ಬೇರೆ ಜಿಲ್ಲೆಯಿಂದ ಬಂದರೆ 10 ದಿನ ಕ್ವಾರಂಟೈನ್‌

By Kannadaprabha News  |  First Published Apr 30, 2021, 11:42 AM IST

ಕೊರೋನಾ ಮಹಾಮಾರಿ ಭಾರೀ ಏರಿಕೆಯಾಗಿದ್ದು ಸಾವು ನೋವುಗಳು ವಿಪರೀತ ಪ್ರಮಾಣದಲ್ಲಿ ಆಗುತ್ತಿದೆ. ಈ ನಿಟ್ಟಿನಲ್ಲೀ ಸೂಕ್ತ ಮುನ್ನೆಚ್ಚರಿಕಾ ಕ್ರಮವಾಗಿ ಕ್ವಾರಂಟೈನ್ ರೂಲ್ಸ್ ಮತ್ತೆ ಆರಂಭ ಮಾಡಲಾಗುತ್ತಿದೆ. 


ಮಡಿಕೇರಿ (ಏ.30): ಕೋವಿಡ್‌​ ಸೋಂಕು ನಿಯಂತ್ರಣ ಸಂಬಂಧ ರಾಜ್ಯ ಸರ್ಕಾರ ಮೇ 12 ರ ಬೆಳಗ್ಗೆ 6 ಗಂಟೆ ವರೆಗೆ ಜನತಾ ಕರ್ಫ್ಯೂ ಜಾರಿ ಮಾಡಿದೆ. 

ಈ ಹಿನ್ನೆಲೆ ಬೇರೆ ಬೇರೆ ರಾಜ್ಯ, ಜಿಲ್ಲೆ ಹಾಗೂ ಪ್ರದೇಶಗಳಿಂದ ಕೊಡಗು ಜಿಲ್ಲೆಗೆ ಅನೇಕ ಜನರು ಆಗಮಿಸಿರುವುದು ಜಿಲ್ಲಾಡಳಿತ ಗಮನಕ್ಕೆ ಬಂದಿದೆ. ಆದ್ದರಿಂದ ಕೊಡಗು ಜಿಲ್ಲೆಗೆ ಬೇರೆ ರಾಜ್ಯ, ಜಿಲ್ಲೆ ಹಾಗೂ ಪ್ರದೇಶಗಳಿಂದ ಆಗಮಿಸುವವರು ಕಡ್ಡಾಯವಾಗಿ 10 ದಿನಗಳ ಕಾಲ ಹೋಂ ಕ್ವಾರಂಟೈನ್‌ ಆಗಬೇಕು.

Tap to resize

Latest Videos

ಮುಂದೆ ಕಾದಿದೆ ದೊಡ್ಡ ಗಂಡಾಂತರ : 5 ಲಕ್ಷ ಐಸಿಯು ಬೇಕು!

 ಜೊತೆಗೆ ಈ ಅವಧಿಯಲ್ಲಿ ಯಾವುದಾರೂ ಕೊರೋನಾ ಸಂಬಂಧಿಸಿದ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಹತ್ತಿರದ ಆರೋಗ್ಯ ಕೇಂದ್ರಕ್ಕೆ ತೆರಳಿ ಪರೀಕ್ಷೆಗೊಳಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್‌ ತಿಳಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!