ಯೋಗೀಶ್‌ ಗೌಡ ಹತ್ಯೆ ಪ್ರಕರಣ: ವಿನಯ್‌ ಜಾಮೀನು ಅರ್ಜಿ, 14ಕ್ಕೆ ತೀರ್ಪು

By Kannadaprabha NewsFirst Published Dec 10, 2020, 9:57 AM IST
Highlights

ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾದ ವಿನಯ ಕುಲಕರ್ಣಿ| ನ.6ರಿಂದಲೇ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ| ದೆಹಲಿಯಿಂದ ವೀಡಿಯೋ ಕಾನ್ಫರೆನ್ಸ್‌ ಮೂಲಕ ಸಿಬಿಐ ಪರ ವಾದ ಮಂಡಿಸಿದ ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಸ್‌.ವಿ.ರಾಜು| 

ಧಾರವಾಡ(ಡಿ.10): ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ವಿನಯ ಕುಲಕರ್ಣಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಬುಧವಾರ ನಡೆದು ವಾದ-ಪ್ರತಿವಾದ ಆಲಿಸಿದ ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯ ತೀರ್ಪನ್ನು ಡಿ.14ರಂದು ಪ್ರಕಟಿಸಲು ಆದೇಶ ಮಾಡಿತು. ಎರಡೂ ಕಡೆಯ ವಕೀಲರ ವಾದವನ್ನು ಆಲಿಸಿದ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿಯ ಮೇಲಿನ ತೀರ್ಪನ್ನು ಕಾಯ್ದಿರಿಸಿ ಡಿ. 14 ಕ್ಕೆ ಆದೇಶ ಪ್ರಕಟಿಸುವುದಾಗಿ ತಿಳಿಸಿತು.

ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ವಿನಯ ಕುಲಕರ್ಣಿ ನ.6ರಿಂದಲೇ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ. ಅವರ ಜಾಮೀನು ಅರ್ಜಿಗೆ ಸಂಬಂಧಿಸಿ ಅವರ ವಕೀಲರ ವಾದಕ್ಕೆ ಸಿಬಿಐ ಪರ ವಕೀಲರು ಬುಧವಾರ ಪ್ರತಿವಾದ ಮಂಡಿಸಿದರು. 

ಯೋಗೇಶಗೌಡ ಗೌಡ ಹತ್ಯೆ ಪ್ರಕರಣ: ಮತ್ತಷ್ಟು ಕೈ ಮುಖಂಡರಿಗೆ ಬಂಧನ ಭೀತಿ!

ದೆಹಲಿಯಿಂದ ವೀಡಿಯೋ ಕಾನ್ಫರೆನ್ಸ್‌ ಮೂಲಕ ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಸ್‌.ವಿ.ರಾಜು ಸಿಬಿಐ ಪರ ವಾದ ಮಂಡನೆ ಮಾಡಿದರು. ವಿನಯ ಕುಲಕರ್ಣಿ ಪರ ವಕೀಲ ಬಾಹುಬಲಿ ಸುಮಾರು ಅರ್ಧ ಗಂಟೆ ವಾದ ಮಂಡಿಸಿದರು. ಎರಡೂ ಕಡೆಯ ವಕೀಲರ ವಾದವನ್ನು ಆಲಿಸಿದ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿಯ ಮೇಲಿನ ತೀರ್ಪನ್ನು ಕಾಯ್ದಿರಿಸಿ ಡಿ. 14 ಕ್ಕೆ ಆದೇಶ ಪ್ರಕಟಿಸುವುದಾಗಿ ತಿಳಿಸಿತು.
 

click me!