ಕೋವಿಡ್‌ನಿಂದ ಲಕ್ಷ್ಮೀ ಹೆಬ್ಬಾಳ್ಕರ್ ಗುಣಮುಖ : ಆಸ್ಪತ್ರೆಯಿಂದ ಡಿಸ್ಚಾರ್ಜ್

Kannadaprabha News   | Asianet News
Published : Apr 26, 2021, 03:50 PM ISTUpdated : Apr 28, 2021, 01:40 PM IST
ಕೋವಿಡ್‌ನಿಂದ ಲಕ್ಷ್ಮೀ ಹೆಬ್ಬಾಳ್ಕರ್ ಗುಣಮುಖ : ಆಸ್ಪತ್ರೆಯಿಂದ ಡಿಸ್ಚಾರ್ಜ್

ಸಾರಾಂಶ

ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಕುಟುಂಬ ಇಂದು ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಕುಟುಂಬ ಚಿಕಿತ್ಸೆ ಪಡೆದುಕೊಂಡು ಮರಳಿದೆ. 

ಬೆಳಗಾವಿ (ಏ.26):  ಕೊರೋನಾ ಸೋಂಕಿಗೆ ಒಳಗಾಗಿದ್ದ ಶಾಸಕಿ  ಲಕ್ಷ್ಮೀ ಹೆಬ್ಬಾಳ್ಕರ್ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 

ಕೊರೊನಾ ಪಾಸಿಟಿವ್ ಹಿನ್ನೆಲೆ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಕುಟುಂಬದ ಐವರು ಗುಣ ಮುಖರಾಗಿ ಇಂದು ಮನೆಗೆ ಮರಳಿದ್ದಾರೆ. 

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಅವರ ತಾಯಿ, ಇಬ್ಬರು ಸಹೋದರಿಯರು ಹಾಗೂ ಅಡುಗೆ ಮಾಡುವ ವ್ಯಕ್ತಿಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇಲ್ಲಿನ ಡಾ.ಮಾಧವ ಪ್ರಭು ನೇತೃತ್ವದ ವೈದ್ಯಕೀಯ ತಂಡ ಇವರಿಗೆ ಚಿಕಿತ್ಸೆ ನೀಡಿತ್ತು.

ಕೈ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮನೆಯ 8 ಮಂದಿಗೆ ಕೊರೋನಾ

ಏ.15 ರಂದು‌ ಶಾಸಕಿ ಹೆಬ್ಬಾಳ್ಕರ್ ಸೇರಿ 8 ಜನ ಕುಟುಂಬ ಸದಸ್ಯರು, ಕೆಲಸಗಾರರಿಗೆ ಸೋಂಕು ತಗುಲಿತ್ತು.  ಆರಂಭದಲ್ಲಿ ಹೋಮ್ ಐಸೋಲೇಷನನಲ್ಲಿ ಚಿಕಿತ್ಸೆ ಪಡೆದಿದ್ದ ಹೆಬ್ಬಾಳ್ಕರ್ ಕುಟುಂಬ ಕಳೆದ ಆರು ದಿನಗಳ ಹಿಂದೆ ರೋಗ ಗುಣಲಕ್ಷಣ ಹೆಚ್ಚಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿತ್ತು.

14 ದಿನ ಕರ್ನಾಟಕ ಲಾಕ್‌ಡೌನ್: ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ ..

ಆರು ದಿನಗಳ ಚಿಕಿತ್ಸೆ ಬಳಿಕ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದೆ. ಡಿಸ್ಚಾರ್ಜ್ ಬಳಿಕ ಒಂದು ವಾರಗಳ ಕಾ‌ಲ ಹೋಮ್ ಕ್ವಾರಂಟೈನ್‌ನಲ್ಲಿರಲು ವೈದ್ಯರು ಸೂಚನೆ ನೀಡಿದ್ದಾರೆ.

PREV
click me!

Recommended Stories

ಬಿರಿಯಾನಿ ಹೋಟೆಲ್ ಕುಟುಂಬದ ಸಾಮೂಹಿಕ ಆತ್ಮ*ಹತ್ಯೆ ಕೇಸಿಗೆ ಟ್ವಿಸ್ಟ್; ವಿಷ ಸೇವಿಸದ ಅಜ್ಜಿ ಸತ್ತಿದ್ಹೇಗೆ!
New Hate-Speech Law: ದ್ವೇಷ ಭಾಷಣ ತಡೆಗೆ ಹೊಸ ಕಾನೂನು: ಈ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ ಎಂದ ಯತ್ನಾಳ್!