ಜೇವರ್ಗಿ: ಒಂದೇ ಕುಟುಂಬದ 12 ಜನರಿಗೆ ಕೊರೋನಾ, ಬೆಚ್ಚಿಬಿದ್ದ ಗ್ರಾಮಸ್ಥರು..!

Kannadaprabha News   | Asianet News
Published : Jul 06, 2020, 09:47 AM IST
ಜೇವರ್ಗಿ: ಒಂದೇ ಕುಟುಂಬದ 12 ಜನರಿಗೆ ಕೊರೋನಾ, ಬೆಚ್ಚಿಬಿದ್ದ ಗ್ರಾಮಸ್ಥರು..!

ಸಾರಾಂಶ

ಪುಣೆಯಿಂದ ಬಂದಿದ್ದ ವ್ಯಕ್ತಿಯಿಂದಲೇ ಒಂದೇ ಕುಟುಂಬದ 12 ಜನರಿಗೆ ಸೋಂಕು ತಗುಲಿದೆ| ಕಲಬುರಗಿ ನಗರದ ಕೋವಿಡ್‌ ನಿಗದಿತ ಆಸ್ಪತ್ರೆ ಜಿಮ್ಸ್‌ಗೆ ದಾಖಲು| ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ|

ಜೇವರ್ಗಿ(ಜು.06): ಇಲ್ಲಿನ ಆಂದೋಲಾ ಗ್ರಾಮದ ಒಂದೇ ಕುಟುಂಬದ 12 ಜನರು ಹಾಗೂ ಪಟ್ಟಣದ ಬಸ್‌ ಡಿಪೋ ಹತ್ತಿರದ ಕ್ವಾರಂಟೈನ್‌ ಕೇಂದ್ರದಲ್ಲಿದ್ದ ಮೂವರು ಸೇರಿದಂತೆ ಒಟ್ಟು 15 ಜನರಿಗೆ ಕೊರೊನಾ ಸೋಂಕು ತಗುಲಿದ್ದರಿಂದ ಇಡೀ ಗ್ರಾಮ ಸೀಲ್‌ಡೌನ್‌ ಮಾಡಲಾಗಿದೆ. 

ಪುಣೆಯಿಂದ ಬಂದಿದ್ದ ವ್ಯಕ್ತಿಯಿಂದಲೇ ಇವರಿಗೆ ಸೋಂಕು ತಗುಲಿದೆ. ಈ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಆಂದೋಲಾ ಗ್ರಾಮದ ಆಶಾ ಕಾರ್ಯಕರ್ತೆ,3 ಮಹಿಳೆಯರು, ಇಬ್ಬರು ಯುವತಿಯರು, ಇಬ್ಬರು ಯುವಕರು, ಇಬ್ಬರು ಬಾಲಕರು ಸೇರಿದಂತೆ 12 ಜನರಿಗೆ ಸೋಂಕು ದೃಢಪಟ್ಟಿದೆ.

ಕಲಬುರಗಿಗೆ ಬರ್ತಿವೆ ‘ಮಹಾ’ ಮೃತದೇಹಗಳು!

ಇವರನ್ನು ಕಲಬುರಗಿ ನಗರದ ಕೋವಿಡ್‌ ನಿಗದಿತ ಆಸ್ಪತ್ರೆ ಜಿಮ್ಸ್‌ಗೆ ದಾಖಲು ಮಾಡಲಾಗಿದೆ. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಮನೆ ಬಿಟ್ಟು ಹೊರಗಡೆ ಬರೋದಕ್ಕೂ ಯೋಚನೆ ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. 
 

PREV
click me!

Recommended Stories

Photos: 6 ವರ್ಷಗಳ ಬಳಿಕ ಮುಂಡಗೋಡಿಗೆ ಆಗಮಿಸಿದ ಟಿಬೆಟಿಯನ್ ಧರ್ಮಗುರು ದಲಾಯಿ ಲಾಮಾ!
ಹುನುಗುಂದದಲ್ಲಿ ಮಂಕಿ ಕ್ಯಾಪ್ ಗ್ಯಾಂಗ್: ಒಂದೇ ರಾತ್ರಿ, 9 ಮನೆ ಕಳವು, ಪೋಲಿಸರ ಮನೆಗಳನ್ನೇ ಬಿಡದ ಖದೀಮರು!