂಚನೆ ನೀಡಲಾಗಿತ್ತು. ಆ ಕಾರಣ ಶನಿವಾರ ಪಟ್ಟಣದ ತಮ್ಮ ನಿವಾಸದಲ್ಲಿ ಟೆಸ್ಟ್‌ ಮಾಡಿಸಿದ್ದರು. ಯಾವುದೇ ಸೋಂಕಿನ ಲಕ್ಷಣ ಇಲ್ಲದಿದ್ದರೂ ಪಾಸಿಟಿವ್‌ ವರದಿ ಬಂದ ಕಾರಣ ಶಾಸಕರು ಹೋಂ ಐಸೋಲೇಷನ್‌ಗೆ ಒಳಪಟ್ಟಿದ್ದಾರೆ. 

ಮೈಸೂರು ದಸರಾ: ಅರಮನೆಯಲ್ಲಿ ಸಿಂಹಾಸನ ಜೋಡಣೆ

ಇತ್ತೀಚೆಗೆ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಮನೆಯಲ್ಲಿನ ಸಂದರ್ಶನದ ವೇಳೆ ನೇರ ಸಂಪರ್ಕದಲ್ಲಿದ್ದ ಎಲ್ಲ ಸಾರ್ವಜನಿಕರು, ಅಧಿಕಾರಿಗಳು, ಜನಪ್ರತಿನಿಧಿಗಳು, ಪತ್ರಕರ್ತರು, ಹಿತೈಷಿಗಳು ಕೋವಿಡ್‌-19 ಪರೀಕ್ಷೆ ಮಾಡಿಸಿಕೊಳ್ಳುವಂತೆ ಶಾಸಕರು ಕೋರಿದ್ದಾರೆ.


 

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!