1200 ಪಿಯು ಉಪನ್ಯಾಸಕ ಹುದ್ದೆಗೆ ಕೌನ್ಸೆಲಿಂಗ್‌ಗೆ ನಿರ್ಧಾರ..!

By Kannadaprabha NewsFirst Published Jul 17, 2020, 9:30 AM IST
Highlights

ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಪಿಯು ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಗೆ ಕೌನ್ಸೆಲಿಂಗ್‌ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಕೌನ್ಸೆಲಿಂಗ್‌ ದಿನಾಂಕವನ್ನು ಜು. 17 ಅಥವಾ ಜು. 18ರಂದು ಘೋಷಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರು(ಜು.17): ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಪಿಯು ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಗೆ ಕೌನ್ಸೆಲಿಂಗ್‌ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಕೌನ್ಸೆಲಿಂಗ್‌ ದಿನಾಂಕವನ್ನು ಜು. 17 ಅಥವಾ ಜು. 18ರಂದು ಘೋಷಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

2014ರಲ್ಲಿ 1,203 ಹುದ್ದೆಗಳ ಭರ್ತಿಗೆ ಶಿಕ್ಷಣ ಇಲಾಖೆಯು ಅರ್ಜಿ ಆಹ್ವಾನಿಸಿತ್ತು. ಅಂದಿನಿಂದ ಈ ವರೆಗೂ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಲೇ ಬಂದಿದೆ. ಜು.8ರಂದು ಆನ್‌ಲೈನ್‌ ಮೂಲಕ ಕೌನ್ಸೆಲಿಂಗ್‌ ನಡೆಸಬೇಕಾಗಿತ್ತು.

ಶಾಸಕ ಪಿಟಿಪಿ ಸೇರಿ ಮೂವರಿಗೆ ಕೋವಿಡ್‌ ಸೋಂಕು

ರಾಜ್ಯ ಸರ್ಕಾರವು ಸದ್ಯದ ಮಟ್ಟಿಗೆ ನೇರ ನೇಮಕಾತಿಗಳನ್ನು ತಡೆಹಿಡಿದಿರುವುದರಿಂದ ಕೌನ್ಸೆಲಿಂಗ್‌ ಮುಂದೂಡಲಾಗಿತ್ತು. ಇದೀಗ ಮುಖ್ಯಮಂತ್ರಿಗಳು ಕೌನ್ಸೆಲಿಂಗ್‌ ನೀಡಲು ಅನುಮೋದನೆ ನೀಡಿರುವುದರಿಂದ ಕೌನ್ಸೆಲಿಂಗ್‌ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

2ನೇ ದಿನ ಕಟ್ಟು​ನಿಟ್ಟಿನ ಲಾಕ್‌ಡೌನ್: 9 ಜಿಲ್ಲೆಗಳಲ್ಲಿ ಬಂದೋಬಸ್ತ್ ಬಿಗಿ ಮಾಡಿದ ಪೊಲೀ​ಸರು

ಕೌನ್ಸೆಲಿಂಗ್‌ ಮುಂದೂಡಿರುವುದನ್ನು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಎಚ್‌.ಡಿ. ಕುಮಾರಸ್ವಾಮಿ ಖಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರು ಗುರುವಾರ ಮುಖ್ಯಮಂತ್ರಿಗಳಿಂದ ಅನುಮೋದನೆ ಪಡೆದು ಇದೀಗ ಕೌನ್ಸೆಲಿಂಗ್‌ ನಡೆಸಲು ನಿರ್ಧರಿಸಿದ್ದಾರೆ.

click me!