ಕಲಬುರಗಿ : ಸೋಂಕಿತ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯಗೂ ಕೊರೋನಾ ಸೋಂಕು

Kannadaprabha News   | Asianet News
Published : Mar 17, 2020, 10:17 AM ISTUpdated : Mar 17, 2020, 06:47 PM IST
ಕಲಬುರಗಿ :  ಸೋಂಕಿತ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯಗೂ ಕೊರೋನಾ ಸೋಂಕು

ಸಾರಾಂಶ

ಕಲಬುರಗಿಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯನಿಗೂ ಕೂಡ ಸೋಂಕು ತಗುಲಿರುವುದು ದೃಢಪಟ್ಟಿದೆ. 

ಕಲಬುರಗಿ [ಮಾ.17] : ಕಲಬುರಗಿಯಲ್ಲಿ ಕೊರೋನಾ ಸೋಂಕಿತ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯರಿಗೂ ಇದೀಗ ಕೊರೋನಾ ಸೋಂಕು ದೃಢಪಟ್ಟಿದೆ. 

"

ಮೆಕ್ಕಾ ಯಾತ್ರೆ ಮುಗಿಸಿಕೊಂಡು ಬಂದು ನಾರೋಗ್ಯ ನಿಮಿತ್ತ ತಮ್ಮ ಕುಟುಂಬದ ಡಾಕ್ಟರ್ ಬಳಿ ವೃದ್ಧ ತೆರಳಿದ್ದು,  ಇದೀಗ ಈ ವೈದ್ಯರಲ್ಲೂ ಕೊರೋನಾ ದೃಢಪಟ್ಟಿದೆ. 

63 ವರ್ಷದ ಕಲಬುರಗಿಯ ಖಾಸಗಿ ಆಸ್ಪತ್ರೆ ವೈದ್ಯ ವೃದ್ಧನ ಮನೆಗೆ ಹೋಗಿ ಚಿಕಿತ್ಸೆ ನೀಡಿದ್ದು, ಅವರಲ್ಲಿ ಸೋಂಕು ದೃಢಪಟ್ಟಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಮಾಹಿತಿ ನೀಡಿದ್ದಾರೆ. 

ಕರೋನಾ ಕಾಟ; ಕಲ್ಯಾಣ ಕರ್ನಾಟಕ ನಿಟ್ಟುಸಿರು ಬಿಡುವ ಸುದ್ದಿ ಕೊಟ್ಟ ಕೇಂದ್ರ

ಇದೀಗ ವೈದ್ಯರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದರಿಂದ ಕಲಬುರಗಿಯಲ್ಲಿ 3ನೇ ಸೋಂಕು ದೃಢಪಟ್ಟಿದೆ. 

ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಲೇ ಇದ್ದು, ಜನರಲ್ಲಿ ತೀವ್ರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ. 

PREV
click me!

Recommended Stories

ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!
Uttara Kannada: ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!