ಸರಣಿ ಅಪಘಾತ: ಸ್ಥಳದಲ್ಲೇ ದಂಪತಿ ಸಾವು, ಮಗುವಿಗೂ ಗಂಭೀರ ಗಾಯ, ಅನಾಥವಾದ 14 ತಿಂಗಳ ಕಂದಮ್ಮ..!

By Girish Goudar  |  First Published Sep 13, 2023, 12:48 PM IST

ಅಪಘಾತದ ಬಳಿಕ ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮೃತ ದಂಪತಿ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. 


ಚಿಕ್ಕಮಗಳೂರು(ಸೆ.13):  ಕಾರು, ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್‌ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಸಮೀಪ ಘಟನೆ ನಿನ್ನೆ(ಮಂಗಳವಾರ) ರಾತ್ರಿ ನಡಿದಿದೆ. 

ಶಿವಮೊಗ್ಗ ಮೂಲದ ಸಯ್ಯದ್ ಆಸೀಫ್ (38), ಮಾಜಿನಾ (33) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಬೈಕಿನಲ್ಲಿದ 14 ತಿಂಗಳ ಮಗುವಿಗೆ ಗಂಭೀರವಾದ ಗಾಯಗಳಾಗಿವೆ. 

Tap to resize

Latest Videos

undefined

ಹೆದ್ದಾರಿ ಪಕ್ಕ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಟ್ರಕ್‌, 12 ಮಂದಿಯ ದಾರುಣ ಸಾವು

ಅಪಘಾತದ ಬಳಿಕ ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮೃತ ದಂಪತಿ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

click me!