ಹಾಸನ ಜಿಲ್ಲೆಯಲ್ಲಿ ವ್ಯಕ್ತಿಯೋರ್ವನಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದು, ಕೊರೋನಾ ಶಂಕೆ ಹಿನ್ನೆಲೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಹಾಸನ [ಮಾ.06]: ಫ್ರಾನ್ಸ್ ನಿಂದ ಹಿಂದಿರುಗಿದ ಟೆಕ್ಕಿಗೆ ಜ್ವರ ಕಾಣಿಸಿಕೊಂಡಿದ್ದು, ಮುಂಜಾಗೃತಾ ಕ್ರಮವಾಗಿ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ವಿಶ್ವದಾದ್ಯಂತ ಮಾರಕ ಕೊರೋನಾ ದಾಳಿ ಮಾಡುತ್ತಿದ್ದು, ಸಾವಿರಾರು ಮಂದಿ ಪ್ರಾಣ ಬಲಿ ಪಡೆದಿದೆ. ಈ ನಿಟ್ಟಿನಲ್ಲಿ ಕೊರೋನಾ ಶಂಕೆ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕೊರೋನಾ ಶಂಕಿತರಿಗಾಗಿ ಸಿದ್ಧ ಮಾಡಲಾದ ವಾರ್ಡಿನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಗಾಜಿಯಾಬಾದ್ ವ್ಯಕ್ತಿಗೆ ಕೊರೋನಾ: 30ಕ್ಕೆ ಏರಿದ ಸೋಂಕು ಪೀಡಿತರ ಸಂಖ್ಯೆ!..
ಕೆಲ ದಿನಗಳ ಹಿಂದೆ ಫ್ರಾನ್ಸ್ ಗೆ ತೆರಳಿದ್ದ ವ್ಯಕ್ತಿ ತವರಿಗೆ ವಾಪಸಾಗುತ್ತಲೇ ಜ್ವರ ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಟೆಕ್ಕಿಯ ರಕ್ತದ ಮಾದರಿ ಪಡೆದು ಪರೀಕ್ಷೆಗೆಂದು ಕಳಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.