ವಲಸೆ ಕಾರ್ಮಿಕರಿಗೆ ಸಿಎಂ BSY ಬಹುದೊಡ್ಡ ಮನವಿ, ಬಿಲ್ಡರ್‌ ಸಭೆ ಫಲಿತಾಂಶ

Published : May 05, 2020, 04:34 PM ISTUpdated : May 05, 2020, 04:37 PM IST
ವಲಸೆ ಕಾರ್ಮಿಕರಿಗೆ ಸಿಎಂ BSY ಬಹುದೊಡ್ಡ ಮನವಿ, ಬಿಲ್ಡರ್‌ ಸಭೆ ಫಲಿತಾಂಶ

ಸಾರಾಂಶ

ಬಿಲ್ಡರ್ ಗಳ ಜತೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ/ ವಲಸೆ ಕಾರ್ಮಿಕರ ವಿಚಾರವೂ ಚರ್ಚೆ/ ಅನಗತ್ಯ ಪ್ರಯಾಣ ಯೋಚನೆ ಕೈಬಿಡಿ/ ಬೆಂಗಳೂರಿನಲ್ಲಿಯೇ ಉಳಿಯಿರಿ

ಬೆಂಗಳೂರು(ಮೇ 05) ಬಿಲ್ಡರ್ ಗಳ ಜತೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಡೆಸಿ ಅನೇಕ ವಿಚಾರ ಚರ್ಚೆ ಮಾಡಿದ್ದಾರೆ. ವಲಸೆ ಕಾರ್ಮಿಕರ ವಿಚಾರದ ಬಗ್ಗೆಯೂ ಗಮನ ಹರಿಸಲಾಗಿದೆ. ಕಟ್ಟಡ ನಿರ್ಮಾಣ ಕಾರ್ಯಚಟುವಟಿಕೆ ಶೀಘ್ರ ಆರಂಭ ಮಾಡಲು ತೀರ್ಮಾನಕ್ಕೆ ಬರಲಾಗಿದೆ.

ಬಿಲ್ಡರುಗಳ ಜೊತೆ ಮುಖ್ಯಮಂತ್ರಿ ಸಭೆ ನಡೆಸಿದ ಪ್ರಮುಖ ಅಂಶಗಳು ಇಲ್ಲಿವೆ

1.      ಇಂದು ಬಿಲ್ಡರುಗಳ ಸಭೆ ನಡೆಸಿ, ವಲಸೆ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಾಯಿತು.

2.     ರಾಜ್ಯದಲ್ಲಿ ಕೋವಿಡ್ 19 ಪರಿಸ್ಥಿತಿ ಇತರ ರಾಜ್ಯಗಳಿಗೆ ಹೋಲಿಸಿದರೆ, ಹತೋಟಿಯಲ್ಲಿದೆ. ಈ ನಿಟ್ಟಿನಲ್ಲಿ ಕೆಂಪು ವಲಯ ಹೊರತು ಪಡಿಸಿ, ವ್ಯಾಪಾರ, ಕಟ್ಟಡ ನಿರ್ಮಾಣ ಕಾಮಗಾರಿ ಮತ್ತು ಕೈಗಾರಿಕಾ ಚಟುವಟಿಕೆಗಳನ್ನು ಮತ್ತೆ ಪ್ರಾರಂಭಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರ ಅನಗತ್ಯ ಪ್ರಯಾಣವನ್ನು ನಿಯಂತ್ರಿಸಬೇಕಾಗಿದೆ ಎಂದು ಅವರಿಗೆ ಮನವರಿಕೆ ಮಾಡಲಾಯಿತು.

ಊರಿಗೆ ತೆರಳುವ ಕಾರ್ಮಿಕರಿಗೆ ಮೂರು ದಿನ ಉಚಿತ ಬಸ್

3.     ಬಿಲ್ಡರುಗಳು ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸಿ,, ಅನುಕೂಲ ಕಲ್ಪಿಸಲಾಗಿದೆ. ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

4.     ಕಾರ್ಮಿಕರು ವದಂತಿಗಳಿಗೆ ಕಿವಿಗೊಡದೆ, ಅನಗತ್ಯ ಪ್ರಯಾಣ ಮಾಡುವ ಯೋಜನೆ ಕೈಬಿಡಬೇಕಾಗಿದೆ. ಈ ರೀತಿ ಆತಂಕಕ್ಕೆ ಒಳಗಾಗಿರುವ ಕಾರ್ಮಿಕರ ಮನವೊಲಿಸಲು ಸಚಿವರಿಗೆ ಸೂಚಿಸಲಾಗಿದೆ.

5.     ನೇಕಾರರ ಸಮಸ್ಯೆಗಳ ಕುರಿತು ಸಹ ಚರ್ಚೆ ನಡೆಸಲಾಯಿತು.

6.     ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು.

PREV
click me!

Recommended Stories

ನನಗೆ ಎಚ್ಚರಿಕೆ ಕೊಡೋ ಮುನ್ನ ಹುಷಾರ್, ಕಾಮನ್‌ಸೆನ್ಸ್ ಇಟ್ಟುಕೊಂಡು ಡೀಲ್ ಮಾಡಿ, ಪತ್ರ ಬರೆದವನಿಗೆ ಡಿಕೆಶಿ ವಾರ್ನಿಂಗ್!
5 ಸಾವಿರ ಕೊಡ್ತೀನಿ ರೂಮ್‌ಗೆ ಬಾ ಅಂದ್ರು? ಬ್ರಹ್ಮಾನಂದ ಗುರೂಜಿಯ ವಿಡಿಯೋ ವೈರಲ್