ಕಾರು ಹುಮನಾಬಾದ್ ಕಡೆಯಿಂದ ಕಲಬುರಗಿ ಕಡೆಗೆ ಬರುತ್ತಿತ್ತು, ಕಲಬುರಗಿಯಿಂದ ಹುಮನಾದ್ ಕಡೆಗೆ ತೆರಳುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಕಲಬುರಗಿ(ಡಿ.12): ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಹೊರವಲಯದ ಸ್ವಾಮಿ ಸಮರ್ಥ ದೇವಸ್ಥಾನದ ಬಳಿ ಇಂದು(ಗುರುವಾರ) ನಡೆದಿದೆ. ಮಹಮದ್ ಶೇಕಿಬ್ ಜಿಲ್ಹಾನಿ (32), ಶೇರಿನ್ ಶೆಕಿಬ್ (28) ಮೃತ ದುರ್ದೈವಿಗಳು.
ಕಾರು ಹುಮನಾಬಾದ್ ಕಡೆಯಿಂದ ಕಲಬುರಗಿ ಕಡೆಗೆ ಬರುತ್ತಿತ್ತು, ಕಲಬುರಗಿಯಿಂದ ಹುಮನಾದ್ ಕಡೆಗೆ ತೆರಳುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಶಿವಮೊಗ್ಗ: ರಿಪ್ಪನ್ ಪೇಟೆ ಬಳಿ ಕಾರು- ಬೈಕ್ ಮಧ್ಯೆ ಅಪಘಾತ, ಓರ್ವ ಯುವಕ ಸಾವು
ಈ ಸಂಬಂಧ ಕಲಬುರಗಿ ಸಂಚಾರಿ 2ರಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.