ಶಿವರಾತ್ರಿ ಬೆನ್ನಲ್ಲೇ ಶಿವಮೊಗ್ಗಕ್ಕೆ ಬಿಗ್ ಶಾಕ್ ಎದುರಾಗಿದೆ. ದುಬೈನಿಂದ ಬಂದಿದ್ದ ವ್ಯಕ್ತಿಯೋರ್ವರಿಗೆ ಸೌತ್ ಆಫ್ರಿಕಾ ವೈರಸ್ ಪತ್ತೆಯಾಗಿದೆ.
ಶಿವಮೊಗ್ಗ (ಮಾ.11): ಶಿವರಾತ್ರಿ ಹಬ್ಬಕ್ಕೆ ಶಿವಮೊಗ್ಗಕ್ಕೆ ಬಿಗ್ ಶಾಕ್ ಎದುರಾಗಿದೆ.
ದಕ್ಷಿಣ ಆಫ್ರಿಕಾದ ರೂಪಾಂತರ ಕೊರೊನಾ ವೈರಸ್ ಶಿವಮೊಗ್ಗದಲ್ಲಿ ಪತ್ತೆಯಾಗಿದೆ. ಫೆಬ್ರವರಿ 21 ರಂದು ದುಬೈನಿಂದ ಶಿವಮೊಗ್ಗಕ್ಕೆ ಹಿಂದಿರುಗಿದ್ದ 58 ವರ್ಷದ ವ್ಯಕ್ತಿಯೊಬ್ಬರಿಗೆ ರೂಪಾಂತರ ಕೊರೊನಾ ವೈರಸ್ ದೃಢಪಟ್ಟಿದೆ ಎಂದು ಡಿಹೆಚ್ಒ ಡಾ.ರಾಜೇಶ್ ಸುರಗಿಹಳ್ಳಿ ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಮತ್ತೆ ಏರುತ್ತಿದೆ ಕೊರೋನಾ ಸೋಂಕಿನ ಪ್ರಮಾಣ: ಇರಲಿ ಎಚ್ಚರ ...
ಶಿವಮೊಗ್ಗದ ಜೆಪಿ ನಗರದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. 18 ದಿನಗಳ ನಂತರ ಸೋಂಕು ಪರೀಕ್ಷಾ ವರದಿ ಬಂದಿದ್ದು, ಈಗಾಗಲೇ 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಪುನಃ ಪರೀಕ್ಷೆ ಮಾಡಿದಾಗ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅಸ್ಪತ್ರೆ ಗೆ ದಾಖಲು ಮಾಡಲಾಗಿದೆ.
ಸೋಂಕಿತ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತನ ಪ್ರಾಥಮಿಕ ಸಂಪರ್ಕಕ್ಕೆ ಬಂದ 9 ಜನರ ಪೈಕಿ ಮೂವರಿಗೆ ಅಸ್ಪತ್ರೆ ಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಸೋಂಕಿತನ ಪತ್ನಿ ಮತ್ತು ಮಕ್ಕಳಿಗೆ ಅಸ್ಪತ್ರೆ ಯಲ್ಲಿ ಕ್ವಾರಂಟೈನ್ ಮಾಡಲಾಗಿದ್ದು,
ಉಳಿದ 6 ಜನರಿಗೆ ಹೋಮ್ ಕ್ವಾರಂಟೈನ್ ಮಾಡಲಾಗಿದೆ.